Friday, November 22, 2024
Homeರಾಜ್ಯಬಿಜೆಪಿಯ 10 ಹಾಲಿ ಸಂಸದರಿಗೆ ಟಿಕೆಟ್ ಡೌಟ್..?

ಬಿಜೆಪಿಯ 10 ಹಾಲಿ ಸಂಸದರಿಗೆ ಟಿಕೆಟ್ ಡೌಟ್..?

ಬೆಂಗಳೂರು,ಮಾ.7- ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಸುಮಾರು 10 ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆಯಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಬಿಜೆಪಿಯ ಹಿರಿಯ ನಾಯಕರು ನವದೆಹಲಿಯಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದು, ಶನಿವಾರ ಅಥವಾ ಭಾನುವಾರ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಸಭೆಯಲ್ಲಿ ರಾಜ್ಯ ನಾಯಕರಾದ ಯಡಿಯೂರಪ್ಪ, ಬಿ.ಎಲ್.ಸಂತೋಷ್, ಬಿ.ವೈ ವಿಜಯೇಂದ್ರ, ಆರ್.ಅಶೋಕ್, ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಸೇರಿ ಅನೇಕ ನಾಯಕರು ಭಾಗಿಯಾಗಿದ್ದಾರೆ. ಈ ಸಭೆಯಲ್ಲಿ ಹಾಲಿ ಸಂಸದರಿಗೆ ಟಿಕೆಟ್ ನೀಡುವ ಕುರಿತು ತಡರಾತ್ರಿವರೆಗೂ ಚರ್ಚೆ ನಡೆಸಿದ್ದಾರೆ.

ಎಲ್ಲಾ 28 ಲೋಕಸಭಾ ಸ್ಥಾನಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಒಟ್ಟಿಗೆ ಘೋಷಿಸಲಾಗುವುದು. ಬಿಜೆಪಿಗೆ 25 ಮತ್ತು ಜೆಡಿಎಸ್‍ಗೆ ಮೂರು ಸ್ಥಾನಗಳನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಇನ್ನೂ ಸಭೆಯಲ್ಲಿ ಕೆಲ ಕ್ಷೇತ್ರಗಳ ಅಭ್ಯರ್ಥಿಗಳನ್ನ ಬದಲಾಯಿಸುವ ಬಗ್ಗೆ ಚರ್ಚೆ ನಡೆದಿದೆ. ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ವಿಚಾರದಲ್ಲಿ ಅನುಸರಿಸಿದ ನಿಯಮವನ್ನ ಲೋಕಸಭಾ ಚುನಾವಣೆಗೆ ಅನುಸರಿಸಬೇಕು ಎನ್ನುವ ಚರ್ಚೆಯಾಗಿತ್ತು. ಈ ಚರ್ಚೆಯಿಂದಾಗಿ ಮೊದಲು 13 ಕ್ಷೇತ್ರಗಳಲ್ಲಿ ಬದಲಾವಣೆ ಮಾಡಬಹುದು ಎನ್ನಲಾಗಿತ್ತು. ಆದರೆ, ಇದೀಗ 5ರಿಂದ 10 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸುವ ಬಗ್ಗೆ ಚರ್ಚೆ ನಡೆದಿದೆ.

ಬೀದರ್ ಸಂಸದ ಭಗವಂತ ಖೂಬಾ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್, ಚಿತ್ರದುರ್ಗ ಸಂಸದ ಎ ನಾರಾಯಣಸ್ವಾಮಿ, ವಿಜಯಪುರ ಸಂಸದ ರಮೇಶ್ ಜಿಗಜಿಣಗಿ, ಬೆಳಗಾವಿ ಸಂಸದೆ ಮಂಗಳಾ ಅಂಗಡಿ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿಎಸ್‍ಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಕರ್ನಾಟಕದಿಂದ ಸ್ರ್ಪ ಸಬಹುದು ಎಂದು ಹೇಳಲಾಗುತ್ತಿದೆ. ಕೆಲವು ದಶಕಗಳ ಹಿಂದೆ ಪ್ರೊಬೇಷನರಿ ಅಧಿಕಾರಿಯಾಗಿ ಚಿಕ್ಕೋಡಿಯಲ್ಲಿ ಕೆಲಸ ಮಾಡಿದ ಅವರು ತಾತ ಮತ್ತು ಅಜ್ಜಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಆದರೆ ಅವರು ಕರ್ನಾಟಕದಿಂದ ಸ್ರ್ಪಧಿಸಲು ಉತ್ಸುಕರಾಗಿಲ್ಲ ಎಂದು ಹೇಳಲಾಗಿದೆ. ಅಭ್ಯರ್ಥಿಗಳ ಗೆಲುವಿನ ಅಂಶದ ಬಗ್ಗೆ ಸಮೀಕ್ಷೆ ನಡೆಸಲಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಸಂಪರ್ಕ ಕಳೆದುಕೊಂಡ ಸಂಸದರಿಗೆ ಟಿಕೆಟ್ ನೀಡುವುದನ್ನು ಪಕ್ಷ ವಿರೋಧಿಸುತ್ತಿದೆ. ಸಂಸದರಾಗಿ ಅವರ ಸಾಧನೆಯನ್ನೂ ಪಕ್ಷದ ನಾಯಕತ್ವ ಪರಿಗಣಿಸಿದೆ.

ಈ ಅಂಶಗಳ ಹೊರತಾಗಿ ಪಕ್ಷವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಬಲ್ಲ ಹೊಸ ಮುಖಗಳನ್ನು ಪರಿಗಣಿಸಲಾಗುವುದು. ನಾವು ಮುಂದಿನ ಪೀಳಿಗೆಯ ನಾಯಕರನ್ನು ರೂಪಿಸುತ್ತಿದ್ದೇವೆ. ಕೆಲವು ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರು ತಮ್ಮ ಸಂಸದರ ಕಾರ್ಯವೈಖರಿಯಿಂದ ಸಂತುಷ್ಟರಾಗಿಲ್ಲ. ಇದನ್ನು ಕೂಡ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಸಂಭವನೀಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ಬೆಳಗಾವಿ – ಜಗದೀಶ್ ಶೆಟ್ಟರ್
ಚಿಕ್ಕೋಡಿ – ಅಣ್ಣಾ ಸಾಹೇಬ್ ಜೊಲ್ಲೆ
ಬೀದರ್ – ಭಗವಂತ್ ಖೂಬಾ
ಕಲಬುರಗಿ – ಉಮೇಶ್ ಜಾಧವ್
ವಿಜಯಪುರ – ರಮೇಶ್ ಜಿಗಜಿಣಗಿ
ಬಾಗಲಕೋಟೆ – ಪಿಸಿ ಗದ್ದಿಗೌಡರ್
ರಾಯಚೂರು – ರಾಜಾ ಅಮರೇಶ್ವರ್ ನಾಯಕ / ಬಿವಿ ನಾಯಕ
ಕೊಪ್ಪಳ – ಸಂಗಣ್ಣ ಕರಡಿ / ಡಾ ಬಸವರಾಜ್ ಕ್ಯಾವಟರ್
ಧಾರವಾಡ – ಪ್ರಹ್ಲಾದ್ ಜೋಶಿ
ಹಾವೇರಿ – ಬಸವರಾಜ ಬೊಮ್ಮಾಯಿ/ಸಂದೀಪ್ ಪಾಟೀಲ್
ಬಳ್ಳಾರಿ – ಬಿ.ಶ್ರೀರಾಮುಲು
ದಕ್ಷಿಣ ಕನ್ನಡ – ನಳೀನ್‍ಕುಮಾರ್ ಕಟೀಲ್/ಬ್ರಿಜೇಶ್ ಚೌತಲ
ಉತ್ತರಕನ್ನಡ – ಅನಂತ ಕುಮಾರ್ ಹೆಗ್ಡೆ, ವಿಶ್ವೇಶ್ವರ ಹೆಗಡೆ ಕಾಗೇರಿ
ಉಡುಪಿ – ಚಿಕ್ಕಮಗಳೂರು – ಶೋಭಾ ಕರಂದ್ಲಾಜೆ
ಶಿವಮೊಗ್ಗ – ಬಿ.ವೈ.ರಾಘವೇಂದ್ರ
ಚಿತ್ರದುರ್ಗ- ಎ.ನಾರಾಯಣಸ್ವಾಮಿ/ಮಾದಾರ ಚೆನ್ನಯ್ಯ ಸ್ವಾಮೀಜಿ
ದಾವಣಗೆರೆ – ಜಿಎಂ ಸಿದ್ದೇಶ್ವರ್/ಎಂ.ಪಿ.ರೇಣುಕಾಚಾರ್ಯ
ತುಮಕೂರು – ವಿ.ಸೋಮಣ್ಣ
ಬೆಂಗಳೂರು ಉತ್ತರ – ಡಿ.ವಿ.ಸದಾನಂದಗೌಡ/ಸಪ್ತಗಿರಿ ಗೌಡ
ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ
ಬೆಂಗಳೂರು ಸೆಂಟ್ರಲ್ – ಜೈಶಂಕರ್ / ಪಿ.ಸಿ.ಮೋಹನ್
ಬೆಂಗಳೂರು ಗ್ರಾಮಾಂತರ – ಡಾ ಸಿಎನ್ ಮಂಜುನಾಥ್
ಚಿಕ್ಕಬಳ್ಳಾಪುರ – ಡಾ.ಕೆಸುಧಾಕರ್ / ಅಲೋಕ್ ವಿಶ್ವನಾಥ್
ಮೈಸೂರು – ಪ್ರತಾಪ್ ಸಿಂಹ
ಚಾಮರಾಜನಗರ – ಡಾ.ಮೋಹನ್ ಕುಮಾರ್/ಎಸ್ ಬಾಲರಾಜ್

RELATED ARTICLES

Latest News