ಬೆಂಗಳೂರು, ಫೆ.22- ರಾಜ್ಯದಲ್ಲಿನ ವಿವಿಧ ಸಾರಿಗೆ ನಿಗಮಗಳಿಗೆ 3600ಕ್ಕೂ ಹೆಚ್ಚು ಹೊಸ ಬಸ್‍ಗಳನ್ನು ಖರೀದಿ ಮಾಡಲಾಗುತ್ತಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕ ಭಾಗಕ್ಕೆ 800 ಬಸ್‍ಗಳನ್ನು ಒದಗಿಸಲಾಗುವುದು ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಪರವಾಗಿ ಕಾಂಗ್ರೆಸ್ ಸದಸ್ಯ ಇ.ತುಕಾರಾಂ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಬಸ್ ಖರೀದಿಸುತ್ತಿರುವುದರಿಂದ ಅಗತ್ಯವಿರುವ ಕಡೆ ಆದ್ಯತೆ ಮೇಲೆ ಬಸ್‍ಗಳನ್ನು ಒದಗಿಸಲಾಗುವುದು. ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗೆ ಯಾವುದೇ ರೀತಿ ತೊಂದರೆ ಆಗದಂತೆ ಸಾರಿಗೆ ಸೌಲಭ್‍ಯ ಕಲ್ಪಿಸಲಾಗುವುದು ಎಂದರು.
ಇ-ವೀಸಾ ಸ್ವೀಕರಿಸದ ಬ್ರಿಟನ್ ಪ್ರಜೆ ದುಬೈಗೆ ವಾಪಸ್
ಕಲ್ಯಾಣ ಕರ್ನಾಟಕ ವ್ಯಾಪ್ತಿಯ 41 ವಿಧಾನಸಭಾ ಕ್ಷೇತ್ರಗಳಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಒಟ್ಟು 45 ಘಟಕಗಳಿದ್ದು, ಈ ಪೈಕಿ ರಾಯಚೂರಿನಲ್ಲಿ ಹೊಸದಾಗಿ ಘಟಕ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್‍ನ ಸದಸ್ಯ ಡಾ.ರಂಗನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕುಣಿಗಲ್ ಕ್ಷೇತ್ರದಲ್ಲಿ ಸಾರಿಗೆ ಬಸ್‍ಗಳ ಸಮಸ್ಯೆ ನಿವಾರಣೆ ಸಂಬಂಧ ಮಧ್ಯಾಹ್ನ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
IAS- IPS ಬೀದಿ ಜಗಳಕ್ಕೆ ಮತ್ತೊಂದು ಟ್ವಿಸ್ಟ್
ಆಡಳಿತ ಪಕ್ಷದ ಹಾಲಾಡಿ ಶ್ರೀನಿವಾಸಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕುಂದಾಪುರದ ಪ್ರಾದೇಶಿಕ ಸಾರಿಗೆ ಕಚೇರಿ ತೆರೆಯಲಯ ನಿಗದಿಪಡಿಸಲಾದ ಮಾನದಂಡಗಳ ಪ್ರಕಾರ ಅವಕಾಶವಿಲ್ಲ. ಕುಂದಾಪುರ ಮತ್ತು ಬೈಂದೂರು ತಾಲ್ಲೂಕಿನ ಸುತ್ತಮುತ್ತ ತಾಲ್ಲೂಕಿನ ಸಾರ್ವಜನಿಕರ ಅನುಕೂಲಕ್ಕಾಗಿ ಪ್ರತಿ ಮಂಗಳವಾರ ಕುಂದಾಪುರದಲ್ಲಿ ಸಾರಿಗೆ ಶಿಬಿರ ನಡೆಸಲಾಗುತ್ತಿದ್ದೆ. 60 ಕಿ.ಮೀ. ದೂರವಿದ್ದು, ಕುಂದಾಪುರದಲ್ಲಿ ಪ್ರಾದೇಶಿಕ ಕಚೇರಿ ತೆರೆಯಬೇಕು ಎಂಬ ಶಾಸಕರ ಬೇಡಿಕೆ ಬಗ್ಗೆ ಸಾರಿಗೆ ಸಚಿವರ ಗಮನಕ್ಕೆ ತರಲಾಗುವುದು ಎಂದರು.
Legislative Assembly, 3600, new buses,