Saturday, May 4, 2024
Homeರಾಜಕೀಯಲೋಕಸಭೆ ಚುನಾವಣೆ : ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸದ್ಯದಲ್ಲೇ ಹೈಕಮಾಂಡ್‍ಗೆ ರವಾನೆ

ಲೋಕಸಭೆ ಚುನಾವಣೆ : ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸದ್ಯದಲ್ಲೇ ಹೈಕಮಾಂಡ್‍ಗೆ ರವಾನೆ

ಬೆಂಗಳೂರು,ಅ.8- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಸಚಿವರುಗಳ ನೇತೃತ್ವದ ವೀಕ್ಷಕರ ಸಮಿತಿ ಬಹುತೇಕ ಜಿಲ್ಲೆಗಳಲ್ಲಿ ಸಭೆ ನಡೆಸಿ ಅಭಿಪ್ರಾಯ ಕ್ರೂಢಿಕರಿಸಿದ್ದು, ಒಂದೆರಡು ವಾರಗಳಲ್ಲಿ ಕೆಪಿಸಿಸಿ ಸಮಗ್ರ ವರದಿಯನ್ನು ಕ್ರೂಢೀಕರಿಸಿ ಹೈಕಮಾಂಡ್‍ಗೆ ರವಾನಿಸುವ ನಿರೀಕ್ಷೆಗಳಿವೆ.

ಪ್ರತಿಯೊಂದು ಲೋಕಸಭಾ ಕ್ಷೇತ್ರಕ್ಕೂ ಸಚಿವರುಗಳ ತಂಡವನ್ನು ನಿಯೋಜಿಸಲಾಗಿದೆ. ಈಗಾಗಲೇ ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಂಡ್ಯ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವೀಕ್ಷಕರ ಸಭೆಗಳು ನಡೆದಿವೆ.

ಕೆಲವು ಜಿಲ್ಲೆಗಳಲ್ಲಿ ಆಕಾಂಕ್ಷಿಗಳು ಬಹಿರಂಗವಾಗಿ ಹಕ್ಕು ಪ್ರತಿಪಾದಿಸಿದ್ದಾರೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಂಭವನೀಯ ಆಕಾಂಕ್ಷಿಗಳ ಪಟ್ಟಿಯನ್ನು ಕೆಪಿಸಿಸಿಗೆ ರವಾನಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಮುಖ್ಯಮಂತ್ರಿಯವರಿಗೆ ಮತ್ತು ಅಧ್ಯಕ್ಷರಿಗೆ ಬಿಡಲಾಗಿದೆ. ವಿಧಾನಸಭಾ ಚುನಾವಣಾ ಮಾದರಿಯಲ್ಲೇ ಲೋಕಸಭೆಗೂ ಮುಂಚಿತವಾಗಿಯೇ ಅಭ್ಯರ್ಥಿಗಳನ್ನು ಘೋಷಿಸಲು ಕಸರತ್ತುಗಳು ನಡೆಯುತ್ತಿವೆ.

ಈಗಾಗಲೇ ಕೆಲವರು ತಮಗೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದು ಲಾಬಿ ನಡೆಸುತ್ತಿದ್ದಾರೆ. ಇನ್ನೂ ಕೆಲವು ಕಡೆ ಪ್ರಭಾವಿ ಆಕಾಂಕ್ಷಿಗಳೇ ಸ್ಪರ್ಧೆಗೆ ನಿರಾಸಕ್ತಿ ತೋರಿಸುತ್ತಿದ್ದಾರೆ. ಶತಾಯಗತಾಯ 20 ಕ್ಷೇತ್ರಗಳನ್ನು ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್ ಅಳೆದೂ ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮುಂದಾಗಿವೆ.

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ, ಸಾವಿನ ಸಂಖ್ಯೆ 2,000 ಕ್ಕೆ ಏರಿಕೆ

ಜೆಡಿಎಸ್, ಬಿಜೆಪಿಯ ಮೈತ್ರಿ ಕಾಂಗ್ರೆಸ್‍ಗೆ ಲಾಭವಾಗಲಿದೆ. ಮೈತ್ರಿ ಪಕ್ಷದಲ್ಲೇ ಅಪಸ್ವರಗಳು ಕಾಂಗ್ರೆಸ್‍ನ ಮತದ ಕ್ರೂಢೀಕರಣವನ್ನು ಹೆಚ್ಚಿಸಲಿವೆ ಎಂಬ ಅಂದಾಜುಗಳಿವೆ. ಹೀಗಾಗಿ ನಿರೀಕ್ಷೆಗೂ ಮೀರಿ ಗೆಲುವು ಸಾಧಿಸುವ ಉಮೇದಿನಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಆದರೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಹೆಚ್ಚು ಕಡಿಮೆಯಾದರೆ ಅದು ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ಸಚಿವರ ನೇತೃತ್ವದ ವೀಕ್ಷಕರ ವರದಿ ಪಕ್ಷದ ಆಂತರಿಕ ಸಮೀಕ್ಷೆ, ಜಿಲ್ಲಾ ಸಮಿತಿಗಳ ಅಭಿಪ್ರಾಯ ಹಾಗೂ ಆಕಾಂಕ್ಷಿಗಳ ಪಕ್ಷ ಸಂಘಟನೆಯ ಪಾಲ್ಗೊಳ್ಳುವಿಕೆ ಮತ್ತು ಸೈದ್ಧಾಂತಿಕ ಬದ್ಧತೆಯನ್ನು ಓರಗೆ ಹಚ್ಚಲು ನಿರ್ಧರಿಸಲಾಗಿದೆ.

ನಾಳೆ ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿಯಿಂದ ರಾಜ್ಯವನ್ನು ಪ್ರತಿನಿಧಿಸುವ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪಟಾಕಿ ದುರಂತ : ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ

ನಾಳೆ ನಡೆಯುವ ಸಭೆ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದು, ಕಾಂಗ್ರೆಸ್ ಘಟಕಗಳಿಗೆ ಸ್ಪಷ್ಟ ಮಾರ್ಗಸೂಚಿಗಳನ್ನು ರವಾನಿಸಲಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಈ ತಿಂಗಳ ಅಂತ್ಯದಲ್ಲಿಯೇ ಅಭ್ಯರ್ಥಿಗಳ ಆಯ್ಕೆಯಲ್ಲಿ ಸ್ಪಷ್ಟತೆ ಬರಲಿದ್ದು, ನವೆಂಬರ್ ಅಥವಾ ಡಿಸೆಂಬರ್ ವೇಳೆಗೆ ಅಧಿಕೃತವಾಗಿ ಪಟ್ಟಿ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ.

RELATED ARTICLES

Latest News