ಜೆಡಿಎಸ್ ಬಲವರ್ಧನೆಗೆ ಹೆಚ್‌ಡಿಕೆ ಪಣ

ಬೆಂಗಳೂರು,ನ.12- ಮುಂಬರುವ 2023ರ ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಸಿಕೊಂಡು ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಎಲ್ಲ ಹಂತಗಳಲ್ಲು ಸಂಘಟನೆ ಮಾಡಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ. ಜಿಲ್ಲಾಧ್ಯಕ್ಷರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸ್ಥಳೀಯ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿ ಪಕ್ಷ ಸಂಘಟನೆಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಅಲ್ಲದೆ ಪ್ರತಿಯೊಬ್ಬರಿಗೂ ಜವಾಬ್ದಾರಿ ಹಂಚಿಕೆ ಮಾಡಿ ಗಡುವನ್ನು ಕೂಡ ನಿಗದಿಪಡಿಸುತ್ತಿದ್ದಾರೆ.

ಎಲ್ಲ ಜಿಲ್ಲೆಗಳಲ್ಲೂ ಪಕ್ಷದ ಅಸ್ತಿತ್ವ ಇರಬೇಕು. ಬೆಂಗಳೂರಿನಲ್ಲಿ ಸಕ್ರಿಯವಾಗಿರುವಂತೆ ಪಕ್ಷದ ಘಟಕಗಳು ಪ್ರತಿ ಜಿಲ್ಲೆಯಲ್ಲೂ ಕಾರ್ಯ ನಿರ್ವಹಿಸಬೇಕು. ಅದಕ್ಕೆ ಬೇಕಾದ ಪೂರಕ ಸಿದ್ದತೆಗಳನ್ನು ಮಾಡಲಾಗುತ್ತಿದೆ. ಪಕ್ಷ ಪ್ರಬಲವಾಗಿರುವ ಕಡೆ ಮತ್ತಷ್ಟು ಬಲ ವೃದ್ಧಿಸುವುದು. ಅಸ್ತಿತ್ವವೇ ಇಲ್ಲದ ಕಡೆ ಪಕ್ಷದ ಅಸ್ತಿತ್ವ ಸ್ಥಾಪನೆ ಮಾಡಿ ಸಂಘಟನೆಗೆ ಒತ್ತು ಕೊಡುವುದು ಈ ನಿಟ್ಟಿನಲ್ಲಿ ಜಿಲ್ಲಾಧ್ಯಕ್ಷರು ಹಾಗೂ ಪದಾಕಾರಿಗಳಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ.

2023ಕ್ಕೆ ಪಕ್ಷವನ್ನು ಸ್ವಂತ ಬಲದ ಮೇಲೆ ಅಕಾರಕ್ಕೆ ತರಬೇಕೆಂಬ ಸಂಕಲ್ಪ ಮಾಡಿದ್ದು, ಅದಕ್ಕೆ ಬೇಕಾದ ಪೂರ್ವ ಸಿದ್ದತೆಯನ್ನು ಮಾಡಲಾಗುತ್ತಿದೆ. ಇತ್ತೀಚೆಗೆ ಬಿಡದಿಯಲ್ಲಿ ನಿರಂತರ ಕಾರ್ಯಗಾರ ನಡೆಸಿ ವಿಧಾನಸಭೆ ಸ್ಪರ್ಧಾಕಾಂಕ್ಷಿಗಳಿಗೆ ಜವಾಬ್ದಾರಿಯನ್ನು ನೀಡಲಾಗಿತ್ತು. ರ್ನಿಷ್ಟ ಗಡುವಿನೊಳಗೆ ಅವರು ತಮ್ಮ ಸಾಮಥ್ರ್ಯವನ್ನು ಸಾಬೀತುಪಡಿಸಬೇಕು ಎಂದು ತಾಕೀತು ಮಾಡಲಾಗಿತ್ತು.

ಕಳೆದ ಸೋಮವಾರದಿಂದ ಪಕ್ಷದ ಕೇಂದ್ರ ಕಚೇರಿ ಜೆಪಿಭವನದಲ್ಲಿ ಜಿಲ್ಲಾವಾರು ಸಭೆಗಳನ್ನು ನಡೆಸಲಾಗುತ್ತಿದ್ದು, ಪಕ್ಷ ಸಂಘಟನೆ, ಸದಸ್ಯತ್ವ ನೋಂದಣಿ, ಪ್ರಸಕ್ತ ಹಾಗೂ ಮುಂಬರುವ ಚುನಾವಣೆಗಳ ತಯಾರಿ ಬಗ್ಗೆ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ.

ಅಲ್ಲದೆ ಪ್ರತಿ ಜಿಲ್ಲಾ ಘಟಕಕ್ಕೂ ರ್ನಿಷ್ಟ ಜವಾಬ್ದಾರಿಯನ್ನು ನೀಡುತ್ತಿದ್ದಾರೆ. ಜಿಲ್ಲಾವಾರು ಕಾರ್ಯಗಾರ ಮುಗಿದ ನಂತರ ರಾಜ್ಯದ ವಿವಿಧೆಡೆ ಪ್ರವೇಶ ಕೈಗೊಂಡು ಪಕ್ಷ ಸಂಘಟನೆಗೆ ಹೊಸ ಚೈತನ್ಯ ನೀಡುವ ಉದ್ದೇಶವನ್ನು ಕುಮಾರಸ್ವಾಮಿ ಹೊಂದಿದ್ದಾರೆ.

ಜನತಾ ಪರ್ವ 1.0 ಎರಡನೇ ಸಂಘಟನೆ ಕಾರ್ಯಗಾರ ಜನತಾಸಂಗಮ ನ.17ರಂದು ಮುಕ್ತಾಯವಾಗಲಿದೆ. ಈಗಾಗಲೇ 15ಕ್ಕೂ ಹೆಚ್ಚು ಜಿಲ್ಲೆಗಳ ಮುಖಂಡರೊಂದಿಗೆ ಕಾರ್ಯಗಾರದ ಮೂಲಕ ಪಕ್ಷ ಸಂಘಟನೆಯನ್ನು ಚುರುಕುಗೊಳಿಸುವಂತೆ ಸಲಹೆ ಮಾಡಿದ್ದಾರೆ.