ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ

Spread the love

ನವದೆಹಲಿ, ಮೇ 26- ಮುಂಬರುವ 2024ರ ಲೋಕಸಭೆ ಚುನಾವಣೆಗೆ ಪೂರ್ವ ತಯಾರಿಯಾಗಿ ತಮ್ಮ ಕ್ಷೇತ್ರಗಳಲ್ಲಿ ದುರ್ಬಲವಾಗಿರುವ ಬೂತ್‍ಗಳನ್ನು ತಳಮಟ್ಟದಿಂದ ಬಲಪಡಿಸುವಂತೆ ಸಂಸದರು ಮತ್ತು ಶಾಸಕರಿಗೆ ಬಿಜೆಪಿ ಸೂಚಿಸಿದೆ. ಪಕ್ಷ ದುರ್ಬಲವಾಗಿರುವ ದೇಶದ ಸುಮಾರು 74,000 ಚುನಾವಣಾ ಬೂತ್‍ಗಳನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ಚುಟುವಟಿಕೆಗಳನ್ನು ಹೆಚ್ಚಿಸಲು ಬಿಜೆಪಿ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ.

2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಪಕ್ಷದ ಉನ್ನತ ಮಟ್ಟದ ನಾಯಕರು, ಕೆಲವು ಹಿರಿಯ ಸಚಿವರು ಹಾಗೂ ಬೂತ್ ಉಸ್ತುವಾರಿಗಳ ಸಭೆ ನಡೆಯಿತು. ಪಕ್ಷದ ಪ್ರತಿಯೊಬ್ಬ ಸಂಸದನಿಗೆ 100 ಬೂತ್‍ಗಳ ಉಸ್ತುವಾರಿ ವಹಿಸುವಂತೆ ಹಾಗೂ ಪಕ್ಷದ ಪ್ರತಿಯೊಬ್ಬ ಶಾಸಕ 25 ಬೂತ್‍ಗಳಲ್ಲಿ ಕಾರ್ಯಚುಟುವಟಿಕೆಗಳನ್ನು ಚುರುಕುಗೊಳಿಸುವಂತೆ ಬಿಜೆಪಿ ಸೂಚಿಸಿದೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರು ಪ್ರತಿನಿಸುವ 140ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಕೇಂದ್ರ ಸಚಿವರು ಭೇಟಿ ನೀಡಬೇಕು ಹಾಗೂ ವಿವಿಧ ಸಾಮಾಜಿಕ ಯೋಜನೆಗಳ ಫಲಾನುಭವಿ ಗಳೊಂದಿಗೆ ಸಂವಾದ ನಡೆಸಬೇಕು. ಸಚಿವರು ತಮಗೆ ನಿಗದಿಪಡಿಸಿರುವ ಪ್ರತಿ ಕ್ಷೇತ್ರದಲ್ಲಿ ಮೂರು ದಿನ ತಂಗಿದ್ದು, ಪಕ್ಷದ ಸಂಘಟನೆಯನ್ನು ಬಲಪಡಿಸಬೇಕು ಎಂದು ಸೂಚಿಸಲಾಗಿದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕಾರಣಿ ಸದಸ್ಯರೊಬ್ಬರು ತಿಳಿಸಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ 8ನೇ ವರ್ಷಾಚರಣೆಯ ಸಿದ್ಧತೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ದೇಶದ ಸಮಾರು 74,000 ಬೂತ್‍ಗಳಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವು ಕಾರ್ಯಚುಟುವಟಿಕೆಗಳನ್ನು ಕೈಗೊಳ್ಳಲು ಪಕ್ಷವು 4 ಸದಸ್ಯರ ಕಾರ್ಯಪಡೆಯನ್ನು ರಚನೆ ಮಾಡಿದೆ. ಸಂಘಟನೆಯ ಮೂಲಕ ತನ್ನ ಜನಪ್ರತಿನಿಗಳ ಸಂಖ್ಯೆಯನ್ನು ಹೆಚ್ಚಿಸಲು ಬಿಜೆಪಿ ಮುಂದಾಗಿದೆ.

ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಸಮಿತಿಗಳನ್ನು ರಚಿಸಲಾಗಿದೆ. ಪ್ರಚಾರದ ಮೂಲಕ ಚುನಾವಣೆ ಸಿದ್ಧತೆಗಳನ್ನು ಆರಂಭಿಸಲಾಗುತ್ತದೆ. ವಿವಿಧ ರಾಜ್ಯಗಳ ಪ್ರತಿನಿಧಿಗಳನ್ನು ಒಂದು ಕಡೆ ಸೇರಿಸಿ, ಅಲ್ಲಿಂದಲೇ ಪ್ರಚಾರಕ್ಕೆ ಚಾಲನೆ ನೀಡಲಾಗುತ್ತದೆ ಎಂಬ ಬಿಜೆಪಿಯ ಉನ್ನತ ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣಾ ಪ್ರಚಾರಕ್ಕೆ ದೇಶಾದ್ಯಂತ ಸಂಸದರು, ಶಾಸಕರನ್ನು ಬಿಜೆಪಿ ನಿಯೋಜನೆ ಮಾಡಲಿದೆ. ಪಕ್ಷದ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ಸಹ ಈ ಪ್ರಚಾರ ಕಾರ್ಯವನ್ನು ಮುನ್ನಡೆಸಲಿದ್ದಾರೆ. ಒಟ್ಟು ಮೂರು ಹಂತದಲ್ಲಿ ಈ ಪ್ರಚಾರ ಕಾರ್ಯ ನಡೆಸಲಾಗುತ್ತದೆ. ಮೊದಲ ಹಂತದಲ್ಲಿ ಪಕ್ಷ ಸಮಿತಿಯನ್ನು ರಚನೆ ಮಾಡಲಿದೆ. ಎರಡನೇ ಹಂತದಲ್ಲಿ ಬೂತ್ ಮಟ್ಟದಲ್ಲಿ ಸಂಘಟನೆಯನ್ನು ಸಶಕ್ತಗೊಳಿಸುವ ಕಾರ್ಯಚಟುವಟಿಕೆಗಳನ್ನು ಸಕ್ರಿಯಗೊಳಿಸಲಾಗುತ್ತದೆ.

ಮೂರನೇ ಹಂತದಲ್ಲಿ ಸಾರ್ವಜನಿಕ ಸಮಾವೇಶಗಳನ್ನು ನಡೆಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಆಡಳಿತ, ಸಾಧನೆಯನ್ನು ಜನರಿಗೆ ಮುಟ್ಟಿಸುವ ಕಾರ್ಯ ನಡೆಯುತ್ತದೆ.

ಮತ್ತೊಂದೆಡೆ ರಾಷ್ಟ್ರಪತಿ ಹಾಗೂ ರಾಜ್ಯಸಭೆ ಚುನಾವಣೆ ಪೂರ್ವಭಾವಿಯಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರು ಸುೀರ್ಘ ಸಭೆ ನಡೆಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಕಾರವ ಜುಲೈ 25ರಂದು ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಜುಲೈನಲ್ಲಿ ನಡೆಯುವ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಹಾಗೂ ಪ್ರತಿಪಕ್ಷವು ಪ್ರತ್ಯೇಕವಾಗಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ. ಮುಂಬರುವ 2024 ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಈ ಗೆಲುವು ದಿಕ್ಸೂಚಿ ಎಂದು ವಿಶ್ಲೇಷಿಸಲಾಗುತ್ತಿದೆ.

Facebook Comments