Saturday, July 27, 2024
Homeರಾಜ್ಯಲೋಕಸಭಾ ಚುನಾವಣೆ : ರಾಜ್ಯದಲ್ಲಿ ಮೊದಲ ದಿನ 25 ಅಭ್ಯರ್ಥಿಗಳಿಂದ 29 ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ : ರಾಜ್ಯದಲ್ಲಿ ಮೊದಲ ದಿನ 25 ಅಭ್ಯರ್ಥಿಗಳಿಂದ 29 ನಾಮಪತ್ರ ಸಲ್ಲಿಕೆ

ಬೆಂಗಳೂರು,ಮಾ.29- ಪ್ರಸಕ್ತ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾದ ನಿನ್ನೆ ಸಂಸದರಾದ ಡಿ.ಕೆ.ಸುರೇಶ್, ಪ್ರಜ್ವಲ್ ರೇವಣ್ಣ ಹಾಗೂ ಬಿಜೆಪಿ ಅಭ್ಯರ್ಥಿ ಬ್ರಿಜೇಸ್ ಚೌತಲ ಸೇರಿದಂತೆ 25 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.

ಡಿ.ಕೆ.ಸುರೇಶ್‍ರವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರು ಸ್ಪರ್ಧೆಗಿಳಿದಿದ್ದರೆ ಪ್ರಜ್ವಲ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿ ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನವೇ 23 ಪುರುಷ ಹಾಗೂ ಇಬ್ಬರು ಮಹಿಳಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.25 ಅಭ್ಯರ್ಥಿಗಳಿಂದ ಒಟ್ಟು 29 ನಾಮಪತ್ರಗಳನ್ನು ಸಲ್ಲಿಸಲಾಗಿದೆ.

ಬಿಎಸ್‍ಪಿ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಜೆಡಿಯು, ಜನತಾಪಕ್ಷ, ಯಂಗ್‍ಸ್ಟಾರ್, ಎಂಪೋರ್ಮೆಂಟ್ ಪಕ್ಷಗಳಿಂದ ತಲಾ ಒಬ್ಬರು ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದರೆ, ಕರ್ನಾಟಕ ರಾಷ್ಟ್ರ ಸಮಿತಿಯಿಂದ 7 ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಪಕ್ಷದಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾದಿಂದ ಒಬ್ಬರು ಹಾಗೂ ಪಕ್ಷೇತರವಾಗಿ ಒಬ್ಬ ಮಹಿಳಾ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಸ್ವತಂತ್ರ್ಯವಾಗಿ 7 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.

RELATED ARTICLES

Latest News