ಚಿರತೆ ಸೆರೆಗೆ ವಿಶೇಷ ತಂಡ ರಚನೆ : ಮೃತರ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಣೆ

Social Share

ಬೆಂಗಳೂರು, ಡಿ.3- ರಾಜಧಾನಿ ಬೆಂಗಳೂರಿನ ಹೊರಭಾಗದಲ್ಲಿ ಸಾರ್ವಜನಿಕರಿಗೆ ತೀವ್ರ ಆತಂಕ ಸೃಷ್ಟಿಸಿರುವ ಚಿರತೆಯನ್ನು ಸೆರೆಹಿಡಿಯಲು ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಹೊರವಲಯ ಸೇರಿದಂತೆ ಸುತ್ತಮುತ್ತಲಿನ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿರುವ ಕಾರಣ, ಸಹಜವಾಗಿ ಜನತೆ ಆತಂಕ್ಕೀಡಾಗಿದ್ದಾರೆ. ತಕ್ಷಣವೇ ಇದನ್ನು ಸೆರೆಹಿಡಿಯಲು ವಿಶೇಷ ತಂಡ ರಚಿಸಲು ಸಂಬಂಧಪಟ್ಟವರಿಗೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು.

ಈ ಮೊದಲು ಚಿರತೆ ಹಾವಳಿ ಕಾಡು ಇರುವ ಪ್ರದೇಶಗಳಲ್ಲಿ ಇದರ ಹಾವಳಿ ಇರುತ್ತಿತ್ತು. ಇವಾಗ ಬೆಂಗಳೂರು ಸಮೀಪ ಕಾಣಿಸಿಕೊಂಡಿದೆ. ಕೂಡಲೇ ಅದನ್ನು ಬೇಟೆಯಾಡಲು ಅಗತ್ಯ ಸೂಚನೆ ನೀಡಿದ್ದೇನೆ. ಅದನ್ನು ಆದಷ್ಟು ಬೇಗ ಹಿಡಿದು ಕಾಡಿಗೆ ಬಿಡಲು ಸೂಚಿಸಲಾಗಿದೆ.ಬೆಂಗಳೂರು ಹಾಗೂ ಮೈಸೂರು ವಲಯದಲ್ಲಿ ಆನೆ ಕಾರಿಡಾರ್ ಸುತ್ತಮುತ್ತ ಚಿರತೆಗಳೂ ಇವೆ.

ಅಮೆರಿಕಾಗೂ ಕಾಡುತ್ತಿದೆ ಚೀನಾದ ಟಿಕ್‍ಟಾಕ್ ಭಯ

ಚಿರತೆ ದಾಳಿ ಆಗುತ್ತಿರುವುದನ್ನು ತಡೆಯಲು ವಿಶೇಷ ತಂಡವನ್ನು ರಚಿಸಲಾಗಿದ್ದು, ನಿರ್ದಿಷ್ಟವಾಗಿ ಕ್ರಮಕೈಗೊಳ್ಳಲು ತಿಳಿಸಲಾಗಿದೆ. ಅವುಗಳನ್ನು ನಿಯಂತ್ರಿಸಲು ಹಾಗೂ ಕಾಡು ಬಿಟ್ಟು ಆಚೆ ಬಂದಿರುವ ಚಿರತೆಗಳನ್ನು ಹಿಡಿಯಲು ತಂಡ ಕಾರ್ಯಾಚರಣೆ ಮಾಡಲಿದೆ ಎಂದರು.

ಚಿರತೆ ಹಾವಳಿಯಿಂದ ಮೃತಪಟ್ಟವರಿಗೆ ಸರ್ಕಾರದ ವತಿಯಿಂದ ತಲಾ 15 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಘೋಷಿಸಿದರು. ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲಾಗುವುದು.

ಅಪಘಾತಗಳ ನಗರಿ ಎಂಬ ಕುಖ್ಯಾತಿ ಪಾತ್ರವಾದ ಸಿಲಿಕಾನ್‍ಸಿಟಿ ಬೆಂಗಳೂರು

ಮೊದಲು ಕಾಡುಪಕ್ಕದಲ್ಲಿ ಆಗುತ್ತಿತ್ತು. ಈಗ ಬೆಂಗಳೂರಿನ ಆಸುಪಾಸಿನಲ್ಲಿ ಆಗುತ್ತಿರುವುದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕಳೆದ ಹಲವಾರು ದಿನಗಳಿಂದ ಅದರ ಬೇಟೆಯಾಡಲು ಪ್ರಯತ್ನ ಮಾಡಲಾಗುತ್ತಿದ್ದು, ಅದಕ್ಕೆ ಬಲೆಯನ್ನೂ ಹಾಕಲಾಗಿದೆ. ಅದನ್ನು ಜೀವಂತವಾಗಿ ಹಿಡಿದು ಕಾಡಿಗೆ ಬಿಡಲು ಇಲಾಖೆಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

leopard, capture, special team, Bengaluru, CM Bommai,

Articles You Might Like

Share This Article