Monday, December 2, 2024
Homeರಾಷ್ಟ್ರೀಯ | Nationalಕೇರಳಕ್ಕೆ ಬರಲಿದೆ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ಫುಟ್ಬಾಲ್‌ ತಂಡ

ಕೇರಳಕ್ಕೆ ಬರಲಿದೆ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ಫುಟ್ಬಾಲ್‌ ತಂಡ

Lionel Messi and Argentina Football Team to play in Kerala next year

ತಿರುವನಂತಪುರಂ, ನ.20 (ಪಿಟಿಐ) – ವಿಶ್ವ ವಿಖ್ಯಾತ ದಿಗ್ಗಜ ಆಟಗಾರ ಲಿಯೋನೆಲ್‌ ಮೆಸ್ಸಿ ಸೇರಿದಂತೆ ಅರ್ಜೆಂಟೀನಾ ಫುಟ್ಬಾಲ್‌ ತಂಡ ಮುಂದಿನ ವರ್ಷ ಅಂತಾರಾಷ್ಟ್ರೀಯ ಪಂದ್ಯಕ್ಕಾಗಿ ಕೇರಳಕ್ಕೆ ಭೇಟಿ ನೀಡಲಿದೆ.

ನಮ ರಾಜ್ಯದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡವೂ ಫುಟ್ಬಾಲ್‌ ಆಡುವ ಮೂಲಕ ಕ್ರೀಡಾ ಪ್ರೇಮಿಗಳನ್ನು ರಂಜಿಸಲಿದ್ದಾರೆ ಎಂದು ಕೇರಳ ಕ್ರೀಡಾ ಸಚಿವ ವಿ ಅಬ್ದುರಹಿಮಾನ್‌ ಬಹಿರಂಗಪಡಿಸಿದ್ದಾರೆ.

ಫುಬ್ಬಾಲ್‌ ಪಂದ್ಯವನ್ನು ರಾಜ್ಯ ಸರ್ಕಾರದ ಸಂಪೂರ್ಣ ಮೇಲ್ವಿಚಾರಣೆಯಲ್ಲಿ ನಡೆಸಲಾಗುವುದು ಎಂದು ಅವರು ಹೇಳಿದರು.ಈ ಉನ್ನತ ಮಟ್ಟದ ಫುಟ್ಬಾಲ್‌ ಪಂದ್ಯಾವಳಿಯನ್ನು ಆಯೋಜಿಸಲು ಎಲ್ಲಾ ಹಣಕಾಸಿನ ನೆರವು ರಾಜ್ಯದ ವ್ಯಾಪಾರಿಗಳಿಂದ ಒದಗಿಸಲಾಗುವುದು ಎಂದು ಸಚಿವರು ಹೇಳಿದರು, ಐತಿಹಾಸಿಕ ಸಂದರ್ಭವನ್ನು ಆಯೋಜಿಸುವ ಕೇರಳದ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

RELATED ARTICLES

Latest News