ಲೋಕಸಭೆ ಚುನಾವಣೆ : ವಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ

ಬೆಂಗಳೂರು, ಮಾ.10-ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಾರದೊಳಗೆ ಅಂತಿಮಗೊಳ್ಳಲಿದೆ. ಕ್ಷೇತ್ರ ಹಂಚಿಕೆಯಾದ ಬೆನ್ನಲ್ಲೇ ಪಕ್ಷದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಿರಂತರವಾಗಿ ಲೋಕಸಭಾ ಕ್ಷೇತ್ರವಾರು ಸಭೆ ನಡೆಸಿ ಚುನಾವಣೆ ಸಿದ್ಧತೆ ಬಗ್ಗೆ ಪಕ್ಷದ ಮುಖಂಡರಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಅಲ್ಲದೆ, ಆಯಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಎನ್‍ಡಿಎ ಮೈತ್ರಿಕೂಟ ಸೇರಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ … Continue reading ಲೋಕಸಭೆ ಚುನಾವಣೆ : ವಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ