ಸಾರಿಗೆ ನಿಗಮಗಳ ಸಿಬ್ಬಂದಿಗಳ ವೇತನ ಪರಿಷ್ಕರಣೆ

Social Share

ಬೆಂಗಳೂರು,ಸೆ.16-ಕೆಎಸ್ಆರ್‌ಟಿಸಿ ಸೇರಿದಂತೆ ರಾಜ್ಯದ ಸಾರಿಗೆ ನಿಗಮಗಳ ಸಿಬ್ಬಂದಿಗಳ ವೇತನ ಪರಿಷ್ಕರಣೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.

ವಿಧಾನಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರಾದ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2016ರಲ್ಲಿ ವೇತನ ಪರಿಷ್ಕರಣೆಯಾಗಿದೆ. ಆನಂತರ ಪರಿಷ್ಕರಣೆಯಾಗಿಲ್ಲ ಎಂಬುದು ತಮ್ಮ ಗಮನಕ್ಕೆ ಬಂದಿದೆ.

2021ರಲ್ಲಿ ಸಾರಿಗೆ ನೌಕರರು ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮಾಡಿದ್ದರು. ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆಯಾಗಬೇಕಿತ್ತು. ಹಲವು ವರ್ಷದಿಂದ ಇದು ನೆನೆಗುದಿಗೆ ಬಿದ್ದಿರುವುದು ನಮ್ಮ ಗಮನದಲ್ಲಿದ್ದು, ಶೀಘ್ರವೇ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗಿದೆ ಎಂದರು.

ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ಸರ್ಕಾರ ಸುಮಾರು 12 ಸಾವಿರ ಕೋಟಿಗೂ ಹೆಚ್ಚಿನ ನೆರವು ನೀಡಿದೆ. ಕೋವಿಡ್ ವೇಳೆಯೂ ಸಿಬ್ಬಂದಿಗೆ ವೇತನ ನೀಡಲಾಗಿದೆ. ಪ್ರತಿ ದಿನ 90 ಲಕ್ಷ ಪ್ರಯಾಣಿಕರು ನಿಗಮದ ಬಸ್‍ಗಳಲ್ಲಿ ಪ್ರಯಾಣಿಸುತ್ತಾರೆ. 4 ಲಕ್ಷ ರೂ.ಗಳ ಮೊತ್ತದಲ್ಲಿ ಡೀಸೆಲ್ ಖರೀದಿ ಮಾಡಲಾಗುತ್ತಿದೆ ಎಂದು ವಿವರಿಸಿದರು.

Articles You Might Like

Share This Article