ಮುಂಬೈ,ಮಾ.4-ಮಹಾರಾಷ್ಟ್ರದ ಆರು ಕೆಮ್ಮು ಸಿರಪ್ ತಯಾರಕರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. ಬಿಜೆಪಿ ಶಾಸಕ ಆಶಿಶ್ ಶೇಲಾರ್ ಅವರ ಗಮನ ಸೆಳೆಯುವ ನೋಟೀಸ್‍ಗೆ ಉತ್ತರಿಸಿರುವ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಸಚಿವ ಸಂಜಯ್ ರಾಥೋಡ್ ಅವರು ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.
ಉತ್ತರ ಪ್ರದೇಶದ ನೋಯ್ಡಾ ಮೂಲದ ಸಂಸ್ಥೆಯೊಂದು ತಯಾರಿಸಿದ ಕೆಮ್ಮಿನ ಸಿರಪ್ ಕಳೆದ ವರ್ಷ ಉಜ್ಬೇಕಿಸ್ತಾನದಲ್ಲಿ 18 ಮಕ್ಕಳ ಸಾವಿಗೆ ಕಾರಣವಾಗಿತ್ತು ಎಂದು ಆರೋಪಿಸಲಾಗಿದೆ. ಸಂಸ್ಥೆಯ ಮೂವರು ಉದ್ಯೋಗಿಗಳನ್ನು ಬಂಧಿಸಿರುವುದಾಗಿ ನೋಯ್ಡಾ ಪೊಲೀಸರು ತಿಳಿಸಿದ್ದಾರೆ.
ಪಾಕ್‍ನಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಿಗೆ ಉಳಿಗಾಲವಿಲ್ಲ ; ಭಾರತ ತಿರುಗೇಟು
ರಾಜ್ಯದಲ್ಲಿರುವ 108 ಕೆಮ್ಮು ಸಿರಪ್ ತಯಾರಕರ ಪೈಕಿ 84 ತಯಾರಕರ ವಿರುದ್ಧ ಮಹಾರಾಷ್ಟ್ರ ಸರ್ಕಾರವು ತನಿಖೆಯನ್ನು ಪ್ರಾರಂಭಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈಗಾಗಲೇ ಆರು ಕಂಪನಿಗಳ ಪರವಾನಗಿಯನ್ನು ಅಮಾನತುಗೊಳಿಸಲಾಗಿದ್ದು, ಅವುಗಳಲ್ಲಿ ನಾಲ್ಕು ಉತ್ಪಾದನೆಯನ್ನು ನಿಲ್ಲಿಸುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಮುಂದುವರೆದ ಹಿಂದೂ ದೇಗುಲಗಳ ಮೇಲೆ ದಾಳಿ
ನಿಯಮಗಳ ಉಲ್ಲಂಘನೆಗಾಗಿ 17 ಸಂಸ್ಥೆಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಭಾರತದಿಂದ ಆಮದು ಮಾಡಿಕೊಳ್ಳಲಾದ ಕೆಮ್ಮು ಸಿರಪ್‍ಗಳಿಂದಾಗಿ ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವನ್ನಪ್ಪಿದ್ದಾರೆ ಆದರೆ ನಿಯಮಗಳ ಉಲ್ಲಂಘನೆಯ ಆರೋಪ ಎದುರಿಸುತ್ತಿರುವ ಕಂಪನಿಯು ಹರಿಯಾಣದಲ್ಲಿದ್ದು, ಮಹಾರಾಷ್ಟ್ರದಲ್ಲಿ ಯಾವುದೇ ಉತ್ಪಾದನಾ ಘಟಕವನ್ನು ಹೊಂದಿಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.
Licenses, 6 Cough, Syrup, Makers, Suspended, Maharashtra,