ಬೆಂಗಳೂರು,ಜ.27- ಪರಿಸರ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆ ವಿಜಯ ಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಧ್ಯಕ್ಷತೆಯ ಸಿದ್ದಶ್ರೀ ಸೌಹಾರ್ಧ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡುವ ಮೂಲಕ ಯತ್ನಾಳ್, ಸರ್ಕಾರದ ನಡೆಯನ್ನು ವಿರೋಧಿಸಿ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ. ರೈತರಿಗೆ ನೆರವಾಗಲು ಹಾಗೂ ಹಿಂದುಳಿದ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಸ್ಥಾಪಿಸಲಾಗಿದೆ. ಕಾನೂನು ರೀತ್ಯಾ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲಾಗುತ್ತದೆ. ಈ ನೋಟಿಸ್, ಆದೇಶಗಳಿಗೆ ಹೆದರುವ ಜಾಯಮಾನ ನನ್ನದಲ್ಲ. ಕಾಂಗ್ರೆಸ್ ಆಡಳಿತದ ವಿರುದ್ಧ ಹೋರಾಟ ಮಾಡಲು ಶಕ್ತಿ ಇಮ್ಮಡಿಯಾಗಿದೆ ಎಂದಿದ್ದಾರೆ.
ಇಂಡಿಯಾ ಬಣದಲ್ಲಿ ಯಾರಿಗೂ ನ್ಯಾಯ ಸಿಗುತ್ತಿಲ್ಲ : ಅನುರಾಗ್ ಠಾಕೂರ್
ಕೈಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬುದು ಗೊತ್ತಿರುವ ವಿಷಯವೇ. ಬಡವರಿಗೆ, ದೀನ-ದಲಿತರಿಗೆ, ಪಕ್ಷದ ಕಾರ್ಯಕರ್ತರಿಗೆ ಸಹಾನೂಭೂತಿಯಿಂದ ಕಾಣುತ್ತ ಬಂದಿರುವ ನಾನು, ನನ್ನ ಮಿತಿಯಲ್ಲಿ ನನ್ನದೇ ಕಾರ್ಖಾನೆಗಳಲ್ಲಿ ನೂರಾರು ಜನರಿಗೆ ಉದ್ಯೋಗ ಸೃಷ್ಟಿಸಿದ್ದೇನೆ. ಜಿಲ್ಲೆಯ ಆರ್ಥಿಕತೆಯನ್ನು ಸುಧಾರಿಸಲು ನನ್ನ ಅಳಿಲು ಸೇವೆಯೂ ಇದೆ. ರಾಜಕೀಯ ಒತ್ತಡಕ್ಕೆ ಮಣಿದು ನನ್ನ ಕಾರ್ಖಾನೆಯನ್ನು ಮುಚ್ಚಿಸುವುದರಿಂದ ಇವರು ಏನನ್ನೂ ಕೂಡ ಸಾಸಲು ಸಾಧ್ಯವಿಲ್ಲ. ಕಾರ್ಖಾನೆ ಮತ್ತೆ ತೆರೆಯುವುದು ನಿಶ್ಚಿತ, ಈ ನಿಟ್ಟಿನಲ್ಲಿ ಕಾನೂನು ಹೋರಾಟ ಮಾಡುತ್ತೇನೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಒಡೆತನದ ಶುಗರ್ ಫ್ಯಾಕ್ಟರಿ ಬಂದ್‍ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಶುಗರ್ ಫ್ಯಾಕ್ಟರಿ ಮತ್ತು ಏಥೆನಾಲ್ ಘಟಕಕ್ಕೆ ಬೀಗ ಹಾಕಲು ಆದೇಶಿಸಲಾಗಿದೆ. ಕಾರ್ಖಾನೆಯ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬೀಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ