Sunday, October 13, 2024
Homeಜಿಲ್ಲಾ ಸುದ್ದಿಗಳು | District Newsಬೈಕ್‌ಗೆ ಕೆಎಸ್‌‍ಆರ್‌ಟಿಸಿ ಬಸ್‌‍ ಡಿಕ್ಕಿಯಾಗಿ ಇಬ್ಬರ ದುರ್ಮರಣ

ಬೈಕ್‌ಗೆ ಕೆಎಸ್‌‍ಆರ್‌ಟಿಸಿ ಬಸ್‌‍ ಡಿಕ್ಕಿಯಾಗಿ ಇಬ್ಬರ ದುರ್ಮರಣ

ಚಾಮರಾಜನಗರ, ಜು.4- ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬರುತ್ತಿದ್ದ ಕೆಎಸ್‌‍ಆರ್‌ಟಿಸಿ ಬಸ್‌‍ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಸಂತೆಮರಹಳ್ಳಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಮರವಾಡಿ ಗ್ರಾಮದ ಕಿಶೋರ್‌(48) ಮತ್ತು ಮಹೇಶ್‌(40) ಮೃತಪಟ್ಟವರು.

ಇವರಿಬ್ಬರು ಬೈಕ್‌ನಲ್ಲಿ ಹೋಗುತ್ತಿದ್ದಾಗ ಚಾಮರಾಜನಗರದ ಬಸವಹಟ್ಟಿ ಗೇಟ್‌ ಬಳಿ ಕೆಎಸ್‌‍ಆರ್‌ಟಿಸಿ ಬಸ್‌‍ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡರು.ತಕ್ಷಣ ಅವರಿಬ್ಬರನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಪರೀಕ್ಷಿಸಿ ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಸುದ್ದಿ ತಿಳಿದು ಸಂತೇಮರಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News