ಗಾಯಕಿ ಲತಾ ಮಂಗೇಶ್ಕರ್‌ಗೆ ಕೋವಿಡ್‌ ಪಾಸಿಟಿವ್

Social Share

ಮುಂಬೈ,ಜ.11- ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದ್ದು, ಮುಂಬೈನ ಬ್ರೀಚ್ ಕ್ಯಾಂಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ.92 ವರ್ಷ ದಾಟಿರುವುದರಿಂದ ಅವರನ್ನು ಕ್ಯಾಂಡಿ ಆಸ್ಪತ್ರೆಯಲ್ಲಿ ಹೆಚ್ಚಿನ ನಿಗಾವಹಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಕಳೆದ 2019ರ ನವೆಂಬರ್‍ನಲ್ಲೂ ಸಹ ಲತಾ ಮಂಗೇಶ್ಕರ್ ಅವರ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಸೋಂಕಿನಿಂದ ಗುಣಮುಖರಾಗಿ ಚೇತರಿಸಿಕೊಂಡಿದ್ದರು. ಇದೀಗ ಅವರಿಗೆ ಮತ್ತೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Articles You Might Like

Share This Article