ಬೆಂಗಳೂರು, ಆ.1- ಮುಖ್ಯಮಂತ್ರಿ ಸಿದ್ದ ರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ದೆಹಲಿಗೆ ತೆರಳು ತ್ತಿದ್ದು, ಎರಡು ದಿನಗಳ ಕಾಲ ದೆಹಲಿಯಲ್ಲಿ ಉಳಿದು, ಪಕ್ಷ ಹಾಗೂ ಸರ್ಕಾರದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಕಳೆದ ಒಂದು ತಿಂಗಳ ಈಚೆಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ 5ನೇ ದೆಹಲಿ ಭೇಟಿ ಇದಾಗಿದೆ. ಪಕ್ಷದ ವಿವಿಧ ಸಭೆ ಸಮಾರಂಭಗಳಲ್ಲಿ ಭಾಗವಹಿಸಲು ಇಬ್ಬರೂ ನಾಯಕರು ದೆಹಲಿಗೆ ತೆರಳುತ್ತಿದ್ದಾರೆ ಎಂದು ಮೇಲ್ನೋಟಕ್ಕೆ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ದೆಹಲಿಗೆ ತೆರಳುತ್ತಿದ್ದಾರೆ ಎಂಬಂತೆ ಕಂಡು ಬಂದರೂ, ಆಂತರಿಕವಾಗಿ ಇಬ್ಬರ ನಡುವೆ ಇರುವ ಅಸಮಾಧಾನಗಳನ್ನು ಸರಿಪಡಿಸುವ ಕಸರತ್ತು ದೆಹಲಿಯಲ್ಲಿ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.
ನಾಯಕತ್ವದ ವಿಚಾರವಾಗಿ ಡಿ.ಕೆ. ಶಿವಕುಮಾರ್ ಬಣ ಸಿದ್ದರಾಮಯ್ಯ ಅವರ ವಿರುದ್ಧ ನಾನಾ ವದಂತಿಗಳು ಹರಡಿತ್ತು. ದೆಹಲಿಯ ವರಿಷ್ಠರ ಜೊತೆ ಚರ್ಚೆ ನಡೆಸುವ ಮುನ್ನ ಸಿದ್ದರಾಮಯ್ಯ ತಾವು 5 ವರ್ಷ ಅಧಿಕಾರದಲ್ಲಿ ಮುಂದುವರೆಯಲಿದ್ದು, ಡಿ.ಕೆ. ಶಿವಕುಮಾರ್ ಅವರಿಗೆ ಹೆಚ್ಚಿನ ಶಾಸಕರ ಬೆಂಬಲವಿಲ್ಲ ಎಂದಿದ್ದರು.
ಅದರ ನಂತರ ಶಾಸಕರೂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗಿನ ಸಭೆಗೆ ಸಿದ್ದರಾಮಯ್ಯ ಡಿ.ಕೆ. ಶಿವಕುಮಾರ್ ಅವರನ್ನು ಹೊರಗಿಟ್ಟಿದ್ದರು. ಇದು ಸಾಮಾನ್ಯ ಎಂದು ಬಿಂಬಿಸುವ ಪ್ರಯತ್ನ ನಡೆಯಿತ್ತಾದರೂ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನಡುವೆ ಸೌಹಾರ್ದತೆ ಇಲ್ಲ ಎಂದು ಸ್ಪಷ್ಟವಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್ ಸುರ್ಜೇವಾಲ ಬೆಂಗಳೂರಿನಲ್ಲಿ ಶಾಸಕರು, ಸಚಿವರ ಜೊತೆ ಪ್ರತ್ಯೇಕ ಸಭೆ ನಡೆಸಿ, ಕೆಲ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದರು. ಅದರ ಮುಂದುವರೆದ ಭಾಗವಾಗಿ ಸಿದ್ದರಾಮಯ್ಯ, ಶಾಸಕರು, ಸಚಿವರ ಬಗ್ಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಉಪಸ್ಥಿತರಿದ್ದರು.
ಪಕ್ಷದ ಪ್ರಮುಖ ನಾಯಕರಾಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ಸಭೆಯಲ್ಲಿ ಅವಕಾಶ ನೀಡದಿರುವುದು ನಾನಾ ರೀತಿಯ ಚರ್ಚೆಗಳಿಗೆ ಕಾರಣವಾಗಿತ್ತು. ಮುಖ್ಯಮಂತ್ರಿಯವರು ಆ. 7ರಂದು ನಡೆಸಲಿರುವ ರಾಮನಗರ ಜಿಲ್ಲೆಯ ಶಾಸಕರು ಹಾಗೂ ಸಚಿವರ ಸಭೆಗೆ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಿದ್ದಾರೆ. ಈ ಮೂಲಕ ಎಲ್ಲಾ ಶಾಸಕರಂತೆಯೇ ಡಿ.ಕೆ.ಶಿವಕುಮಾರ್ ಕೂಡ ಒಬ್ಬ ಶಾಸಕರು ಎಂಬ ಸಾಮಾನ್ಯ ಧೋರಣೆಯನ್ನು ಮುಖ್ಯಮಂತ್ರಿಯವರು ಹೊಂದಿರುವಂತೆ ಕಂಡುಬರುತ್ತಿದೆ.
ಇದು ಡಿ.ಕೆ. ಶೀವಕುಮಾರ್ ಅವರ ಬಣಕ್ಕೆ ಅಪಥ್ಯವಾಗಿದ್ದು, ಒಳಗೊಳಗೆ ಅಸಮಾಧಾನ ಮಡುಗಟ್ಟಿದೆ. ಎಐಸಿಸಿಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ಆಗಮಿಸಿ ಆ. 5ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯ ಪೂರ್ವ ಸಿದ್ಧತೆಗಳ ಬಗ್ಗೆ ಸಭೆ ಹಾಗೂ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆಯಲ್ಲೂ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವಿನ ಹೊಂದಾಣಿಕೆ ಅಷ್ಟಕಷ್ಟೇ ಎಂಬಂತೆ ಕಂಡು ಬರುತ್ತಿದೆ. ಈ ಮೊದಲಿನಿಂದಲೂ ನಾಯಕತ್ವದ ವಿಚಾರವಾಗಿ ಇಬ್ಬರ ನಡುವೆ ಮುಸುಕಿನ ಗುದ್ದಾಟ ಕೇಳಿಬರುತ್ತಲೇ ಇದ್ದು, ದೆಹಲಿಯಲ್ಲಿ ಪದೇ-ಪದೇ ಸಂಧಾನ ಸಭೆ ನಡೆಸುವ ಪರಿಸ್ಥಿತಿ ಎದುರಾಗಿದೆ.
- 14 ಜಿಲ್ಲೆಗಳ 42 ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಿದ ನಿಖಿಲ್ ಕುಮಾರಸ್ವಾಮಿ
- ನಟಿ ರಮ್ಯಾಗೆ ಅವಹೇಳನಕಾರಿ ಸಂದೇಶ ಕಳುಹಿಸಿದ್ದ ಮೂವರು ಕಿಡಿಗೇಡಿಗಳ ಬಂಧನ
- ಚುನಾವಣಾ ಆಯೋಗವನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಿರುವುದೇಕೆ..? : ಡಿ.ಕೆ. ಸುರೇಶ್
- ಅರ್ಜುನ ಆನೆ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪನೆ : ಸಚಿವ ಖಂಡ್ರೆ
- ಗುಂಡಿ ಬಿದ್ದ ರಸ್ತೆಗಳಿಗೆ ಪ್ರಶಸ್ತಿ ನೀಡಿ ಬಿಬಿಎಂಪಿ ಕಾಲೆಳೆದ ಪ್ರಜ್ಞಾವಂತ ನಾಗರೀಕರು