Friday, April 4, 2025
Homeರಾಜ್ಯಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ : ಪುಟ್ಟರಾಜು

ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ : ಪುಟ್ಟರಾಜು

ಬೆಂಗಳೂರು,ಮಾ.21- ಮಂಡ್ಯ ಲೋಕಸಭಾ ಕ್ಷೇತ್ರದಿಂದ NDA ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಹೇಳಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಿಂದ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಲಿದ್ದಾರೆ. ಈ ವಿಚಾರದಲ್ಲಿ ಯಾವುದೇ ಅನುಮಾನ ಬೇಡ ಎಂದಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರನ್ನು ಭಾರೀ ಬಹುಮತದಿಂದ ಗೆಲ್ಲಿಸುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಅವರು ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರೆ ಸಾಕು. ಕ್ಷೇತ್ರಾದ್ಯಂತ ಪ್ರಚಾರ ಕೈಗೊಂಡು ಅವರನ್ನು ಗೆಲ್ಲಿಸುವ ಜವಾಬ್ದಾರಿಯನ್ನು ನಾವೇ ಹೊರುತ್ತೇವೆ ಎಂದು ಅವರು ತಿಳಿಸಿದ್ದಾರೆ.

RELATED ARTICLES

Latest News