ಮೈಸೂರಿನಿಂದ ಚೆನ್ನೈಗೆ ಜೀವಂತ ಹೃದಯ ರವಾನೆ

ಮೈಸೂರು, ಜ.22- ಮೈಸೂರಿನ ಬಿಜಿಎಸ್ ಅಪೋಲೊ ಆಸ್ಪತ್ರೆಯಿಂದ ಚೆನ್ನೈಗೆ ಜೀವಂತ ಹೃದಯ ರವಾನೆ ಮಾಡಲಾಗಿದೆ.24 ವರ್ಷದ ದರ್ಶನ್ ಅಂಗಾಂಗ ದಾನ ಮಾಡಿದ್ದಾರೆ. ಅಪೋಲೊ ಆಸ್ಪತ್ರೆಯಿಂದ ಗ್ರೀನ್ ಕಾರಿಡಾರ್ ವ್ಯವಸ್ಥೆಯಲ್ಲಿ ಆಂಬುಲೆನ್ಸ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಜೀವಂತ ಹೃದಯವನ್ನು ರವಾನಿಸಲಾಯಿತು.

ನಂತರ ಅಲ್ಲಿಂದ ಚೆನ್ನೈಗೆ ಏರ್ ಲಿಫ್ಟ್ ಮಾಡುವ ಮೂಲಕ ಚೆನ್ನೈನ ಎಂ.ಜಿ.ಎಂ ಹೆಲ್ತ್‍ಕೇರ್‍ಗೆ ಜೀವಂತ ಹೃದಯ ರವಾನೆ ಮಾಡಲಾಗಿದೆ.ಜ.18ರಂದು ರಸ್ತೆ ಅಪಘಾತವಾಗಿ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಅಪಘಾತದಿಂದ ಯುವಕನ ಮೆದುಳು ನಿಷ್ಕ್ರಿಯವಾಗಿತ್ತು. ಈ ಹಿನ್ನೆಲೆಯಲ್ಲಿ ಯುವಕನ ಕುಟುಂಬದವರು ಅಂಗಾಂಗ ದಾನಕ್ಕೆ ಮುಂದಾದರು. ಮೈಸೂರಿನ ಬೆಳವಾಡಿಯಲ್ಲಿ ಎಲೆಕ್ಟ್ರಿಕಲ್ ಕೆಲಸ ನಿರ್ವಹಿಸುತ್ತಿದ್ದರು.

ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ದರ್ಶನ್‍ಗೆ ಎರಡು ತಿಂಗಳ ಮಗು ಇತ್ತು. ದರ್ಶನ್ ನಿಧನದ ನಂತರ ಆರು ಜನರ ಬಾಳಿಗೆ ಬೆಳಕಾಗಿದ್ದಾರೆ.

Sri Raghav

Admin