ಬೆಂಗಳೂರು, ಜ.11- ಅಂತಿಮ ವರ್ಷದ ಕಾನೂನು ವಿದ್ಯಾರ್ಥಿ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೆಜಿಹಳ್ಳಿಯ ಪಿ ಅಂಡ್ ಟಿ ಕಾಲೋನಿ ನಿವಾಸಿ ರಿಜ್ವಾನ್(25) ಆತ್ಮಹತ್ಯೆ ಮಾಡಿಕೊಂಡಿರುವ ಎಲ್ಎಲ್ಬಿ ವಿದ್ಯಾರ್ಥಿ.
ರಿಜ್ವಾನ್ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದು , ಪತ್ನಿ ಆರ್ಟಿ ನಗರದ ತನ್ನ ಪೋಷಕರ ಮನೆಯಲ್ಲಿ ನೆಲೆಸಿದ್ದಾರೆ. ತನ್ನ ವಿದ್ಯಾಭ್ಯಾಸವನ್ನು ರಿಜ್ವಾನ್ ಮುಂದುವರೆಸಿದ್ದನು. ನಿನ್ನೆ ಮಧ್ಯಾಹ್ನ ಮನೆಯ ಮೊದಲನೆ ಮಹಡಿಯಲ್ಲಿರುವ ಶೀಟ್ನ ರೂಂನಲ್ಲಿ ಕಬ್ಬಿಣದ ರಾಡಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪೋಷಕರು ರೂಂಗೆ ಹೋಗಿ ನೋಡಿದಾಗಲೇ ರಿಜ್ವಾನ್ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.
ತಕ್ಷಣ ಪೋಷಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಿ ದ್ದಾರೆ.
ಡಿಕೆಶಿ-ಸಿದ್ದರಾಮಯ್ಯ ಜಂಟಿ ರಥಯಾತ್ರೆ ಅಬ್ಬರ ಜೋರು
ಆಲ್ ಅಮೀನ್ ಕಾಲೇಜಿ ನಲ್ಲಿ ಎಲ್ಎಲ್ಬಿ ವ್ಯಾಸಂಗ ಮಾಡುತ್ತಿದ್ದ ಈತನಿಗೆ ಕಾಲೇಜಿನ ಪ್ರಾಂಶುಪಾಲರು ನಿಂದಿಸಿದ್ದರಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿ ಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ಶಂಕೆ ವ್ಯಕ್ತವಾಗಿದೆ.
ನೇಣು ಬಿಗಿದುಕೊಂಡು ಬಾಡಿ ಬಿಲ್ಡರ್ ಆತ್ಮಹತ್ಯೆ
ರಿಜ್ವಾನ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವೈಯಕ್ತಿಕ ಕಾರಣದಿಂದ ಈತ ದುಡುಕಿನ ನಿರ್ಧಾರ ಕೈಗೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ಕೆಜಿಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
law student, Rizwan, suicide, Bengaluru,