ಬೆಂಗಳೂರು,ಆ.16- ಕೆಂಗೇರಿ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಗಳು (82) ಭೈರವೈಕ್ಯರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಯವರು ಕಳೆದ ರಾತ್ರಿ 12.01ರಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಇಂದು ಮಧ್ಯಾಹ್ನವರೆಗೂ ಶ್ರೀಮಠದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮಠದ ಆವರಣದಲ್ಲಿಂದು ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರೀಗಳ ಪಾರ್ಥಿವ ಶರೀರದ ಅಂತ್ಯಕ್ರಿಯೆ ನೆರವೇರಲಿದೆ.
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿರುವ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ ಎಂದು ಶ್ರೀಮಠದ ಆಪ್ತ ಮೂಲಗಳು ತಿಳಿಸಿವೆ. ಶ್ರೀಮಠದ ವತಿಯಿಂದ ಶಿಕ್ಷಣ, ಆಧ್ಯಾತಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಲ್ಲದೆ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.
ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಗಳು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಮೊದಲ ಪೀಠಾಧಿಪತಿಯಾಗಿದ್ದರು. ಪೀಠಾಧಿಪತಿಯಾದಾಗಿನಿಂದಲೂ ಅವರು ಸಮಾಜದ ಒಳಿತಿಗಾಗಿ ಶ್ರಮಿಸಿದ್ದರು. ರೈತ ಪರ, ಅನ್ಯಾಯದ ವಿರುದ್ಧ ದನಿ ಎತ್ತಿದ್ದರು. ಒಕ್ಕಲಿಗರ ಸಮುದಾಯದ ಪರವಾದ ಹೋರಾಟಗಳಲ್ಲಿ ಸಕ್ರಿಯರಾಗಿದ್ದರು. ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಶ್ರೀಗಳು ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅವರನ್ನು ಮಠದ ಪೀಠಾಧಿಪತಿಗಳನ್ನಾಗಿ ಮಾಡಿದ್ದರು.

ಶ್ರೀಗಳ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ , ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಕೆಂಚಪ್ಪ ಗೌಡ, ಮಠಾಧೀಶರು, ಸಮಾಜದ ಮುಖಂಡರು, ಸಚಿವರು, ಶಾಸಕರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಮಾರ್ಗದರ್ಶಕರಾಗಿ ಕೆಲಸ ಮಾಡಿದ್ದ ಗುರುಗಳಿಗೆ ದೇವರು ಸದ್ಗತಿ ನೀಡಲಿ ಹಾಗೂ ಶ್ರೀಗಳ ಅಗಲಿಕೆಯ ದುಃಖಭರಿಸುವ ಶಕ್ತಿಯನ್ನು ನೀಡಲಿ ಎಂದು ದೇವೇಗೌಡರು ತಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಶ್ರೀಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರು ಭೈರವಕ್ಯರಾದ ಸುದ್ದಿ ತಿಳಿದು ಬಹಳ ದುಃಖವಾಯಿತು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಧ್ಯಾತ ಲೋಕದಲ್ಲಿ ಮಹೋನ್ನತ ಸಾಧನೆ ಮಾಡಿದ್ದ ಪರಮಪೂಜ್ಯರು ಸಮಾಜ ಸೇವೆ ಹಾಗೂ ಧಾರ್ಮಿಕ ಕೈಂಕರ್ಯದಲ್ಲಿ ಮುಂಚೂಣಿಯಲ್ಲಿದ್ದರು. ಅವರ ಆತಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಶ್ರೀ ಕಾಲಭೈರವೇಶ್ವರ ದಯಪಾಲಿಸಲಿ ಎಂದು ಸಂತಾಪ ಸೂಚಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಚಂದ್ರಶೇಖರನಾಥ ಸ್ವಾಮೀಜಿಯವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠವನ್ನು ಸ್ಥಾಪಿಸಿ ಸಾಮಾಜಿಕ, ಶೈಕ್ಷಣಿಕ, ಆಧ್ಯಾತಿಕ ಹಾಗೂ ಸೇವಾ ಕೈಂಕರ್ಯದ ಮೂಲಕ ಸಮಾಜಕ್ಕೆ ಅನನ್ಯ ಕೊಡುಗೆ ನೀಡಿರುವ ಶ್ರೀಗಳ ಅಗಲಿಕೆಯ ನೋವಿನಲ್ಲಿರುವ ಶ್ರೀಮಠದ ಭಕ್ತರಿಗೆ ದುಃಖ ಸಹಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಹೇಳಿದ್ದಾರೆ.
- ಬೆಂಗಳೂರಿನ ನಗರ್ತ ಪೇಟೆಯ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಬೆಂಕಿ ಅವಘಢ, ಇಬ್ಬರ ಸಜೀವ ದಹನ
- ಕೆ.ಎನ್. ರಾಜಣ್ಣ ಅವರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳಬೇಕು : ಸಿದ್ಧಗಂಗಾ ಶ್ರೀಗಳ ಆಗ್ರಹ
- ನಾಳೆ ಭಾರತಕ್ಕೆ ಆಗಮಿಸುತ್ತಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ
- ಪದಶ್ರೀ ಪ್ರಶಸ್ತಿ ಪುರಸ್ಕೃತೆ ಬುಲಾ ಚೌಧರಿಯ ಪದಕಗಳನ್ನು ಕದ್ದ ಖದೀಮರು
- ಯಲ್ಲಾಪುರದ ಮಾವಳ್ಳಿಕ್ರಾಸ್ ಬಳಿನಿಂತಿದ್ದ ಲಾರಿಗೆ ಸಾರಿಗೆ ಬಸ್ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು