Sunday, May 19, 2024
Homeರಾಜ್ಯಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ

ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ

ಬೆಂಗಳೂರು, ಮಾ.21-ಮಾಜಿ ಮಂತ್ರಿಗಳು ಹಾಗೂ ನನ್ನ ತಂದೆಯವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಅಭಿಮಾನಿಗಳು, ಹಿತೈಷಿಗಳು, ಜಾತ್ಯತೀತ ಜನತಾದಳ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ ತಂದೆಯವರು ಆರೋಗ್ಯವಾಗಿದ್ದಾರೆ ಎಂದಿದ್ದಾರೆ.

ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹರಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇವೆ ಎಂದು ಅವರು ಹೇಳಿದ್ದಾರೆ

RELATED ARTICLES

Latest News