Saturday, August 23, 2025
Homeರಾಜ್ಯಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌‍ಆರ್‌ಟಿಸಿಯಿಂದ 1500 ವಿಶೇಷ ಬಸ್‌‍ ಸೇವೆ

ಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌‍ಆರ್‌ಟಿಸಿಯಿಂದ 1500 ವಿಶೇಷ ಬಸ್‌‍ ಸೇವೆ

KSRTC to operate 1500 special buses for Gauri-Ganesh festival

ಬೆಂಗಳೂರು,ಆ.23- ಗೌರಿ-ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ 1500 ವಿಶೇಷ ಬಸ್‌‍ ವ್ಯವಸ್ಥೆ ಕಲ್ಪಿಸಿದೆ.ಹಬ್ಬದ ಸಂದರ್ಭದಲ್ಲಿ ಉಂಟಾಗುವ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಇದೇ 25 ಮತ್ತು 26 ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಹಾಗೂ 27 ಮತ್ತು 31 ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಈ ವಿಶೇಷ ಬಸ್‌‍ಗಳು ಸಂಚರಿಸಲಿವೆ.

ಹಬ್ಬಕ್ಕೆ ಊರಿಗೆ ತೆರಳುವವರ ಸಂಖ್ಯೆ ಅಧಿಕವಾಗಿರುವುದರಿಂದ ಈ ವಿಶೇಷ ಬಸ್‌‍ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೆಎಸ್‌‍ಆರ್‌ಟಿಸಿ ತಿಳಿಸಿದೆ.ಕರ್ನಾಟಕ ಸಾರಿಗೆ, ರಾಜಹಂಸ, ಸ್ಲೀಪರ್‌ಕೋಚ್‌, ಐರಾವತ, ಐರಾವತ ಕ್ಲಬ್‌ಕ್ಲಾಸ್‌‍, ಇವಿ ಪವರ್‌ ಪ್ಲಸ್‌‍, ಅಂಬಾರಿ ಕ್ಲಬ್‌ ಕ್ಲಾಸ್‌‍, ಅಂಬಾರಿ ಉತ್ಸವ್‌ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‌‍ಗಳ ಸಂಚಾರ ಇರಲಿದೆ.

ಯಾವ ನಿಲ್ದಾಣದಿಂದ, ಎಲ್ಲಿಗೆ ಬಸ್‌‍ಗಳು :
ಕೆಂಪೇಗೌಡ ಬಸ್‌‍ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ, ವಿಜಯವಾಡ, ಹೈದ್ರಾಬಾದ್‌ ಸೇರಿದಂತೆ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌‍ಗಳ ಸೇವೆ ದೊರೆಯಲಿದೆ.

ಮೈಸೂರು ಬಸ್‌‍ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜ್‌ಪೇಟೆ, ಕುಶಾಲ್‌ನಗರ, ಮಡಿಕೇರಿ ಮಾರ್ಗದ ಕಡೆ ಬಸ್‌‍ಗಳು ಸಂಚರಿಸಲಿವೆ.ತಮಿಳುನಾಡು ಮತ್ತು ಕೇರಳ ಕಡೆಗೆ ಮಧುರೈ, ಕುಂಭಕೋಣಂ, ಚನ್ನೈ, ಕೊಯಮೊತ್ತೂರ್‌, ತಿರುಚಿ, ಪಾಲ್ಕಾಡ್‌, ತ್ರಿಶೂರ್‌, ಏರ್ನಾಕುಲಂ, ಕೋಯಿಕೋಡ್‌, ಕ್ಯಾಲಿಕಟ್‌ ಮುಂತಾದ ಸ್ಥಳಗಳಿಗೆ ತೆರಳುವ ಪ್ರತಿಷ್ಠಿತ ಸಾರಿಗೆಗಳು ಶಾಂತಿನಗರದಲ್ಲಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌‍ ನಿಲ್ದಾಣದಿಂದ ಸಂಚರಿಸಲಿವೆ.

ಬುಕ್ಕಿಂಗ್‌ ಪ್ರಾರಂಭ :
ಹೆಚ್ಚುವರಿ ಬಸ್‌‍ಗಳಲ್ಲಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ಕರ್ನಾಟಕ ಮತ್ತು ಹೊರರಾಜ್ಯಗಳ ಬುಕ್ಕಿಂಗ್‌ ಕೌಂಟರ್‌ಗಳಲ್ಲಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು.ಈ ಟಿಕೆಟ್‌ ಬುಕ್ಕಿಂಗ್‌ ಅನ್ನು ಡಿಡಿಡಿ.್ಟಠ್ಚಿ.್ಟ್ಞಠಿ.ಜಟ.ಜ್ಞಿ ವೆಬ್‌ಸೈಟ್‌ ಮುಖಾಂತರ ಮಾಡಬಹುದಾಗಿದೆ.

4 ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ಗಳನ್ನು ಕಾಯ್ದಿರಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ ದೊರೆಯಲಿದೆ. ಜೊತೆಗೆ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ ಅನ್ನು ಒಟ್ಟಿಗೆ ಕಾಯ್ದಿರಿಸಿದರೆ ಶೇ.10 ರಷ್ಟು ರಿಯಾಯಿತಿ ನೀಡಲಾಗುವುದು. ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿರುವ ಎಲ್ಲಾ ತಾಲ್ಲೂಕು, ಜಿಲ್ಲಾ ಕೇಂದ್ರಗಳ ಬಸ್‌‍ ನಿಲ್ದಾಣಗಳಿಂದ ಪ್ರಯಾಣಿಕರ ಹಾಗೂ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಬಸ್‌‍ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್‌‍ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

RELATED ARTICLES

Latest News