ವಕೀಲ ಜಗದೀಶ್ ಅರೆಸ್ಟ್ , ಅವರ ಮೇಲಿರುವ ಆರೋಪಗಳೇನು ಗೊತ್ತೇ..?

Social Share

ಬೆಂಗಳೂರು,ಫೆ.13- ನ್ಯಾಯಾಲಯದ ಆವರಣದಲ್ಲಿ ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಸಿದಂತೆ ವಕೀಲ ಜಗದೀಶ್ ಅವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ದೊಂಬಿ, ಗಲಾಟೆ ಮಾಡುವಂತೆ ಪ್ರಚೋದನೆ ನೀಡಿ ನಿನ್ನೆ ಮಧ್ಯಾಹ್ನ ಅಶಾಂತಿ ವಾತಾವರಣ ಉಂಟು ಮಾಡಿ ನನ್ನ ಕುತ್ತಿಗೆ ಹಿಸುಕಿ, ಒದ್ದು, ಕೊಲೆ ಮಾಡಲು ಪ್ರಯತ್ನಿಸಿರುವುದಲ್ಲದೆ ಪ್ರಾಣ ಬೆದರಿಕೆ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಹೇಳಿಕೆಗಳನ್ನು ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.
ಅಲ್ಲದೆ ಸುಮಾರು 300 ಜನ ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ ಕರೆ ಮಾಡಿಸುತ್ತಿದ್ದು, ಈ ಬಗ್ಗೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ವಕೀಲರಾದ ನಾರಾಯಣಸ್ವಾಮಿ ಹಲಸೂರು ಗೇಟ್ ಠಾಣೆಗೆ ದೂರು ನೀಡಿದ್ದು, ದೂರಿನ ಅನ್ವಯ ಹಲಸೂರು ಗೇಟ್ ಠಾಣೆ ಪೊಲೀಸರು ಜಗದೀಶ್ ಅವರನ್ನು ಬಂಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ.
ಫೆ.10ರ ಸಂಜೆ 4 ಗಂಟೆ ಸಮಯದಲ್ಲಿ ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ನನ್ನ ಮೇಲೆ ಗಲಾಟೆ ಮಾಡಿ ನಿನ್ನನ್ನು ಬಿಡುವುದಿಲ್ಲ. ಕೊಲೆ ಮಾಡುತ್ತೇನೆ ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ನನ್ನ ಮೇಲೆ ದಾಳಿ ಮಾಡಲು ಮತ್ತು ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಗಲಾಟೆ ಮಾಡಲು ಬೆಂಬಲಿಗರಿಗೆ ಕರೆ ಕೊಟ್ಟು,
ದೊಂಬಿ, ಗಲಾಟೆ, ಅಶಾಂತಿ ವಾತಾವರಣ ಉಂಟು ಮಾಡುವ ಉದ್ದೇಶದಿಂದ ವಕೀಲ ಸಮುದಾಯದ ನಡುವೆ ದ್ವೇಷ ಭಾವನೆ ಬಿತ್ತುವ ಒಳಸಂಚು ರೂಪಿಸಿಕೊಂಡು ಸುಮಾರು 40-50ರಷ್ಟು ಗೂಂಡಾ ಜನರಿಗೆ ನ್ಯಾಯಾಲಯದ ಆವರಣದಲ್ಲಿ ದೊಂಬಿ, ಗಲಾಟೆ ಮಾಡುವಂತೆ ಪ್ರಚೋದಿಸಿ ಅಶಾಂತಿ, ವಾತಾವರಣ ಉಂಟು ಮಾಡಿ ನನ್ನ ಮೇಲೆ ಹಲ್ಲೆ ಮಾಡಿಸಿರುತ್ತಾರೆ ಎಂದು ನಾರಾಯಣಸ್ವಾಮಿ ಅವರು ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಕೀಲರು ಮತ್ತು ವಕೀಲ ವೃತ್ತಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಹಾಗೂ ನ್ಯಾಯಾಲಯದ ಆವರಣದಲ್ಲಿ ವಕೀಲರಿಗೆ ಬೆದರಿಕೆ ಹಾಕಿರುವ ಜಗದೀಶ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಅವರು, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರಿಗೆ ದೂರು ನೀಡಿದ್ದಾರೆ.

ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಪ್ರಕರಣದ ಪರ ವಕೀಲರಾದ ಡಿಸೆಂಬರ್ 10ರಂದು ನ್ಯಾಯಾಲಯಕೆ ಹಾಜರಾಗಿದ್ದ ವಕೀಲ ಸುಧನ್ವ ಅವರಿಗೆ ಬೆದರಿಕೆ ಹಾಕಲಾಗಿದೆ. ಫೆ.11ರಂದು ತಮ್ಮ ಬೆಂಬಲಿಗರನ್ನು ಹಾಗೂ ಗೂಂಡಾಗಳ ಗುಂಪು ಕಟ್ಟಿಕೊಂಡು ನ್ಯಾಯಾಲಯದ ಆವರಣಕ್ಕೆ ಬಂದು ಪ್ರಚೋದನೆ ನೀಡಿ, ಗಲಾಟೆ ಮಾಡಿಸಿದ್ದಾರೆ. ಅಲ್ಲದೆ ನ್ಯಾಯಾಲಯದ ರಿಜಿಸ್ಟ್ರಾರ್ ಅವರ ಸಮ್ಮುಖದಲ್ಲೇ ದುವರ್ತನೆ ತೋರಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಯುಕ್ತರಿಗೆ ದೂರು ನೀಡಲಾಗಿದೆ ಎಂದು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ತಿಳಿಸಿದ್ದಾರೆ.

Articles You Might Like

Share This Article