ಉಪ್ಪು ತಿಂದವರು ನೀರು ಕುಡಿಯಬೇಕು : ಪ್ರಜ್ವಲ್ ವಿರುದ್ಧದ ಆರೋಪಗಳ ಕುರಿತು ಹೆಚ್‌ಡಿಕೆ ಪ್ರತಿಕ್ರಿಯೆ

ಬೆಂಗಳೂರು,ಏ.28- ಹಾಸನ ಕ್ಷೇತ್ರದಲ್ಲಿ ಕೇಳಿಬಂದಿರುವ ಲೈಂಗಿಕ ದೌರ್ಜನ್ಯದ ಆರೋಪದ ಬಗ್ಗೆ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದ್ದು, ತನಿಖೆಯಿಂದ ಸತ್ಯಾಂಶ ಹೊರಬರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಷ್ಟ ಹೇಳಿಕೊಂಡು ಬಂದಂತಹ ಹೆಣ್ಣುಮಕ್ಕಳ ಕಷ್ಟವನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಾಗಲಿ, ನಾನಾಗಲೀ ಪರಿಹರಿಸಿ ಕಳುಹಿಸಿದ್ದೇವೆ. ಹೆಣ್ಣು ಮಕ್ಕಳಿಗೆ ಹೆಚ್ಚಿನ ಗೌರವ ಕೊಟ್ಟಿದ್ದೇವೆ ಎಂದರು. ಹಾಸನ ಚುನಾವಣಾ ಸಂದರ್ಭದಲ್ಲಿ ಕೇಳಿಬಂದಿರುವ ಆರೋಪದ ಬಗ್ಗೆ ಎಸ್‌ಐಟಿ ತನಿಖೆ ವಹಿಸಲಾಗಿದೆ. ಈ ನೆಲದಲ್ಲಿ ಯಾರೇ ತಪ್ಪು ಮಾಡಿದರೂ ಉಪ್ಪು … Continue reading ಉಪ್ಪು ತಿಂದವರು ನೀರು ಕುಡಿಯಬೇಕು : ಪ್ರಜ್ವಲ್ ವಿರುದ್ಧದ ಆರೋಪಗಳ ಕುರಿತು ಹೆಚ್‌ಡಿಕೆ ಪ್ರತಿಕ್ರಿಯೆ