ಬೆಂಗಳೂರು, ಜ.1- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮೊದಲ ಅಂತರ ನಗರ ವಿದ್ಯುತ್ ಚಾಲಿತ (ಎಲೆಕ್ಟ್ರಿಕ್) ಬಸ್ಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಚಾಲನೆ ನೀಡಿದರು.
ನಿಗಮದ ಕೇಂದ್ರ ಕಚೇರಿ ಆವರಣದಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಬಸ್ಸಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಿಗಮವು ಭಾರತ ಸರ್ಕಾರದ ಮೇಕ್ ಇನ್ ಇಂಡಿಯಾ ವಿದ್ಯುತ್ ಬಸ್ ಫೇಮï-2 ಯೋಜನೆ ಅಡಿಯಲ್ಲಿ 50 ಅಂತರ ನಗರ ಹವಾ ನಿಯಂತ್ರಿತ ವಿದ್ಯುತ್ ಚಾಲಿತ ಬಸ್ಸುಗಳನ್ನು ಮುಂದಿನ ದಿನಗಳಲ್ಲಿ ಕಾರ್ಯಾಚರಣೆಗೊಳಿಸಲು ಉದ್ದೇಶಿಸಿದೆ.
ದೇಶದ ವಿದ್ಯುತ್ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಮುಂಚೂಣಿಯಲ್ಲಿರುವ ಒಲೆಕ್ಟ್ರಾ ಗ್ರೀನ್ಟೆಕ್ ಕಂಪನಿ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಶೂನ್ಯ ಮಾಲಿನ್ಯ ಅಂತರ್ ನಗರ ಪ್ರಯಾಣಕ್ಕೆ ಚಾಲನೆ ನೀಡಿವೆ.
ವರ್ಷಪೂರ್ತಿ ವರ್ಚಸ್ಸು ಕಾಪಾಡಿಕೊಂಡರೆ ರಾಹುಲ್ ರಾಜಕೀಯವಾಗಿ ಯಶಸ್ವಿ
ನಿಗಮವು ತನ್ನ ವಿದ್ಯುತ್ ವಾಹನಗಳಿಗೆ ಸ್ಪರ್ಧೆಯ ಮೂಲಕ ಸಾರ್ವಜನಿಕರಿಂದ ಸ್ವೀಕರಿಸಿದ ಹೆಸರುಗಳ ಮೂಲಕ ಇವಿ ಪವರ್ ಪ್ಲಸ್ ಟ್ಯಾಗ್ ಲೈನ್ ಅತ್ಯುತ್ತಮ ಅನುಭವ ಎಂದು ಹೆಸರಿಸಲಾಗಿದೆ . ಪ್ರಾಯೋಗಿಕ ಯಶಸ್ವಿ ಕಾರ್ಯಾಚರಣೆ ನಂತರದಲ್ಲಿ ಈ ಬಸ್ಸುಗಳನ್ನು ಬೆಂಗಳೂರಿನಿಂದ ಮೈಸೂರು, ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ , ಚಿಕ್ಕಮಗಳೂರು ಮಾರ್ಗಗಳಲ್ಲಿ ಕಾರ್ಯಾಚರಣೆಗೊಳಿಸಲು ಯೋಜಿಸಲಾಗಿದೆ.
ವಿದ್ಯುತ್ ವಾಹನಗಳ ಚಾರ್ಚಿಂಗ್ ಕೇಂದ್ರವನ್ನು ಈಗಾಗಲೇ ಬೆಂಗಳೂರು ಮತ್ತು ಮೈಸೂರಿನಲ್ಲಿ ಈಗಾಗಲೇ ಸ್ಥಾಪಿಸಲಾಗಿದೆ. ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ , ಚಿಕ್ಕಮಗಳೂರು, ಈ ಸ್ಥಳಗಳಲ್ಲಿ ಚಾರ್ಚಿಂಗ್ ಕೇಂದ್ರ ಸ್ಥಾಪನೆ ಕಾರ್ಯ ಪ್ರಗತಿಯಲ್ಲಿದೆ.
ನಿಗಮವು ಸಿಬ್ಬಂದಿಗಳಿಗೆ 1 ಕೋಟಿ ರೂ.ಮೊತ್ತದ ಅಪಘಾತ ವಿಮಾ ಯೋಜನೆಯನ್ನು ಜಾರಿಗೊಳಿಸಿದೆ. ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ವತಿಯಿಂದ ಪ್ರೀಮಿಯಂ ರಹಿತ 50 ಲಕ್ಷ ರೂ.ಗಳ ವಿಮೆ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆ£್ಸï ರವರಿಂದ ವಾರ್ಷಿಕ 885 ರೂ. ಪ್ರೀಮಿಯಂ (ನೌಕರರಿಂದ) ಪಾವತಿಯ ಮೇರೆಗೆ 50 ಲಕ್ಷಗಳ ರೂ.ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಅಪಘಾತ ವಿಮಾ ಯೋಜನೆಯ ಒಡಂಬಡಿಕೆಯನ್ನು ಎಸ್ಬಿಐನೊಂದಿಗೆ ಅಕ್ಟೋಬರ 19ರಂದು , ಯುನೈಟೆಡ್ ಇಂಡಿಯಾ ಇನ್ಸುರೆನಸ್ ಕಂಪನಿಯೊಂದಿಗೆ ನವೆಂಬರ್ 14 ರಂದು ಒಡಂಬಡಿಕೆಯಾಗಿರುತ್ತದೆ ನಿಗಮದ ಪ್ರಕಟಣೆ ತಿಳಿಸಿದೆ.
ನಂದಿನಿ ತಂಟೆಗೆ ಬಂದರೆ ಬಿಜೆಪಿ ಭಸ್ಮ : ಹೆಚ್.ಡಿ.ಕುಮಾರಸ್ವಾಮಿ
ಕೆಸ್ಆರ್ಟಿಸಿ ಅಧ್ಯಕ್ಷ ಎಂ. ಚಂದ್ರಪ್ಪ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬು ಕುಮಾರ್, ಇತರ ಪ್ರಮುಖ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.