Tuesday, March 18, 2025
Homeರಾಜ್ಯಶೂನ್ಯ ಬಡ್ಡಿದರದಲ್ಲಿ 5 ಲಕ್ಷದವರೆಗೆ ರೈತರಿಗೆ ಸಾಲ ನೀಡುವ ಕುರಿತು ಸಿಎಂ ಜತೆ ಚರ್ಚಿಸಿ ನಿರ್ಧಾರ...

ಶೂನ್ಯ ಬಡ್ಡಿದರದಲ್ಲಿ 5 ಲಕ್ಷದವರೆಗೆ ರೈತರಿಗೆ ಸಾಲ ನೀಡುವ ಕುರಿತು ಸಿಎಂ ಜತೆ ಚರ್ಚಿಸಿ ನಿರ್ಧಾರ : ಸಚಿವ ರಾಜಣ್ಣ

loans of up to Rs 5 lakh to farmers at zero interest

ಬೆಂಗಳೂರು,ಮಾ.18-ಸಹಕಾರಿ ಸಂಘಗಳ ಮೂಲಕ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 3 ಲಕ್ಷದಿಂದ 5 ಲಕ್ಷದವರೆಗೆ ಸಾಲ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಚರ್ಚಿಸಿ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಪ್ರತಾಪ್‌ಸಿಂಹ ನಾಯಕ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ವಿಧಾನಸಭೆ ಚುನಾವಣೆಗೂ ಮುನ್ನ ನಾವು ರಾಜ್ಯದ ಜನತೆಗೆ 3ರಿಂದ 5 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವುದಾಗಿ ಭರವಸೆ ಕೊಟ್ಟಿದ್ದೆವು. ಅದರಂತೆ ನಮಗೆ ಜನ ಆಶೀರ್ವಾದ ಮಾಡಿದ್ದಾರೆ. ನುಡಿದಂತೆ ನಡೆದುಕೊಳ್ಳಲು ನಮ ಸರ್ಕಾರ ಬದ್ಧವಾಗಿದೆ ಎಂದು ಆಶ್ವಾಸನೆ ಕೊಟ್ಟರು.

ಪ್ರತಿಯೊಬ್ಬ ರೈತರಿಗೆ 3ರಿಂದ 5 ಲಕ್ಷದವರೆಗೆ ಸಾಲ ನೀಡಲು ಸಾಧ್ಯವಾಗುವುದಿಲ್ಲ. ಜಮೀನು ಲಭ್ಯತೆ, ಸಾಲ ಮರು ಪಾವತಿಸು ವ ರೈತರ ಸಾಮರ್ಥ್ಯ ಇವೆಲ್ಲವನ್ನೂ ನೋಡಿ ಸಾಲದ ಪ್ರಮಾಣವನ್ನು ನಿಗದಿಪಡಿಸಲಾಗುತ್ತದೆ. ಆದರೂ ನಾವು ಜನತೆಗೆ ನೀಡಿದ ಭರವಸೆಯನ್ನು ಈಡೇರಿಸುತ್ತೇವೆ ಎಂದು ಭರವಸೆ ನೀಡಿದರು.

ರೈತರಿಗೆ 10 ಲಕ್ಷದವರೆಗೂ ಸಾಲ ನೀಡುವ ಗುರಿ ಹೊಂದಲಾಗಿದೆ. ನಮಗೆ ನಬಾರ್ಡ್‌ನಿಂದ ನಿರೀಕ್ಷಿತ ಪ್ರಮಾಣದಲ್ಲಿ ಸಾಲಸೌಲಭ್ಯ ಸಿಗುತ್ತಿಲ್ಲ. ಪ್ರಸಕ್ತ ವರ್ಷ 936 ಕೋಟಿ ಸಾಲದ ಪ್ರಮಾಣವನ್ನು ಕಡಿತ ಮಾಡಲಾಗಿದೆ. ನಮಗೆ ಹೆಚ್ಚಿನ ಸಾಲವನ್ನು ನೀಡುವಂತೆ ಪ್ರಧಾನಿ, ಹಣಕಾಸು ಸಚಿವರು, ನಬಾರ್ಡ್‌ ಮುಖ್ಯಸ್ಥರಿಗೂ ಮನವಿ ಮಾಡಲಾಗಿದೆ ಎಂದರು.

ಕಳೆದ ವರ್ಷ ನಾವು ರೈತರಿಗೆ 5600 ಕೋಟಿ ಸಾಲವನ್ನು ನೀಡಿದ್ದೇವೆ. ನಬಾರ್ಡ್‌ನವರು ಸಾಲದ ಪ್ರಮಾಣವನ್ನು ಕಡಿತ ಮಾಡಿದ್ದರಿಂದ ನಮ ಗುರಿ ತಲುಪಲು ಸಾಧ್ಯವಾಗಿಲ್ಲ. ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದವರು ನಬಾರ್ಡ್‌ಗೆ ಸಾಲ ನೀಡುತ್ತಾರೆ. ಅವರು ಅಪೆಕ್‌್ಸ ಬ್ಯಾಂಕ್‌ಗೆ ನೀಡುತ್ತಾರೆ. ಅಪೆಕ್ಸ್ ಬ್ಯಾಂಕ್‌ನವರು ವಿವಿಧ ಸಂಘಸಂಸ್ಥೆಗಳಿಗೆ ನೀಡುತ್ತಾರೆ ಎಂದು ವಿವರಿಸಿದರು.

ರೈತರಿಗೆ ಅಲ್ಪಾವಧಿ, ಮಧ್ಯಾವಧಿ ಮತ್ತು ದೀರ್ಘಾವಧಿ ಸಾಲವನ್ನು ನೀಡಲಾಗುತ್ತದೆ. ಅವರ ಯಾವ ಬೆಳೆಗಳಿಗೆ ಎಷ್ಟು ಪ್ರಮಾಣದ ಸಾಲ ನೀಡಬೇಕು ಎಂಬುದನ್ನು ಅಧಿಕಾರಿಗಳು ತೀರ್ಮಾನಿಸುತ್ತಾರೆ. ಬೆಳೆಗಳ ಸಾಮರ್ಥ್ಯ ಅನುಗುಣವಾಗಿ ನಾವು ಸಾಲ ವಿತರಿಸುತ್ತೇವೆ. ಅಪೆಕ್‌್ಸ ಬ್ಯಾಂಕ್‌ ನೇರವಾಗಿ ಎಲ್ಲಿಯೂ ಸಾಲ ನೀಡುವುದಿಲ್ಲ. ಸಹಕಾರ ಸಂಸ್ಥೆಗಳ ಡೆಪಾಸಿಟ್‌ ಆಧಾರದ ಮೇಲೆ ಸಾಲ ವಿತರಣೆಯಾಗುತ್ತದೆ ಎಂದು ಹೇಳಿದರು.

ದುರಂತವೆಂದರೆ ನಮ ರೈತರು ತಮ ಸಾಲವನ್ನು ವಾಣಿಜ್ಯ ಬ್ಯಾಂಕ್‌ಗಳು ಇಲ್ಲ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಡೆಪಾಸಿಟ್‌ ಮಾಡುತ್ತಾರೆ. ಸಾಲ ಬೇಕೆಂದಾಗ ಸಹಕಾರಸಂಘಗಳಿಗೆ ಬರುತ್ತಾರೆ. ನಾವು ಸಂಪನೂಲಗಳ ಲಭ್ಯತೆ ನೋಡಿಕೊಂಡು ಸಾಲ ವಿತರಣೆ ಮಾಡುತ್ತೇವೆ. ಸಹಕಾರ ಸಂಘಗಳು ಇರುವುದೇ ರೈತರ ಹಿತ ಕಾಪಾಡಲು. ನಮ ಸರ್ಕಾರ ರೈತರಿಗೆ ಉತ್ತಮವಾದ ಸಾಲಸೌಲಭ್ಯ ಒದಗಿಸಲು ಬದ್ಧವಾಗಿದೆ ಎಂದು ರಾಜಣ್ಣ ಹೇಳಿದರು.

RELATED ARTICLES

Latest News