ಲೋಕಸಭಾ ಚುನಾವಣೆ : ರಾಜ್ಯದಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ

ಬೆಂಗಳೂರು, ಜೂ.2- ಪ್ರಸಕ್ತ ಲೋಕಸಭಾ ಚುನಾವಣೆ ಮತ ಎಣಿಕೆ ಮಂಗಳವಾರ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಸಂಜೆಯಿಂದ ಜೂ. 5ರ ಮಧ್ಯರಾತ್ರಿಯವರೆಗೆ ಮತ ಎಣಿಕೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮದ್ಯ ಮಾರಾಟ ನಿಷೇಧಿಸಲಾಗಿದೆ. ಮತ ಎಣಿಕೆ ಕೇಂದ್ರಗಳ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರ ವ್ಯವಸ್ಥೆಯನ್ನು ಬದಲಿ ರಸ್ತೆಗಳಿಗೆ ವರ್ಗಾಯಿಸಲಾಗಿದೆ. ಭಾರಿ ಬಿಗಿ ಬಂದೋಬಸ್ತ್‌ನಲ್ಲಿ ಮತ ಎಣಿಕೆ ನಡೆಯಲಿದ್ದು, ಈಗಾಗಲೇ ಮತ ಎಣಿಕೆ ಮಾಡುವ ಸಿಬ್ಬಂದಿಗೆ ಆಯಾ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ತರಬೇತಿ ನೀಡಲಾಗಿದೆ.ವಿದ್ಯುನಾನ ಮತಯಂತ್ರವನ್ನು ಬಳಕೆ ಮಾಡಿರುವುದರಿಂದ ಸಂಜೆ ವೇಳೆಗೆ ಎಲ್ಲಾ 28 ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ನಗರದ ಸೇಂಟ್‌ ಜೋಸೆಫ್‌ ಕಾಲೇಜಿನಲ್ಲಿ ನಡೆದರೆ ಬೆಂಗಳೂರು ದಕ್ಷಿಣ ಕ್ಷೇತ್ರದ ಮತ ಎಣಿಕೆಯು ಜಯನಗರದ ಎಸ್‌‍.ಎಸ್‌‍.ಎಂ.ಆರ್‌.ವಿ ಕಾಲೇಜಿನಲ್ಲಿ ಹಾಗೂ ಬೆಂಗಳೂರು ಕೇಂದ್ರ ಕ್ಷೇತ್ರದ ಮತ ಎಣಿಕೆಯು ಮೌಂಟ್‌ ಕಾರ್ಮಲ್‌ ಕಾಲೇಜಿನಲ್ಲಿ ನಡೆಸಲಾಗುತ್ತದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ರಾಮನಗರದ … Continue reading ಲೋಕಸಭಾ ಚುನಾವಣೆ : ರಾಜ್ಯದಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ