ಬೆಂಗಳೂರು,ಜ.13- ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾಗುವ ಬಗ್ಗೆ ತಮ್ಮೊಂದಿಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರು, ಪ್ರಧಾನಿ ನರೇಂದ್ರಮೋದಿ ಅವರ ಮನಸಿನಲ್ಲಿ ಏನಿದೋ ಗೊತ್ತಿಲ್ಲ ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಧಾನಿಯವರ ಕ್ರಿಯಾಯೋಜ ನೆಯ ಬಗ್ಗೆ ಅವರ ಸಂಪುಟದ ಸಚಿವರಿಗೂ ಗೊತ್ತಾಗದ ರೀತಿಯಲ್ಲಿ ತೀರ್ಮಾನ ಮಾಡುತ್ತಾರೆ. ಹೊಸದಾಗಿ ವಿಧಾನಸಭೆ ಪ್ರವೇಶಿಸಿದವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಹೀಗಾಗಿ ಅವರು ಯಾವ ತೀರ್ಮಾನ ಮಾಡುತ್ತಾರೆ ಎಂಬ ಬಗ್ಗೆ ಹೇಳಲು ಆಗುವುದಿಲ್ಲ. ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಸ್ರ್ಪಧಿಸುವ ಸನ್ನಿವೇಶ ಬಂದರೆ ನಾವೆಲ್ಲ ಕೂತು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಪ್ರಧಾನಿ ನರೇಂದ್ರಮೋದಿ ಅವರ ಜೊತೆ ಕುಮಾರಸ್ವಾಮಿ ಸಂಪರ್ಕದಲ್ಲಿದ್ದಾರೆ. ಪ್ರಧಾನಿಯವರು ಏನು ಹೇಳುತ್ತಾರೋ ಗೊತ್ತಿಲ್ಲ. ಅವರು ಸ್ಪರ್ಧೆಯ ಬಗ್ಗೆ ಏನಾದರೂ ಹೇಳಿದ ಮೇಲೆ ಮುಂದಿನ ತೀರ್ಮಾನ ಮಾಡುತ್ತೇವೆ ಎಂದರು.
ದೆಹಲಿ ವಿವಿಯ ಮಹಿಳಾ ಶೌಚಾಲಯಗಳ ಮುಂದೆ ಸಿಸಿ ಕ್ಯಾಮರಾ ಅಳವಡಿಕೆ
ಸ್ಪರ್ಧೆ ಇಲ್ಲ: ನನಗೀಗ 91 ವರ್ಷವಾಗಿದೆ. ರಾಜ್ಯಸಭೆ ಸದಸ್ಯತ್ವದ ಅವ ರಾಜ್ಯಸಭೆ ಸದಸ್ಯತ್ವದ ಅವ ಎರಡೂವರೆ ವರ್ಷವಿದೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಅವರು ಕರೆದ ಕ್ಷೇತ್ರಗಳಲ್ಲಿ ಹೋಗಿ ಪ್ರಚಾರ ಮಾಡುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು. ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರು ಸ್ರ್ಪಧಿಸಿದ್ದಾರೆ. ಅವರಿಗೆ ಮೋದಿಯವರ, ಕುಮಾರಸ್ವಾಮಿ, ನಾನು ಹಾಗೂ ಜನತೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಯುವನಿಧಿಗೆ ಸ್ವಾಗತ:
ರಾಜ್ಯ ಸರ್ಕಾರ ನಿನ್ನೆ ಚಾಲನೆ ನೀಡಿದ ಯುವನಿಯನ್ನು ಸ್ವಾಗತಿಸುವುದಾಗಿ ಹೇಳಿದ ಗೌಡರು, ಪದವಿ ಹಾಗೂ ಡಿಫ್ಲೋಮೊ ಪಡೆದ ನಿರುದ್ಯೋಗಿಗಳಿಗೆ ನೀಡುವ ಯುವನಿಧಿಯ ಮೊದಲ ಕಂತಿನ ಹಣದಿಂದ ಶ್ರೀರಾಮನ ದರ್ಶನ ಪಡೆಯಲಿದೆ. ರಾಮನ ಆಶೀರ್ವಾದಿಂದ ಮುಂದೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲಿ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜ.22ರ ನಂತರ ಅಯೋಧ್ಯೆ ಶ್ರೀರಾಮಮಂದಿರಕ್ಕೆ ಹೋಗುವುದಾಗಿ ಹೇಳಿದ್ದಾರೆ. ಅಲ್ಲದೆ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಅವಕಾಶ ಮಾಡಿದ್ದಾರೆ.ಗುಣಕ್ಕೆ ಮಾತ್ಸರ್ಯವಿಲ್ಲ ಮೃದು ಹಿಂದುತ್ವದ ಪ್ರಶ್ನೆಯಲ್ಲ.ಇದರ ಬಗ್ಗೆ ಪ್ರಸಂಶೆ ವ್ಯಕ್ತಪಡಿಸುತ್ತೇನೆ ಎಂದರು.
ಅಯೋಧ್ಯೆಯಲ್ಲಿನ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಪ್ರಧಾನಿಯವರು 11 ದಿನ ಉಪವಾಸ ವ್ರತ ಕೈಗೊಂಡಿದ್ದಾರೆ. ಇದು ದೈವ ನಿಯಮ ಇರಬಹುದು. ಶಿಸ್ತು, ಶ್ರದ್ದೆ,ಭಕ್ತಿ, ನಿಷ್ಠೆಯಿಂದ ಮಾಡುತ್ತಿದ್ದಾರೆ. ಪ್ರತಿಯೊಂದು ಅವರು ನಿಯಮಬದ್ದವಾಗಿ ಮಾಡುತ್ತಾರೆ. ನಾನು ಒಂದು ದಿವಸ ಮಾತ್ರ ಉಪವಾಸ ಮಾಡಿದ್ದೆ ಅಷ್ಟೇ ಎಂದು ಹೇಳಿದರು.
ಜ.22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಸಮಾರಂಭಕ್ಕೆ ಹೋಗುವುದಾಗಿ ಅವರು ತಿಳಿಸಿದರು. ತಮ್ಮ ಆರೋಗ್ಯ ಕೆಟ್ಟಾಗ ತಮ್ಮ ಪುತ್ರಿ ಅನುಸೂಯ ಅವರು ಪ್ರತಿ ಶನಿವಾರ ಕಾರಂಜಿ ಆಂಜನೇಯಸ್ವಾಮಿಗೆ ಬೆಣ್ಣೆ ಅಲಂಕಾರ ಮಾಡಿದರು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತು ಎಂದು ಹೇಳಿದರು.
ಪತ್ರಿಕಾಗೊಷ್ಟಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶಾಸಕ ಜಿ.ಟಿ.ದೇವೇಗೌಡರು, ವಿಧಾನಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಶರವಣ, ವಿಧಾನಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಉಪಸ್ಥಿತರಿದ್ದರು.