Tuesday, February 27, 2024
Homeರಾಷ್ಟ್ರೀಯರಾಮ ಮಂದಿರ ಉದ್ಘಾಟನಾಗೆ ಅಡ್ವಾಣಿ-ಜೋಶಿ ಗೈರು

ರಾಮ ಮಂದಿರ ಉದ್ಘಾಟನಾಗೆ ಅಡ್ವಾಣಿ-ಜೋಶಿ ಗೈರು

ಅಯೋಧ್ಯೆ,ಡಿ.19- ಶ್ರೀರಾಮ ಮಂದಿರದ ಕನಸು ಕಂಡಿದ್ದ, ದೇಶಾದ್ಯಂತ ಅದಕ್ಕಾಗಿ ಹೋರಾಟ ಮಾಡಿದ್ದ ಬಿಜೆಪಿ ಹಿರಿಯರಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಅದೃಷ್ಟವಿಲ್ಲ.ಈ ಇಬ್ಬರು ಹಿರಿಯ ನಾಯಕರ ಆರೋಗ್ಯ ಮತ್ತು ವಯಸ್ಸಿನ ಕಾರಣ ಜನವರಿ ತಿಂಗಳು ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ.

ಇಬ್ಬರೂ ಹಿರಿಯರು ಮತ್ತು ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು ಬರದಂತೆ ವಿನಂತಿಸಲಾಗಿತ್ತು. ಅದಕ್ಕೆ ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ರಾಮಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.ಜನವರಿ 22ರಂದು ನಡೆಯಲಿರುವ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಭರದ ಸಿದ್ಧತೆಗಳು ನಡೆಯುತ್ತಿದ್ದು, ಜನವರಿ 15ರೊಳಗೆ ಸಿದ್ಧತೆಗಳು ಪೂರ್ಣಗೊಳ್ಳಲಿವೆ ಮತ್ತು ಪ್ರಾಣ ಪ್ರತಿಷ್ಠಾದ ಪೂಜೆಯು ಜನವರಿ 16 ರಿಂದ ಪ್ರಾರಂಭವಾಗಲಿದೆ ಮತ್ತು ಜನವರಿ 22ರವರೆಗೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಖುದ್ದು ಆಹ್ವಾನಿಸಲು ಮೂವರು ಸದಸ್ಯರ ತಂಡ ರಚಿಸಲಾಗಿದೆ. ಸಮಾರಂಭದಲ್ಲಿ ಆರು ಪ್ರಾಚೀನ ಮಠಗಳ ಶಂಕರಾಚಾರ್ಯರು, ಸರಿಸುಮಾರು 150 ಋಷಿಗಳು, 4,000 ಸಂತರು ಮತ್ತು 2,200 ಇತರ ಗಣ್ಯ ಅತಿಥಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

Read more: ರಾಮ ಮಂದಿರ ಉದ್ಘಾಟನಾಗೆ ಅಡ್ವಾಣಿ-ಜೋಶಿ ಗೈರು

ವಾರಣಾಸಿಯ ಕಾಶಿ ವಿಶ್ವನಾಥ ಮತ್ತು ಜಮ್ಮುವಿನ ವೈಷ್ಣೋದೇವಿ ದೇಗುಲದಂತಹ ಪ್ರಮುಖ ದೇವಾಲಯಗಳ ಮುಖ್ಯಸ್ಥರಿಗೆ ಆಮಂತ್ರಣಗಳನ್ನು ನೀಡಲಾಗಿದೆ. ಆಧ್ಯಾತ್ಮಿಕ ನಾಯಕ ದಲೈ ಲಾಮಾ, ಕೇರಳದ ಮಾತಾ ಅಮೃತಾನಂದಮಯಿ ಮತ್ತು ಯೋಗ ಗುರು ಬಾಬಾ ರಾಮ್‍ದೇವ್ ಸೇರಿದಂತೆ ವಿವಿಧ ಧಾರ್ಮಿಕ ಮತ್ತು ಸಾಂವಿಧಾನಿಕ ಸಂಸ್ಥೆಗಳ ಪ್ರತಿನಿಧಿಗಳನ್ನು ಆಹ್ವಾನಿಸಲಾಗಿದೆ.

ಗೋವಾ ವಿಮೋಚನೆ ವೇಳೆ ಹುತಾತ್ಮರಾದವರಿಗೆ ರಾಷ್ಟ್ರಪತಿ ಗೌರವ

ನಟರಾದ ರಜನಿಕಾಂತ್, ಅಮಿತಾಭ್ ಬಚ್ಚನ್, ಮಾಧುರಿ ದೀಕ್ಷಿತ್, ರಾಮಾಯಣದ ನಟ ಅರುಣ್ ಗೋವಿಲ್, ಚಲನಚಿತ್ರ ನಿರ್ಮಾಪಕ ಮಧುರ್ ಭಂಡಾರ್ಕರ್, ಮತ್ತು ಪ್ರಮುಖ ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ, ಅನಿಲ್ ಅಂಬಾನಿ, ಖ್ಯಾತ ಚಿತ್ರಕಲಾವಿದ ವಾಸುದೇವ್ ಕಾಮತ್, ಇಸ್ರೋ ನಿರ್ದೇಶಕ ನೀಲೇಶ್ ದೇಸಾಯಿ ಸಹ ಭಾಗವಹಿಸುವ ನಿರೀಕ್ಷೆಯಿದೆ.

ಜನವರಿ 24ರಿಂದ ಮುಂದಿನ 48 ದಿನಗಳವರೆಗೆ ಹಿಂದೂ ಆಚರಣೆಗಳು ಮತ್ತು ಸಂಪ್ರದಾಯಗಳ ಪ್ರಕಾರ ಮಂಡಲ ಪೂಜೆ ನಿಗದಿಪಡಿಸಲಾಗಿದೆ. ಜನವರಿ 23ರಂದು ಭಕ್ತಾದಿಗಳಿಗೆ ದೇವಾಲಯವು ತೆರೆಯಲಿದೆ. ಅಯೋಧ್ಯೆಯ ಮೂರು ಸ್ಥಳಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು, ವಿವಿಧ ಮಠಗಳು, ದೇವಾಲಯಗಳು ಮತ್ತು ಭಕ್ತರಿಗೆ ಮನೆಗಳು ನೀಡುವ 600 ಕೊಠಡಿಗಳೊಂದಿಗೆ ಸಾಕಷ್ಟು ವಸತಿ ಸೌಕರ್ಯ ಒದಗಿಸುವ ಬಗ್ಗೆ ರೈ ಭರವಸೆ ನೀಡಿದ್ದಾರೆ. ರಾಮ ಜನ್ಮಭೂಮಿ ಸಂಕೀರ್ಣದೊಳಗೆ ರಾಮ್ ಕಥಾ ಕುಂಜ್ ಕಾರಿಡಾರ್ ನಿರ್ಮಿಸಲು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರಿಡಾರ್ ಭಗವಾನ್ ರಾಮನ ಜೀವನದ 108 ಮಹತ್ವದ ಘಟನೆಗಳನ್ನು ವಿವರಿಸುವ ಕೋಷ್ಟಕವನ್ನು ಪ್ರದರ್ಶಿಸಲಿದೆ.

RELATED ARTICLES

Latest News