Tuesday, May 30, 2023
Homeಇದೀಗ ಬಂದ ಸುದ್ದಿಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿಗೆ ಸೂಕ್ತ ಸ್ಥಾನಮಾನ

ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿಗೆ ಸೂಕ್ತ ಸ್ಥಾನಮಾನ

- Advertisement -

ಬೆಂಗಳೂರು : ಬಿಜೆಪಿಯಿಂದ ವಲಸೆ ಬಂದ ಲಿಂಗಾಯಿತ ಸಮುದಾಯದ ಪ್ರಮುಖ ನಾಯಕರಿಗೆ ಸ್ಥಾನಮಾನ ನೀಡುವ ಕುರಿತು ಕಾಂಗ್ರೆಸ್ನಲ್ಲಿ ಚರ್ಚೆಗಳು ನಡೆದಿವೆ.ವಿಧಾನಸಭೆ ಚುನಾವಣೆಗೂ ಕೆಲ ದಿನಗಳ ಹಿಂದೆ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ,ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.ಇದರ ಬೆನ್ನಲೇ ಬಿಜೆಪಿಯನ್ನು ಲಿಂಗಾಯಿತ ವಿರೋಧಿ ಎಂದು ಬಿಂಬಿಸಿ ಕಾಂಗ್ರೆಸ್ ರಾಜಕೀಯ ಲಾಭ ಪಡೆದುಕೊಂಡಿತ್ತು. ಚುನಾವಣೆಯಲ್ಲಿ ಲಕ್ಷ್ಮಣ್ ಸವದಿ ಅಥಣಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರೆ, ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಕೇಂದ್ರದಲ್ಲಿ ಸೋಲು ಕಂಡಿದ್ದಾರೆ.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಖಿಲ್ ರಾಜೀನಾಮೆ

ಈ ಇಬ್ಬರಲ್ಲಿ ಒಬ್ಬರಿಗೆ ಸಂಪುಟದಲ್ಲಿ ಅವಕಾಶ ನೀಡುವ ಕುರಿತು ಪರಿಶೀಲಿಸಲಾಗುತ್ತಿದೆ. ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್, ಪಿ.ಎಂ.ಅಶೋಕ್, ಆಸೀಫ್ ಸೇಠ್, ಗಣೇಶ್ ಹುಕ್ಕೇರಿ ಸೇರಿದಂತೆ ಅನೇಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.ಈ ಹಿನ್ನಲೆಯಲ್ಲಿ ಲಕ್ಷ್ಮಣ್ ಸವದಿ ಅವರಿಗೆ ತಕ್ಷಣಕ್ಕೆ ಸಂಪುಟದಲ್ಲಿ ಅವಕಾಶ ಕಲ್ಪಿಸುವುದು ಕಷ್ಟಸಾಧ್ಯ ಎಂಬ ಚರ್ಚೆಗಳು ನಡೆಯುತ್ತಿವೆ. ಇನ್ನು ಹುಬ್ಬಳ್ಳಿ-ಧಾರವಾಡ ಜಿಲ್ಲೆಯಿಂದ ಗೆಲುವು ಸಾಧಿಸುವ ವಿನಯ್ ಕುಲಕರ್ಣಿ, ಪ್ರಸಾದ್ ಅಬ್ಬಯ್ಯ, ಸಂತೋಷ್ ಲಾಡ್ ಅವರು ಸಂಪುಟದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.

ಚುನಾವಣೆಯಲ್ಲಿ ಸೋಲು ಕಂಡಿರುವ ಜಗದೀಶ್ ಶೆಟ್ಟರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡರೆ ಮೂಲ ಕಾಂಗ್ರೆಸಿಗರು ಅಸಮಾಧಾನಗೊಳ್ಳಬಹುದು ಎಂಬ ಆತಂಕವಿದೆ. ಆದರೂ ಈ ಇಬ್ಬರಲ್ಲಿ ಒಬ್ಬರಿಗೆ ಅವಕಾಶ ನೀಡಬೇಕೆಂಬ ಚರ್ಚೆಗಳು ನಡೆಯುತ್ತಿವೆ.ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಲಿಂಗಾಯಿತ ಸಮುದಾಯದ 39 ಮಂದಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ನ 135 ಶಾಸಕರಲ್ಲಿ ಶೇ.30ರಷ್ಟು ಪಾಲು ಪಡೆದಿದ್ದಾರೆ. ಇದಕ್ಕೆ ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿಯಂತಹ ಹಿರಿಯರು ಬಿಜೆಪಿ ತೊರೆದಿದ್ದು ಕಾರಣ ಎಂದು ಹೇಳಲಾಗುತ್ತಿದೆ.

ಉಕ್ರೇನ್ ರಾಜಧಾನಿ ಕೈವ್ ಮೇಲೆ ರಷ್ಯಾ ಡ್ರೋನ್ ದಾಳಿ

ಒಂದು ವೇಳೆ ಜಗದೀಶ್ ಶೆಟ್ಟರ್ ಸಂಸತ್ ಚುನಾವಣೆಗೆ ಸ್ರ್ಪಧಿಸಲು ಒಪ್ಪಿಕೊಂಡರೆ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಅವರಿಗೆ ಅವಕಾಶ ಮಾಡಿಕೊಡಲು ಕಾಂಗ್ರೆಸ್ ಸಿದ್ದವಿದೆ.ಸಹಜವಾಗಿ ಶೆಟ್ಟರ್ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ತ್ರಾಸದಾಯಕ ಪ್ರಕ್ರಿಯೆಗಳಿಂದ ಕಾಂಗ್ರೆಸಿಗರು ನಿರಾಳರಾಗಲಿದ್ದಾರೆ.ಮೂಲಗಳ ಪ್ರಕಾರ ಶೆಟ್ಟರ್ ಅವರ ಮುಂದೆ ಎಲ್ಲ ಆಯ್ಕೆಗಳನ್ನು ಮುಂದಿಟ್ಟಿದ್ದು, ಅಭಿಪ್ರಾಯ ಹೇಳಲು ಅವರು ಸಮಯ ಕೇಳಿದ್ದಾರೆ ಎನ್ನಲಾಗಿದೆ. ಇನ್ನು ಲಕ್ಷ್ಮಣ್ ಸವದಿ, ಪಕ್ಷ ತಮ್ಮ ಹಿನ್ನಲೆಗೆ ಅನುಗುಣವಾಗಿ ಅವಕಾಶ ನೀಡಬೇಕೆಂದು ಪ್ರತಿಪಾದಿಸಿದ್ದಾರೆ.

lingayatleaders, #JagdishShettar, #LakshmanaSavadi, #Congress,

- Advertisement -
RELATED ARTICLES
- Advertisment -

Most Popular