Friday, July 11, 2025
Homeಇದೀಗ ಬಂದ ಸುದ್ದಿಪಾಲಿಕೆಗಳ ನೌಕರರ ಕಷ್ಟಗಳನ್ನೂ ಕೇಳಿಸಿಕೊಳ್ಳಿ : ರಾಜ್ಯ ಸರ್ಕಾರಕ್ಕೆ HDK ಆಗ್ರಹ

ಪಾಲಿಕೆಗಳ ನೌಕರರ ಕಷ್ಟಗಳನ್ನೂ ಕೇಳಿಸಿಕೊಳ್ಳಿ : ರಾಜ್ಯ ಸರ್ಕಾರಕ್ಕೆ HDK ಆಗ್ರಹ

Listen to the problems of the corporations employees : HDK

ಬೆಂಗಳೂರು, ಜು. 10-ಕೇವಲ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು. ಅನಿರ್ದಿಷ್ಟ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ ನೌಕರರ ಕಷ್ಟಕಾರ್ಪಣ್ಯ ಆಲಿಸುವ ಹೃದಯವಂತಿಕೆಯನ್ನು ರಾಜ್ಯ ಸರ್ಕಾರ ತೋರಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು,ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ತುರ್ತು ಗಮನ ಹರಿಸಬೇಕು. ಆದರೆ, ಶಾಸಕರ ಬಂಡಾಯ ತಣಿಸುವುದಕ್ಕೆ ಕಾಂಗ್ರೆಸ್ ಪಕ್ಷದಲ್ಲಿನ ಬೇಗುದಿಯನ್ನು ಕಡಿಮೆ ಮಾಡಲು ಸಿಎಂ, ಡಿಸಿಎಂ ಅವರಿಗೆ ಸಮಯವೇ ಸಾಲುತ್ತಿಲ್ಲ ಎಂದು ಟೀಕಿಸಿದ್ದಾರೆ.

ಇದನ್ನು ನಾನು ತಪ್ಪೆನ್ನಲಾರೆ. ಆದರೆ, ಪಾಲಿಕೆ ನೌಕರರು ಎಸಗಿದ ಪಾಪವೇನು? ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ವಿಳಂಬ ಧೋರಣೆ ಯಾಕೆ? ಸ್ವತಃ ಮುಖ್ಯಮಂತ್ರಿ ಅವರೇ ಮಾನವೀಯ ನೆಲೆಗಟ್ಟಿನಲ್ಲಿ ತಕ್ಷಣವೇ ಕ್ರಮ ವಹಿಸುತ್ತಿಲ್ಲ, ಏಕೆ? ಹಗಲಿರುಳು ಜನರಿಗಾಗಿ ದುಡಿಯುವ ಅವರ ಬದುಕಿಗೂ ಗ್ಯಾರಂಟಿ ಕೊಡಬೇಕಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಪಾಲಿಕೆಗಳ ನಿತ್ಯದ ಯಾವ ಕೆಲಸ ಕಾರ್ಯಗಳು ನಿಲ್ಲಬಾರದು. ಸ್ವಚ್ಛತೆ, ನೈರ್ಮಲ್ಯ ಹಾಗೂ ಸ್ಥಳೀಯ ಆಡಳಿತದ ದೃಷ್ಟಿಯಿಂದ ಪಾಲಿಕೆಗಳು ಮಹತ್ವ ಹೊಂದಿವೆ ಎಂಬುದನ್ನು ಆಡಳಿತಗಾರರು ಮರೆಯಬಾರದು ಎಂದು ಅವರು ತಿಳಿಸಿದ್ದಾರೆ.

RELATED ARTICLES

Latest News