ಹಲವು ದಿಗ್ಗಜರಿಗೆ ಇದೇ ಕೊನೆ ಚುನಾವಣೆ..!?

Social Share

ಬೆಂಗಳೂರು,ಫೆ.20- ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ರಾಜಕಾರಣದ ಹಲವು ದಿಗ್ಗಜರಿಗೆ ಮುಂಬರುವ ವಿಧಾನಸಭಾ ಚುನಾವಣೆಯು ಕೊನೆಯ ಚುನಾವಣೆಯಾಗುವ ಸಾಧ್ಯತೆಯಿದೆ. ಏಕೆಂದರೆ ಅವರು ಇನ್ನೇನು ಐದು ವರ್ಷಗಳ ನಂತರ 80 ವರ್ಷ ಪೂರೈಸುವ ಹೊಸ್ತಿಲಲ್ಲಿದ್ದಾರೆ. ಈ ಹಿರಿಯರಲ್ಲಿ ಹೆಚ್ಚಿನವರು ಆ ವೇಳೆಗೆ ಚುನಾವಣಾ ರಾಜಕೀಯದಿಂದ ನಿವೃತ್ತರಾಗಬಹುದು.

ಕಾಂಗ್ರೆಸ್ ಶಾಸಕರಾದ ಆರ್.ವಿ.ದೇಶಪಾಂಡೆ (75), ಕೆ.ಆರ್.ರಮೇಶ್ ಕುಮಾರ್ (73) ಶಾಮನೂರು ಶಿವಶಂಕರಪ್ಪ (91) ಸೇರಿದಂತೆ ಇತರರಿಗೆ ಇದು ಕೊನೆ ಚುನಾವಣೆ ಆಗಬಹುದು. ಬಿಜೆಪಿ ಶಾಸಕರಾದ ಕೆ.ಎಸ್.ಈಶ್ವರಪ್ಪ (74), ಜಿ.ಎಚ್.ತಿಪ್ಪಾರೆಡ್ಡಿ (77) ಮತ್ತು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ (71) ಅವರಿಗೆ ಈ ಚುನಾವಣೆಯೇ ಕೊನೆಯಾಗುವ ಸಾಧ್ಯತೆ ಇದೆ.

ಗಂಡ ಮತ್ತುಅತ್ತೆಯನ್ನು ತುಂಡು ತುಂಡಾಗಿ ಕತ್ತರಿಸಿದ ಮಹಿಳೆ

ಈ ಶಾಸಕರಲ್ಲಿ ಅನೇಕರು ಚುನಾವಣಾ ರಾಜಕೀಯವನ್ನು ತ್ಯಜಿಸುವ ತಮ್ಮ ಇಚ್ಛೆಯನ್ನು ಈಗಾಗಲೇ ವ್ಯಕ್ತಪಡಿಸಿದ್ದಾರೆ. ಮುಂದಿನ ತಿಂಗಳು 80ನೇ ವರ್ಷಕ್ಕೆ ಕಾಲಿಡಲಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮುಂಬರುವ ಚುನಾವಣೆಯಲ್ಲಿ ಸ್ರ್ಪಧಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದಾರೆ.

ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪ್ರಸ್ತುತ ತಾವು ಪ್ರತಿನಿಧಿಸುತ್ತಿರುವ ಕ್ಷೇತ್ರವಾದ ಶಿಕಾರಿಪುರದಿಂದ ಸ್ರ್ಪಧಿಸಲಿದ್ದಾರೆ. 2018ರ ವಿಧಾನಸಭಾ ಚುನಾವಣೆಗೆ ಮುನ್ನ ಸಿದ್ದರಾಮಯ್ಯ ಅವರು ಇನ್ನು ಮುಂದೆ ಚುನಾವಣೆಗೆ ಸ್ರ್ಪಧಿಸುವುದಿಲ್ಲ ಎಂದು ಹೇಳಿದ್ದರು.

ಆದರೆ, 2018ರಲ್ಲಿ ಅವರ ನಾಯಕತ್ವದಲ್ಲಿ ಕಾಂಗ್ರೆಸ್ಸಿಗೆ ಹೀನಾಯ ಸೋಲಾಯಿತು. ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕೆಂಬ ಅವರ ಮಹತ್ವಾಕಾಂಕ್ಷೆಯು ಅವರ ಮನಸ್ಸನ್ನು ಬದಲಾಯಿಸುವಂತೆ ಮಾಡಿತು ಎಂದು ಹೇಳಲಾಗುತ್ತಿದೆ.

ಇದೀಗ 2023ರ ವಿಧಾನಸಭಾ ಚುನಾವಣೆಯೇ ತಮ್ಮ ಕೊನೆಯ ಚುನಾವಣೆ ಎಂದು ಹೇಳಿದ್ದಾರೆ. ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರು ಬೆಳಗಾವಿ ವಿಧಾನಮಂಡಲದ ಅಧಿವೇಶನದಲ್ಲಿ ಈ ವಿಧಾನಸಭಾ ಚುನಾವಣೆಯ ನಂತರ ನಿವೃತ್ತಿ ಹೊಂದುವುದಾಗಿ ಹೇಳಿದ್ದರು.

ದೇಶಪಾಂಡೆ ಅವರು ಚುನಾವಣೆಗೂ ಮುನ್ನವೇ ನಿವೃತ್ತಿ ಹೊಂದಲು ಬಯಸಿದ್ದರು. ಆದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ರ್ಪಧಿಸುವಂತೆ ಸಿದ್ದರಾಮಯ್ಯ ಮನವೊಲಿಸಿದ್ದಾರೆ ಎಂದು ತಿಳಿದುಬಂದಿದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವಂತೆ ಕಾಂಗ್ರೆಸ್ ಈಗಾಗಲೇ ಕೇಳಿಕೊಂಡಿದ್ದು, ಅವರ ಕುಟುಂಬದ ಒಬ್ಬರು ಅವರ ವಿಧಾನಸಭಾ ಕ್ಷೇತ್ರದಿಂದ ಸ್ರ್ಪಧಿಸುವ ಸಾಧ್ಯತೆ ಇದೆ.

ಡಿಜಿಟಲ್ ಮೀಟರ್ ಅಳವಡಿಕೆಯಿಂದ ದುಪ್ಪಟ್ಟಾಯ್ತು ಕರೆಂಟ್ ಬಿಲ್..!

ಇನ್ನು ಸಂಪುಟಕ್ಕೆ ಮರಳಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿರುವ ಈಶ್ವರಪ್ಪ ವಿಧಾನಸಭೆ ಚುನಾವಣೆ ಬಳಿಕ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಪಕ್ಷಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ.

ಅದೇ ಆಧಾರದ ಮೇಲೆ ಅವರು ಸಂಪುಟಕ್ಕೆ ಸೇರ್ಪಡೆಗೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ. ಮುಂಬರುವ ಚುನಾವಣೆಗೆ ಟಿಕೆಟ್ ನಿರಾಕರಿಸಿದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಪಕ್ಷದ ನಾಯಕರೇ ತಿಳಿಸಿದ್ದಾರೆ.

Last, election, leaders, siddaramaiah, ks eshwarappa, shamanur shivashankarappa,

Articles You Might Like

Share This Article