ನವದೆಹಲಿ,ಮಾ.15- ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರು ಇಂದು ಗಾಲಿ ಕುರ್ಚಿಯಲ್ಲಿ ಬಂದು ಸಿಬಿಐ ನ್ಯಾಯಾಲಯದ ಮುಂದೆ ಹಾಜರಾದರು. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಯಾದವ್ ಅವರ ಪತ್ನಿ ರಾಬ್ರಿ ದೇವಿ ಮತ್ತು ಪುತ್ರಿ ಮಿಸಾ ಭಾರತಿ ಇಂದು ಸಿಬಿಐ ನ್ಯಾಯಾಲಯಕ್ಕೆ ಆಗಮಿಸಿದರು.
ಮೂರು ತಿಂಗಳ ಹಿಂದೆ ಸಿಂಗಾಪುರದಲ್ಲಿ ಮೂತ್ರಪಿಂಡ ಕಸಿ ನಂತರ ಲಾಲು ಯಾದವ್ ಮೊದಲ ಬಾರಿಗೆ ನ್ಯಾಯಾಲಯಕ್ಕೆ ಹಾಜರಾ ಲಾಲೂ ಗಾಲಿಕುರ್ಚಿಯಲ್ಲಿ ಆಗಮಿಸಿ ವಿಚಾರಣೆಗೆ ಹಾಜರಾದರು.
ಮಾಜಿ ಮುಖ್ಯಮಂತ್ರಿಗಳಾದ ಲಾಲು ಯಾದವ್ ಮತ್ತು ರಾಬ್ರಿ ದೇವಿ ಮತ್ತು ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಸೇರಿದಂತೆ ಅವರ ಕೆಲವು ಮಕ್ಕಳ ವಿರುದ್ಧ ಬಿಹಾರ ಭೂಮಿ-ಉದ್ಯೋಗ ಹಗರಣ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ.
ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಮುಖ್ಯ ಶಿಕ್ಷಕ ಬಂಧನ
ಯಾದವ್ ಮತ್ತು ಅವರ ಕುಟುಂಬ ಸದಸ್ಯರು 2004 ರಿಂದ 2009 ರವರೆಗೆ ಕೇಂದ್ರ ರೈಲ್ವೇ ಸಚಿವರಾಗಿದ್ದ ಅವಧಿಯಲ್ಲಿ ಉದ್ಯೋಗಕ್ಕಾಗಿ ಭೂಮಿ ಯೋಜನೆಯಲ್ಲಿ ಅಗ್ಗದ ಬೆಲೆಗೆ ಭೂಮಿ ಖರೀದಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಲಾಲು ಯಾದವ್ ಮತ್ತು ಅವರ ಕುಟುಂಬ ಸದಸ್ಯರು ಕ್ರಿಮಿನಲ್ ಪಿತೂರಿ, ವಂಚನೆ, ನಕಲಿ ಮತ್ತು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದ್ದಾರೆ.
ಕಳೆದ ವರ್ಷ ಜುಲೈನಲ್ಲಿ ಲಾಲು ಯಾದವ್ ರೈಲ್ವೆ ಸಚಿವರಾಗಿದ್ದಾಗ ಅವರ ಸಹಾಯಕರಾಗಿದ್ದ ಭೋಲಾ ಯಾದವ್ ಅವರನ್ನು ಸಿಬಿಐ ಬಂಧಿಸಿತ್ತು.
Land-for-job, scam, case, Lalu Yadav, appear, Delhi, court,