ಬೆಂಗಳೂರು : ವೀಕೆಂಡ್ ಕಫ್ರ್ಯೂ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಅನುಗುಣವಾಗಿ ಕೆಎಸ್ಆರ್‌ಟಿಸಿ ಬಸ್ ಸಂಚಾರ ಇರಲಿದೆ. ರಾಜ್ಯ ಸರ್ಕಾರ ಈಗಾಗಲೇ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿರುವ ನಡುವೆ ಸಾರಿಗೆ ನಿಗಮಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಈ ಸಂಜೆಯೊಂದಿಗೆ ಮಾತನಾಡಿದ ಕೆಎಸ್‍ಆರ್‍ಟಿಸಿಯ ಅಕಾರಿಗಳು, ಈಗಾಗಲೇ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದೆ ಪ್ರಯಾಣಿಕರ ಅನುಕೂಲ ಮತ್ತು ತುರ್ತು ಸೇವೆಗಳಿಗೆ ಎಂದಿನಂತೆ ಕೆಎಸ್ ಆರ್ ಟಿಸಿ ಸಂಚರಿಸಲಿದೆ ಎಂದು ತಿಳಿಸಿದ್ದಾರೆ.ಮಾಸ್ಕ್ ಕಡ್ಡಾಯ, ಲಸಿಕೆ ಪಡೆದಿರುವುದು ಸೇರಿದಂತೆ ಇನ್ನಿತರ ಕ್ರಮಗಳನ್ನು ಕೈಗೊಳ್ಳಲು ಚರ್ಚೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ಸೀಟ್ ಬುಕ್ ಮಾಡಿರುವ ಪ್ರಯಾಣಿಕರಿಗೆ ಸೇವೆ ಒದಗಿಸಲು ಕೆಎಸ್‍ಆರ್‍ಟಿಸಿ ಬದ್ಧವಾಗಿದೆ. ಆದರೆ ಕೆಲವೊಂದು ಬದಲಾವಣೆಗಳು ಕೂಡ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
