Sunday, September 15, 2024
Homeರಾಷ್ಟ್ರೀಯ | Nationalಕೇಜ್ರಿವಾಲ್‌ ನ್ಯಾಯಾಂಗ ಬಂಧನ ಸೆ.3 ರವರೆಗೆ ವಿಸ್ತರಣೆ

ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಸೆ.3 ರವರೆಗೆ ವಿಸ್ತರಣೆ

Liquor policy case: Arvind Kejriwal's judicial custody in CBI probe extended till Sept 3

ನವದೆಹಲಿ, ಆ.27 (ಪಿಟಿಐ) – ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಸೆಪ್ಟೆಂಬರ್‌ 3 ರವರೆಗೆ ವಿಸ್ತರಿಸಿದೆ.

ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ವಿಡಿಯೊ ಕಾನ್ಫರೆನ್‌್ಸಮೂಲಕ ಕೇಜ್ರಿವಾಲ್‌ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಕಸ್ಟಡಿಯನ್ನು ವಿಸ್ತರಿಸಿದರು.

ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಜ್ರಿವಾಲ್‌ ವಿರುದ್ಧ ಸಲ್ಲಿಸಿರುವ ಪೂರಕ ಆರೋಪ ಪಟ್ಟಿಯನ್ನು ಪರಿಗಣನೆಗೆ ತೆಗೆದುಕೊಳ್ಳಬೇಕೆ ಎಂಬುದರ ಕುರಿತು ನ್ಯಾಯಾಲಯವು ಪ್ರಸ್ತುತ ವಾದಗಳನ್ನು ಆಲಿಸುತ್ತಿದೆ.

RELATED ARTICLES

Latest News