ಪಡಿತರ ವ್ಯವಸ್ಥೆಯಡಿ ಕುಚಲಕ್ಕಿ ವಿತರಣೆ : ಶ್ರೀನಿವಾಸ ಪೂಜಾರಿ

Social Share

ಬೆಂಗಳೂರ,ನ.10- ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ಪಡಿತರ ವ್ಯವಸ್ಥೆಯಡಿ ಕುಚಲಕ್ಕಿ ನೀಡಲು ಡಿಸೆಂಬರ್ 1ರಿಂದ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬೆಂಬಲ ಬೆಲೆಯಡಿ ಭತ್ತ ಖರೀದಿಸಲು ಪ್ರತಿ ಕ್ವಿಂಟಾಲ್‍ಗೆ 2040ರೂ. ನಿಗದಿಪಡಿಸಿದೆ. ಈ ದರಕ್ಕೆ ರೈತರು ಭತ್ತ ನೀಡುತ್ತಿಲ್ಲ. ಹೀಗಾಗಿ ಪ್ರತಿ ಕ್ವಿಂಟಾಲ್‍ಗೆ ರಾಜ್ಯ ಸರ್ಕಾರದಿಂದ 500ರೂ. ಹೆಚ್ಚುವರಿ ನೀಡಿ 2540ರೂ.ಗೆ ಒಂದು ಕ್ವಿಂಟಾಲ್ ಭತ್ತವನ್ನು ಖರೀದಿ ಕೇಂದ್ರದ ಮೂಲಕ ಖರೀದಿಸಲಾಗುವುದು.

ಇದಕ್ಕೆ 132 ಕೋಟಿ ರೂ. ಹೊರೆಯಾಗಲಿದ್ದು, ರಾಜ್ಯ ಸರ್ಕಾರದಿಂದ ಭರಿಸಲು ಸಿಎಂ ಒಪ್ಪಿಗೆ ಸೂಚಿಸಿದ್ದಾರೆ ಎಂದರು. 15 ಲಕ್ಷ ಕ್ವಿಂಟಾಲ್ ಭತ್ತ ಬೇಕಾಗಲಿದ್ದು, ನಮಗೆ ಸುಮಾರು 9 ಲಕ್ಷ ಕ್ವಿಂಟಾಲ್ ಅಕ್ಕಿ ಸಿಗಲಿದೆ. ಈಗ ಪ್ರತಿ ಪಡಿತರ ಚೀಟಿಗೆ 5 ಕೆಜಿ ಅಕ್ಕಿ ನೀಡಲಾಗುತ್ತಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಕ್ಕಿಯನ್ನು ಪಡೆಯುತ್ತಿಲ್ಲ. ಹೀಗಾಗಿ ಜನವರಿ 1ರಿಂದ ಈ ಮೂರು ಜಿಲ್ಲೆಗಳಿಗೆ ಕುಚಲಕ್ಕಿ ನೀಡಲು ಉದ್ದೇಶಿಸಲಾಗಿದೆ ಎಂದರು.

ಬೆಂಗಳೂರಿಗರೇ ನಾಳೆ ರಸ್ತೆಗಿಳಿಯುವ ಮುನ್ನ ಇಲ್ಲಿ ಗಮನಿಸಿ

ರಾಜ್ಯವನ್ನು ಭಿಕ್ಷಾಟನೆ ಮುಕ್ತಗೊಳಿಸಲು ಗೃಹ, ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಅಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗಿದೆ. ಅಂತರ್‍ಜಾತಿ ವಿವಾºದ ಪೆÇ್ರೀತ್ಸಾಹ ಧನ 176 ಕೋಟಿ ಬಾಕಿ ಇದ್ದು, ಕೂಡಲೇ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಅಲ್ಲದೆ, 6ನೇ ತರಗತಿಯಿಂದ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಕರಾಟೆ ಕಲಿಸಲು ನಿರ್ಧರಿಸಲಾಗಿದೆ ಎಂದರು.

Articles You Might Like

Share This Article