ಬಿಜೆಪಿಯವರು ಪ್ರತಿಭಟನೆ ಮಾಡಲಿ, ನಾವು ಪೆಟ್ರೋಲ್‌, ಡೀಸೆಲ್‌ ದರ ಕಡಿಮೆ ಮಾಡಲ್ಲ : ಗೃಹಸಚಿವ ಪರಮೇಶ್ವರ್‌

ಬೆಂಗಳೂರು,ಜೂ.19- ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರವನ್ನು ಕಡಿಮೆ ಮಾಡುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ದರ ಹೆಚ್ಚಳ ಮಾಡಿದ್ದು, ವಾಹನ ಸವಾರರು ಪೆಟ್ರೋಲ್‌ , ಡೀಸೆಲ್‌ನ್ನು ಖರೀದಿ ಮಾಡುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಕಡಿಮೆ ಇರುವುದರಿಂದ ನೆರೆ ರಾಜ್ಯದವರು ಬಂದು ಪೆಟ್ರೋಲ್‌, ಡೀಸೆಲ್‌ ಹಾಕಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಹಿಂಪಡೆಯುವಂತೆ ಒತ್ತಾಯಿಸಿ ಬಿಜೆಪಿಯವರು ಪೊಲೀಸರ ಅನುಮತಿ ಪಡೆದು ರಸ್ತೆತಡೆ ನಡೆಸಬಹುದಾಗಿದೆ. ಸುಪ್ರೀಂಕೋರ್ಟ್‌ ತೀರ್ಪಿನ ಪ್ರಕಾರ ರಸ್ತೆತಡೆ ಮಾಡುವಂತಿಲ್ಲ. … Continue reading ಬಿಜೆಪಿಯವರು ಪ್ರತಿಭಟನೆ ಮಾಡಲಿ, ನಾವು ಪೆಟ್ರೋಲ್‌, ಡೀಸೆಲ್‌ ದರ ಕಡಿಮೆ ಮಾಡಲ್ಲ : ಗೃಹಸಚಿವ ಪರಮೇಶ್ವರ್‌