Thursday, September 19, 2024
Homeರಾಜಕೀಯ | Politicsಮಾನವ ಸರಪಳಿ ನೆಪದಲ್ಲಿ ಬಿಟ್ಟಿ ಪ್ರಚಾರ ಗಿಟ್ಟಿಸಿದ ಸಿದ್ದರಾಮಯ್ಯ ಸರ್ಕಾರಕ್ಕೆ ಹೆಚ್ಡಿಕೆ ತರಾಟೆ

ಮಾನವ ಸರಪಳಿ ನೆಪದಲ್ಲಿ ಬಿಟ್ಟಿ ಪ್ರಚಾರ ಗಿಟ್ಟಿಸಿದ ಸಿದ್ದರಾಮಯ್ಯ ಸರ್ಕಾರಕ್ಕೆ ಹೆಚ್ಡಿಕೆ ತರಾಟೆ

Kumaraswamy Criticizes Karnataka Congress Government for Delaying Local Body Elections

ಬೆಂಗಳೂರು,ಸೆ.16– ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಕಾಂಗ್ರೆಸ್‌‍ ಸರ್ಕಾರವನ್ನು ಕೇಂದ್ರದ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ಆಗ್ರಹಿಸಿದ್ದಾರೆ.ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರಜಾಪ್ರಭುತ್ವದ ಸರಪಳಿಯ ತಳ ಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ, ತಾಲೂಕು ಪಂಚಾಯತಿ ಮತ್ತು ಬಿಬಿ ಎಂಪಿ ಚುನಾವಣೆ ನಡೆಸಿಲ್ಲ, ಏಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ.. ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ. ನಿಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ ಎಂದು ಅವರು ಕಿಡಿಕಾರಿದ್ದಾರೆ.

ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಎಂದು ಅವರು ರಾಜ್ಯ ಸರಕಾರಕ್ಕೆ ಆಗ್ರಹಿಸಿದ್ದಾರೆ.

RELATED ARTICLES

Latest News