Friday, November 22, 2024
Homeರಾಜ್ಯಬಿಜೆಪಿ-ಜೆಡಿಎಸ್ ಸದಸ್ಯರ ಸಭಾತ್ಯಾಗ

ಬಿಜೆಪಿ-ಜೆಡಿಎಸ್ ಸದಸ್ಯರ ಸಭಾತ್ಯಾಗ

ಬೆಂಗಳೂರು,ಫೆ.21- ಮುಖ್ಯಮಂತ್ರಿ ಸಿದ್ದರಾಮಯ್ಯನವರ ಉತ್ತರದಿಂದ ತೃಪ್ತರಾಗದ ಬಿಜೆಪಿ-ಜೆಡಿಎಸ್ ಸದಸ್ಯರು ವಿಧಾನಪರಿಷತ್‍ನಲ್ಲಿ ಸಭಾತ್ಯಾಗ ಮಾಡಿದರು. ರಾಜ್ಯಪಾಲರ ಭಾಷಣಕ್ಕೆ ಸುದೀರ್ಘ ಉತ್ತರ ನೀಡಿದ ಸಿದ್ದರಾಮಯ್ಯನವರು, ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳ ಬಗ್ಗೆ ಹೇಳಿದ್ದರು. ಈ ವೇಳೆ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ತಮಗೆ ಮಾತನಾಡಲು ಅವಕಾಶ ಕೊಡಬೇಕೆಂದು ಮನವಿ ಮಾಡಿದರು.

ಮುಖ್ಯಮಂತ್ರಿಗಳು ಮಾತನಾಡುವ ವೇಳೆ ಪದೇ ಪದೇ ಎದ್ದುನಿಂತು ಭಾಷಣಕ್ಕೆ ಅಡ್ಡಿಪಡಿಸಿದ್ದೀರಿ. ಪುನಃ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ಹೊರಟ್ಟಿ ಹೇಳುತ್ತಿದ್ದಂತೆ, ತೀವ್ರ ಆಕ್ಷೇಪ ವ್ಯಕ್ತವಾಯಿತು. ಮುಖ್ಯಮಂತ್ರಿಯವರು ಸತತ 3 ಗಂಟೆ ಉತ್ತರ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರದ ಬಗ್ಗೆಯೂ ಮಾತನಾಡಿದ್ದಾರೆ. ಇದು ಸಂಪೂರ್ಣವಾಗಿ ಚುನಾವಣಾ ಪ್ರಚಾರ ಭಾಷಣವಾಗಿದೆ. ಕೇವಲ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರಮೋದಿ ಮತ್ತು ಬಿಜೆಪಿಯನ್ನುಗುರಿಯಾಗಿಟ್ಟುಕೊಂಡು ಟೀಕೆ ಮಾಡಿದ್ದಾರೆ. ನಾವು ಮಾತನಾಡಿದರೆ ತಪ್ಪು ಸಂದೇಶ ಹೋಗುತ್ತದೆ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಮನವಿ ಮಾಡಿದರು.

ಅವರು ರಾಜ್ಯಪಾಲರ ಭಾಷಣಕ್ಕೆ ಉತ್ತರ ಕೊಟ್ಟಿದ್ದರೆ ನಮ್ಮದೇನು ತಕರಾರು ಇರುತ್ತಿರಲಿಲ್ಲ. ಕೇವಲ ಕೇಂದ್ರವನ್ನು ಗುರಿಯಾಗಿಟ್ಟುಕೊಂಡು ಟೀಕೆ ಮಾಡಿದ್ದರ ನಾವು ಅದನ್ನು ಸಹಿಸಿಕೊಂಡು ಸುಮ್ಮನಿರಬೇಕಾ? ಮಾತನಾಡಲು ಅವಕಾಶ ಕೊಡಿ ಎಂದು ಆಗ್ರಹಿಸಿದರು. ಈ ಹಂತದಲ್ಲಿ ಆಡಳಿತ, ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಆರೋಪ, ಪ್ರತ್ಯಾರೋಪಗಳು ನಡೆದವು. ಮುಖ್ಯಮಂತ್ರಿಗಳ ಪರವಾಗಿ ಭೋಸರಾಜ್, ಸಚಿವರು ಹಾಗೂ ಕಾಂಗ್ರೆಸ್ ಸದಸ್ಯರು ಬೆಂಬಲವಾಗಿ ನಿಂತರು.

ಸರ್ಕಾರದಿಂದ ಕಂದಾಯ ವೆಚ್ಚ ದುರ್ಬಳಕೆ : ಬೊಮ್ಮಾಯಿ ಆರೋಪ

ಕೇಂದ್ರದಿಂದ ಅನ್ಯಾಯವಾಗುತ್ತಿದ್ದರೂ ನಾವು ಸುಮ್ಮನೆ ಕೂರಬೇಕೇ? ಮುಖ್ಯಮಂತ್ರಿಗಳು ಸತ್ಯವನ್ನೇ ಹೇಳಿದ್ದಾರೆ. ಪುನಃ ಪ್ರತಿಪಕ್ಷದವರು ಮಾತನಾಡುವುದರಲ್ಲಿ ಏನು ಅರ್ಥವಿದೆ. ಈಗಾಗಲೇ ಮುಖ್ಯಮಂತ್ರಿಗಳು ಉತ್ತರ ಕೊಟ್ಟಿರುವುದರಿಂದ ಪುನಃ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ಪೀಠಕ್ಕೆ ಮನವಿ ಮಾಡಿದರು. ಈ ಹಂತದಲ್ಲಿ ಎರಡು ಕಡೆ ಗದ್ದಲ ಪ್ರಾರಂಭವಾಯಿತು. ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಕ್ಕಾರದ ಘೋಷಣೆಗಳನ್ನು ಕೂಗಿ ಸಭಾ ತ್ಯಾಗ ಮಾಡಿದರೆ, ಕಾಂಗ್ರೆಸ್ ಸದಸ್ಯರು ನಮ್ಮ ತೆರಿಗೆ ನಮ್ಮ ಹಕ್ಕು, ಕನ್ನಡಿಗರ ದ್ರೋಹಿಗಳು ಬಿಜೆಪಿಯವರು ಎಂದು ಘೋಷಣೆ ಕೂಗಿದರು.

RELATED ARTICLES

Latest News