ಕೆಎಸ್ಆರ್‌ಟಿಸಿ ವಿದ್ಯುತ್ ಚಾಲಿತ ಬಸ್ ಪ್ರಾಯೋಗಿಕ ಸಂಚಾರ

Social Share

ಬೆಂಗಳೂರು, ಜ.13- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತರ ನಗರ ಹವಾ ನಿಯಂತ್ರಿತ ವಿದ್ಯುತ್ ಚಾಲಿತ ಬಸ್ಸುಗಳ ಸೇವೆ ಒದಗಿಸಲಿದ್ದು, ಇಂದು ಬೆಂಗಳೂರಿನಿಂದ ರಾಮನಗರದವರೆಗೆ ಇವಿ ಪವರ್ ಪ್ಲಸ್ ಪ್ರಾಯೋಗಿಕ ಸಂಚಾರ ನಡೆಸಲಾಯಿತು.

ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾ ವಿದ್ಯುತ್ ಬಸ್ ಫೇಮï-2 ಯೋಜನೆ ಅಡಿಯಲ್ಲಿ 50 ಅಂತರ ನಗರ ಹವಾ ನಿಯಂತ್ರಿತ ವಿದ್ಯುತ್ ಚಾಲಿತ ಬಸ್‍ಗಳನ್ನು ಕೆಎಸ್‍ಆರ್ ಟಿಸಿ ಕಾರ್ಯಾಚರಣೆಗೊಳಿಸಲಿದೆ. ಈ ಪ್ರಾಯೋಗಿಕ ಯಶಸ್ವಿ ಕಾರ್ಯಾಚರಣೆ ನಂತರ ವಿದ್ಯುತ್ ಚಾಲಿತ ಬಸ್‍ಗಳನ್ನು ಬೆಂಗಳೂರಿನಿಂದ ಮೈಸೂರು, ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಮಾರ್ಗಗಳಲ್ಲಿ ಕಾರ್ಯಾಚರಣೆಗೊಳಿಸಲು ಯೋಜಿಸಲಾಗಿದೆ.

ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ : ಸಚ್ಚಿದಾನಂದ

ವಿದ್ಯುತ್ ವಾಹನಗಳ ಚಾರ್ಚಿಂಗ್ ಕೇಂದ್ರವನ್ನು ಈಗಾಗಲೇ ಬೆಂಗಳೂರು ಮತ್ತು ಮೈಸೂರಿನಲ್ಲಿ ಸ್ಥಾಪಿಸಲಾಗಿದೆ. ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರುಗಳಲ್ಲಿ ಚಾರ್ಚಿಂಗ್ ಕೇಂದ್ರ ಸ್ಥಾಪನೆ ಪ್ರಗತಿಯಲ್ಲಿದೆ ಎಂದು ಕೆಎಸ್‍ಆರ್‍ಟಿಸಿ ತಿಳಿಸಿದೆ.

ksrtc, electric, bus, trial, run,

Articles You Might Like

Share This Article