ಬೆಂಗಳೂರು,ಏ.4- ಸಾಮಾಜಿಕ ಜಾಲತಾಣದಲ್ಲಿ ಅಪಹಾಸ್ಯ ಮಾಡಿದರೆಂಬ ಒಂದೇ ಒಂದು ಕಾರಣಕ್ಕಾಗಿ ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿರುವುದಕ್ಕೆ ಬಿಜೆಪಿ ಕಾರ್ಯಕರ್ತರೊಬ್ಬರು ಮನನೊಂದು ಕಚೇರಿಯಲ್ಲಿಯೇ ಆತಹತ್ಯೆ ಮಾಡಿಕೊಂಡಿರುವ ಘಟನೆ ನಾಗವಾರದಲ್ಲಿ ನಡೆದಿದೆ. ನಾಗವಾರದ ಕಚೇರಿಯಲ್ಲಿಯೇ ವಿನಯ್ ಸೋಮಯ್ಯ (35) ಆತಹತ್ಯೆ ಮಾಡಿಕೊಂಡ ಕಾರ್ಯಕರ್ತ.
ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್ ಐ ಆರ್ ನಿಂದ ಮನನೊಂದು ಸಾವನ್ನಪ್ಪುತ್ತಿ ರುವುದಾಗಿ ಬರೆದುಕೊಂಡಿದ್ದಾರೆ. ವಿನಯ್ ಸೋಮಯ್ಯ, ಶಾಸಕ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಾಪ್ ಪೋಸ್ಟ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ, ವಿನಯ್ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಬಂಧನವಾಗಿತ್ತು. ವಿನಯ್ ಸೋಮಯ್ಯ ಬರೆದಿರುವ ಡೆತ್‌ನೋಟನ್ನು ಮಾಜಿ ಸಂಸದ ಪ್ರತಾಪ್ ಸಿಂಹ ತಮ ಎಕ್‌್ಸ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಈ ಹಿಂದೆ ವಿನಯ್ ಸೋಮಯ್ಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಾಪ್ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ವಿರುದ್ಧ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಅವರನ್ನು ಪೊಲೀಸರು ಎರಡು ತಿಂಗಳ ಹಿಂದೆ ಬಂಧಿಸಿದ್ದರು. ಬಂಧನದ ಬಳಿಕ ಮನನೊಂದಿದ್ದ ವಿನಯ್ ಇಂದು ಮುಂಜಾನೆ 4.30ರ ವೇಳೆಗೆ ಆತಹತ್ಯೆಗೆ ಶರಣಾಗಿದ್ದಾರೆ.
ಮ್ಯಾನ್ ಪವರ್ ಸಪ್ಲೈ ಕಂಪನಿಯಲ್ಲಿ ಆಪರೇಷನ್ ಮ್ಯಾನೇಜರ್ ಆಗಿದ್ದ ವಿನಯ್ ಅವರಿಗೆ ಮದುವೆಯಾಗಿ ಮಗುವಿದ್ದು ಕುಟುಂಬ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಾಗಿದೆ. ಬಿಜೆಪಿ ಕಾರ್ಯಕರ್ತನ ಆತಹತ್ಯೆ ಪ್ರಕರಣದ ಮಾಹಿತಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಡೆದಿದ್ದಾರೆ. ಸದ್ಯ ಶಿವಮೊಗ್ಗದ ಶಿಕಾರಿಪುರದಲ್ಲಿ ವಿಜಯೇಂದ್ರ ಇದ್ದು ಪೊನ್ನಣ್ಣ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ.
ಇನ್ನು ಘಟನೆ ಕುರಿತು ಮಾತನಾಡಿರುವ ಮಾಜಿ ಶಾಸಕ ಕೆ.ಜಿ ಬೋಪಯು ಅವರು,ಇತ್ತೀಚಿಗೆ ವಿರಾಜಪೇಟೆ ಶಾಸಕರು ಬಿಜೆಪಿ ಪಕ್ಷದ ಕಾರ್ತಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸುತ್ತಿದ್ದಾರೆ. ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಸಿ ಕಾಂಗ್ರೆಸ್ ಹಾಗೂ ಶಾಸಕರ ವಿರುದ್ದ ಬೃಹತ್ ಪ್ರತಿಭಟನೆ ನಡೆಸುವುದಾಗಿ ಗುಡುಗಿದ್ದಾರೆ.
ಕಳೆದ ಎರಡು ವರ್ಷಗಳಿಂದ ಕ್ಷೇತ್ರದಲ್ಲಿ ಶಾಸಕರು ಅಭಿವೃದ್ದಿ ಮಾಡುವುದನ್ನೇ ಮರೆತು, ತಮ ವಿರುದ್ದ ಸಾಮಾಜಿಕ ಜಾಲ ತಾಣದಲ್ಲಿ ಯಾರಾದರೂ ಟೀಕೆ ಮಾಡಿದರೆ ಅವರ ವಿರುದ್ಧ ಠಾಣೆಗಳಲ್ಲಿ ಸುಳ್ಳು ಮೊಕದ್ದಮೆಗಳನ್ನು ದಾಖಲಿಸುತ್ತಿದ್ದಾರೆ. ಶಾಸಕರ ವರ್ತನೆಯನ್ನು ಖಂಡಿಸಿ ಶೀಘ್ರದಲ್ಲೇ ಹೋರಾಟದ ರೂಪು ರೇಷೆಗಳನ್ನು ಸಿದ್ದಪಡಿಸುವುದಾಗಿ ಬೋಪಯ್ಯಹೇಳಿದ್ದಾರೆ.
ಸಿ.ಟಿ.ರವಿ ಖಂಡನೆ:
ಕೊಡಗಿನ ನಮ ಕಾರ್ಯಕರ್ತನ ಮೇಲೆ ರಾಜಕೀಯ ಅಧಿಕಾರ ಬಳಸಿ ಕಿರುಕುಳ ನೀಡುತ್ತಿದ್ದ ಕಾಂಗ್ರೆಸ್ ಪಕ್ಷದ ನಡೆ ಅಕ್ಷಮ್ಯ. ಅಧಿಕಾರದ ಮದ ಏರಿದ ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಆತಹತ್ಯೆ ಮಾಡಿಕೊಂಡಿರುವ ವಿನಯ್ ಸೋಮಯ್ಯ ಅವರ ಆತಕ್ಕೆ ಸದ್ಗತಿ ಪ್ರಾಪ್ತಿಯಾಗಲಿ ಎಂದು ಎಕ್ಸ್ ನಲ್ಲಿ ಮಾಜಿ ಸಚಿವ ಹಾಗೂ ವಿಧಾನಪರಿಷತ್ ಹಾಲಿ ಸದಸ್ಯ ಸಿ.ಟಿ.ರವಿ ದುಃಖ ವ್ಯಕ್ತಪಡಿಸಿದ್ದು, ಕಾಂಗಿಗಳ ದ್ವೇಷದ ರಾಜಕಾರಣಕ್ಕೆ ಅಂತ್ಯ ಇಲ್ಲವೇ? ಎಂದು ಎಕ್‌್ಸನಲ್ಲಿ ಖಂಡಿಸಿದ್ದಾರೆ.
ಕಿರುಕುಳ -ದೌರ್ಜನ್ಯದ ತನಿಖೆಗೆ ವಿಜಯೇಂದ್ರ ಆಗ್ರಹ..
ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಆತಹತ್ಯೆ ಮಾಡಿಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಕೂಲಂಕಷ ಹಾಗೂ ಪಾರದರ್ಶಕ ತನಿಖೆ ನಡೆದು ಸತ್ಯ ಹೊರಬರಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜಕೀಯ ಕಾರಣಗಳು ಹಾಗೂ ಒತ್ತಡಗಳ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಎಫ್‌ಐಆರ್ ನಿಂದಾಗಿ ವಿನಯ್ ಆತಹತ್ಯೆಗೆ ಶರಣಾಗಿರಬಹುದಾದ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯ ಕಿರುಕುಳ, ಒತ್ತಡ, ದೌರ್ಜನ್ಯಗಳು ನಡೆಯುತ್ತಿದ್ದು ಈ ನಿಟ್ಟಿನಲ್ಲಿ ವಿನಯ್ ಸೋಮಯ್ಯ ಅವರ ಆತಹತ್ಯೆಯ ಪ್ರಕರಣದ ತನಿಖೆಯು ಅತ್ಯಂತ ಪಾರದರ್ಶಕವಾಗಿ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ವಿನಯ್ ಸೋಮಯ್ಯ ಆತಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಒತ್ತಡ ಉಂಟಾಗಲು ಕಾರಣರಾದವರ ವಿರುದ್ಧ ರಾಜ್ಯ ಸರ್ಕಾರ ಈ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುವೆ. ಮೃತ ಕಾರ್ಯಕರ್ತ ವಿನಯ್ ಅವರ ನಿಧನದ ನೋವಿನಲ್ಲಿರುವ ಕುಟುಂಬ ವರ್ಗದವರಿಗೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ವಿನಯ್ ಅವರ ಆತಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಆತಹತ್ಯೆ ಪ್ರಕರಣ ದೂರು ಆಧರಿಸಿ ತನಿಖೆ :
ಬಿಜೆಪಿ ಕಾರ್ಯಕರ್ತರೊಬ್ಬರು ಆತಹತ್ಯೆ ಮಾಡಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ಅವರ ಕುಟುಂಬದವರು ನೀಡುವ ದೂರು ಹಾಗೂ ಡೆತ್‌ನೋಟ್ ನಲ್ಲಿರುವ ಅಂಶಗಳನ್ನು ಆಧರಿಸಿ ತನಿಖೆ ನಡೆಸುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಜೆಯೊಂದಿಗೆ ಮಾತನಾಡಿದ ಅವರು ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯ ನಾಗವಾರದಲ್ಲಿರುವ ಅವರ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ(35) ಎಂಬುವವರು ಇಂದು ಮುಂಜಾನೆ ನೇಣಿಗೆ ಶರಣಾಗಿದ್ದಾರೆ. ಆತಹತ್ಯೆಗೂ ಮುನ್ನ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಡೆತ್‌ನೋಟ್ ನಲ್ಲಿರುವ ಅಂಶಗಳು ಹಾಗೂ ಅವರ ಕುಟುಂಬದವರು ನೀಡುವ ದೂರು ಆಧರಿಸಿ ಎ್‌ಐಆರ್ ದಾಖಲಿಸಿಕೊಂಡು, ತನಿಖೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.