Sunday, October 13, 2024
Homeರಾಜಕೀಯ | Politicsರಾಜ್ಯದ ಹಾದಿಬೀದಿಯಲ್ಲಿ ಕೊಲೆ, ಗೃಹ ಇಲಾಖೆ ನಿದ್ದೆ ಮಾಡುತ್ತಿದೆಯೇ?: ಜೆಡಿಎಸ್ ವಾಗ್ದಾಳಿ

ರಾಜ್ಯದ ಹಾದಿಬೀದಿಯಲ್ಲಿ ಕೊಲೆ, ಗೃಹ ಇಲಾಖೆ ನಿದ್ದೆ ಮಾಡುತ್ತಿದೆಯೇ?: ಜೆಡಿಎಸ್ ವಾಗ್ದಾಳಿ

ಬೆಂಗಳೂರು,ಮೇ 18- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ ಎಂದು ಜೆಡಿಎಸ್‌‍ ಆರೋಪಿಸಿದೆ.ಈ ಸಂಬಂಧ ಎಕ್ಸ್ ನಲ್ಲಿ ಪತ್ರಿಕೆಯೊಂದರಲ್ಲಿ ಕೊಲೆ, ಅತ್ಯಾಚಾರಗಳಿವೆ ಸಂಬಂಧಿಸಿದಂತೆ ವರದಿಯಾಗಿರುವುದನ್ನು ಪೋಸ್ಟ್‌ ಮಾಡಿರುವ ಜೆಡಿಎಸ್‌‍, ರಾಜ್ಯ ಗೃಹ ಇಲಾಖೆ ಎನ್ನುವುದು ಕೆಲಸ ಮಾಡುತ್ತಿದೆಯೇ? ಅಥವಾ ನಿದ್ದೆ ಮಾಡುತ್ತಿದೆಯೇ? ದಯಮಾಡಿ ಹೇಳುವಿರಾ? ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ಅವರನ್ನು ಪ್ರಶ್ನಿಸಿದೆ.

ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿ ಇದೆ. ಕೇವಲ ನಾಲ್ಕು ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ. ಜನರಿಗೆ ನೆಮ್ಮದಿಯ ಗ್ಯಾರಂಟಿ ಇಲ್ಲ ಎಂದು ವಾಗ್ದಾಳಿ ನಡೆಸಿದೆ.

RELATED ARTICLES

Latest News