ಬೆಂಗಳೂರು, ಡಿ. 19- ಬಿಐಟಿಯ 6ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿವಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಶ್ವೇಶ್ವರಯ್ಯಪುರ ಕಾಲೇಜ್ ಆಫ್ ಲಾ ಸಂಸ್ಥೆಯಲ್ಲಿ ಪ್ರಥಮ ವರ್ಷ ವ್ಯಾಸಂಗ ಮಾಡುತ್ತಿದ್ದ ವೀಣಾ(23) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ.
BIG BREAKING : ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಬನಶಂಕರಿ ನಿವಾಸಿಯಾಗಿರುವ ವೀಣಾ ಆತ್ಮಹತ್ಯೆಗೂ ಮುನ್ನ ಡೆತ್ನೋಟ್ ಬರೆದಿಟ್ಟಿದ್ದು, ಇಂದು ಮಧ್ಯಾಹ್ನ ಬೆಂಗಳೂರು ತಾಂತ್ರಿಕ ಮಹಾವಿದ್ಯಾಲಯದ 6ನೇ ಮಹಡಿಗೆ ಹೋಗಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಕ್ಕರ್ ಕಿರಾತಕನಿಗೆ ನಾಳೆ ಶಸ್ತ್ರ ಚಿಕಿತ್ಸೆ
ಸುದ್ದಿ ತಿಳಿದು ವಿವಿಪುರಂ ಠಾಣೆ ಪೊಲೀಸರು ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳದಲ್ಲಿ ದೊರೆತ ಡೆತ್ನೋಟನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Law Student, commits, suicide, Bangalore,