ಕಾಂಗ್ರೆಸ್‌ನಲ್ಲಿ ಮುಂದುವರೆದ ರಾಜೀನಾಮೆ ಪರ್ವ

Social Share

ಜಮ್ಮು, ಆ. 30- ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು ಇಂದು ಪಕ್ಷದ 50 ಕ್ಕೂ ಹೆಚ್ಚು ಮುಖಂಡರು ಎಐಸಿಸಿ ಅಧಿನಾಯಕಿ ಸೋನಿಯಾಗಾಂಧಿ ಅವರಿಗೆ ರಾಜೀನಾಮೆ ಸಲ್ಲಿಸುವ ಮೂಲಕ ಪಕ್ಷಕ್ಕೆ ದೊಡ್ಡ ಆಘಾತ ನೀಡಿದ್ದಾರೆ.

ಜಮ್ಮು ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ತಾರಾ ಚಂದ್, ಮಾಜಿ ಸಚಿವರಾದ ಅಬ್ದುಲ್ ಮಾಜಿದ್ ವಾನಿ, ಮನೋಹರ್ ಲಾಲ್ ಶರ್ಮಾ, ಗುರು ರಾಮ್, ಮಾಜಿ ಶಾಸಕರಾದ ಬಾಲ್ವನ್ ಸಿಂಗ್ ಅವರು ಇಂದು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಪತ್ರಿಕಾಗೋಷ್ಠಿಯಲ್ಲ ತಿಳಿಸಿದ್ದಾರೆ.

ಮಾಜಿ ಶಾಸಕ ಬಾಲ್ವನ್ ಸಿಂಗ್ ಅವರು ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್ನ ಮಾಜಿ ಸಚಿವರು, ಮಾಜಿ ಶಾಸಕರು ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಸಾಮೂಹಿಕ ರಾಜೀನಾಮೆ ಪತ್ರವನ್ನು ಸಲ್ಲಿಸಿ ಗುಲಾಬ್ ನಬಿ ಅಜಾದ್ ಅವರು ಸ್ಥಾಪಿಸಲು ಹೊರಟಿರುವ ನೂತನ ಪಕ್ಷವನ್ನು ಬೆಂಬಲಿಸಲು ಹೊರಟಿದ್ದೇವೆ ಎಂದು ತಿಳಿಸಿದರು.

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಸಭಾ ಸದಸ್ಯರಾಗಿದ್ದ ಗುಲಾಬ್ ನಬಿ ಅಜಾದಂ ಅವರು ಶೀಘ್ರವೇ ರಾಷ್ಟ್ರೀಯ ಪಕ್ಷವೊಂದನ್ನು ಸ್ಥಾಪನೆ ಮಾಡಲು ಹೊರಟಿದ್ದು, ನಬಿ ಕೈ ಬಲಪಡಿಸುವ ದೃಷ್ಟಿಯಿಂದ ಕಾಂಗ್ರೆಸ್ನ ಮಾಜಿ ಸಚಿವರು, ಶಾಸಕರು, ಮುಖಂಡರು, ನೂರಾರೂ ಗ್ರಾಮ ಪಂಚಾಯಿತಿ ಸದಸ್ಯರು, ಪಾಲಿಕೆ ಸದಸ್ಯರು, ಬ್ಲಾಕ್ ಮುಖಂಡರು ಸೇರಿದಂತೆ ರಾಷ್ಟ್ರೀಯ ಮಟ್ಟದ ನಾಯಕರು ಕೂಡ ಕಾಂಗ್ರೆಸ್ ಪಕ್ಷವನ್ನು ತೊರೆದು ಅಜಾದ್ರ ಪಕ್ಷಕ್ಕೆ ಬೆಂಬಲ ನೀಡಲು ಮುಂದಾಗಿದ್ದಾರೆ.

ಕಳೆದ ಶುಕ್ರವಾರವಷ್ಟೇ ಜಮ್ಮು ಕಾಶ್ಮೀರದ ಮಾಜಿ ಸಿಎಂ ಗುಲಾಬ್ ನಬಿ ಅಜಾದ್ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪಕ್ಷವನ್ನು ಬಲಪಡಿಸುವಲ್ಲಿ ಪ್ರಬುದ್ಧರಾಗಿಲ್ಲದಿರುವುದರಿಂದ ದೇಶದಲ್ಲಿ ಪಕ್ಷವು ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸುವ ಮೂಲಕ 5 ದಶಕಕ್ಕೂ ಹೆಚ್ಚು ಕಾಲದ ಕಾಂಗ್ರೆಸ್ನೊಂದಿಗಿನ ಒಡನಾಡವನ್ನು ಕೊನೆಗಾಣಿಸುವ ಮೂಲಕ ಕೈ ಪಕ್ಷಕ್ಕೆ ದೊಡ್ಡ ಹೊಡೆತ ನೀಡಿದರು.

ಗುಲಾಬ್ ನಬಿ ಅಜಾದ್ಯಿಂದ ಶುರುವಾದ ಕಾಂಗ್ರೆಸ್ ಪಕ್ಷದ ರಾಜೀನಾಮೆ ಪರ್ವವು ಮುಂಬರುವ ವಿಧಾನಸಭೆ, ಲೋಕಸಭೆ ಚುನಾವಣೆ ವೇಳೆಗೆ ಮತ್ತಷ್ಟು ಅಧಃಪತನ ತಲುಪುವ ಹಾದಿ ಗೋಚರಿಸಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂ ಅವರು ಪಕ್ಷದ ಸಂಘಟನೆಗೆ ಯೋಜನೆಗಳನ್ನು ರೂಪಿಸುವ ಅವಶ್ಯಕತೆ ಇದೆ.

Articles You Might Like

Share This Article