ಪ್ರವಾಸೊದ್ಯಮ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Spread the love

ಕರ್ನಾಟಕ ರಾಜ್ಯ ಪ್ರವಾಸೊದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 04-03-2020 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 20-03-2020ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳ ಅನುಗುಣವಾಗಿ 7ನೇ ತರಗತಿ, 10ನೇ ತರಗತಿ, ಪಿಯುಸಿ, ಡಿಪ್ಲೊಮ, ಬಿ.ಕಾಂ, ಬಿಬಿಎ ವಿದ್ಯಾರ್ಹತೆ ಪಡೆದಿರಬೇಕು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ತಮ್ಮ ಸ್ವವಿವರವನ್ನು ಭರ್ತಿ ಮಾಡಿ, ವಿದ್ಯಾರ್ಹತೆ ಮತ್ತು ಸೇವಾ ಅನುಭವ ದಾಖಲೆಗಳು ಮತ್ತು ಇತ್ತೀಚಿನ ಭಾವಚಿತ್ರದೊಂದಿಗೆ ದಿನಾಂಕ 20-03-2020 ರೊಳಗೆ ಈ ಕೆಳಕಂಡ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆ ವಿಳಾಸ : ವ್ಯವಸ್ಥಾಪಕರು (ಆಡಳಿತ), ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿ, ಕಾರ್ಯನಿರ್ವಾಹಕ ಕಛೇರಿ, ನೆಲಮಹಡಿ, ಯಶವಂತಪುರ ಟಿಟಿಎಂಸಿ, ಬಿ.ಎಂ.ಟಿ.ಸಿ ಬಸ್ ನಿಲ್ದಾಣ, ಯಶವಂತಪುರ ವೃತ್ತ, ಬೆಂಗಳೂರು – 560022.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 20.03.2020, ಹುದ್ದೆಗಳ ಸಂಪೂರ್ಣ ವಿವರ, ಅಗತ್ಯ ಕೌಶಲ್ಯ ಹಾಗೂ ಸ್ವವಿವರದ ನಮೂನೆಗಳು ನಿಗಮದ ಅಧಿಕೃತ ವೆಬ್‌ಸೈಟ್ www.kstdc.co ರಲ್ಲಿ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-43344334 ಮೂಲಕ ಸಂಪರ್ಕಿಸಬಹುದಾಗಿದೆ

#ಷರತ್ತು ಮತ್ತು ನಿಬಂಧನೆಗಳು:
ಅಭ್ಯರ್ಥಿಗಳು ದಾಖಲಾತಿಗಳನ್ನೊಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆ (Sealed Cover))ಸ್ಪೀಡ್ ಪೋಸ್ಟ್/ರಿಜಿಸ್ಟರ್ ಪೋಸ್ಟ್/ ಕೋರಿಯರ್ ಅಥವಾ ನೇರವಾಗಿ ಮೇಲೆ ತಿಳಿಸಿದ ವಿಳಾಸಕ್ಕೆ ಬಂದು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಪದನಾಮವನ್ನು ಲಕೋಟೆ/ಪೋಸ್ಟ್ ಕವರ್‌ನ ಮೇಲೆ ನಮೂದಿಸತಕ್ಕದ್ದು, ತಪ್ಪಿದಲ್ಲಿ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ದಿನಾಂಕ: 20.03.2020 ರ ನಂತರದಲ್ಲಿ ಸ್ವೀಕೃತಗೊಂಡ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ನಿಗಮವು ಯಾವುದೇ ಕಾರಣವನ್ನು ನೀಡದೆ ಅರ್ಜಿಯನ್ನು ಸ್ವೀಕರಿಸಲು ಅಥವಾ ತಿರಸ್ಕರಿಸುವ ಸಂಪೂರ್ಣ ಅಧಿಕಾರವನ್ನು ಹೊಂದಿರುತ್ತದೆ.ನಿಗಮವು ನೀಡಿರುವ ನಮೂನೆಯಲ್ಲದೇ, ಇತರೆ ಯಾವುದೇ ನಮೂನೆಯಲ್ಲಿ ಸ್ವವಿವರವನ್ನು ಸಲ್ಲಿಸಿದರೆ ಯಾವುದೇ ಕಾರಣಕ್ಕೂ ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುವುದು. *ಅಭ್ಯರ್ಥಿಗಳು ಕರ್ನಾಟಕದ ಯಾವುದೇ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸಲು ಸಿದ್ಧರಿರಬೇಕು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಗೆ ಭೇಟಿ ನೀಡಿ

Facebook Comments