ಲೋಕಾಯುಕ್ತರ ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ : ಯಡಿಯೂರಪ್ಪ

Social Share

ಬೆಂಗಳೂರು, ಮಾ.4- ಬಿಜೆಪಿ ಶಾಸಕ ವಿರುಪಾಕ್ಷಪ್ಪ ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರು ಲಂಚ ಸ್ವೀಕರಿಸಿದ ಆರೋಪದ ಪ್ರಕರಣದಲ್ಲಿ ಯಾರೂ ಮಧ್ಯಪ್ರವೇಶ ಮಾಡುತ್ತಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನ ಪರಿಮಿತಿಯಲ್ಲಿ ಯಾವ ಯಾವ ಕ್ರಮಗಳಾಗಬೇಕೋ ಆ ಕ್ರಮಗಳಾಗಲಿವೆ ಎಂದು ಈಗಾಗಲೇ ಮುಖ್ಯಮಂತ್ರಿ ಹೇಳಿರುವುದರಿಂದ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

ರಷ್ಯಾದಲ್ಲಿ ಸ್ಪುಟ್ನಿಕ್-ವಿ ಕೋವಿಡ್ ಲಸಿಕೆ ಶೋಧಿಸಿದ ವಿಜ್ಞಾನಿಯ ಹತ್ಯೆ

ಲೋಕಾಯುಕ್ತರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರವಾದ ತನಿಖೆಯಾಗುತ್ತಿದ್ದು, ಈ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆ ಇಲ್ಲ. ಈಗಾಗಲೇ ಮುಖ್ಯಮಂತ್ರಿಗಳು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹಾಗೂ ಯಾರನ್ನೂ ರಕ್ಷಿಸುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ನಾನು ಬೇರೆ ಏನು ಮಾತನಾಡುವುದಿಲ್ಲ ಎಂದರು.

ಲಂಚ ಪ್ರಕರಣ ಕುರಿತಂತೆ ನಿಷ್ಪಕ್ಷಪಾತ ತನಿಖೆಯಾಗಲಿದೆ. ಲೋಕಾಯುಕ್ತಕ್ಕೆ ಮರು ಚೈತನ್ಯ ನೀಡಿರುವುದೇ ಭ್ರಷ್ಟಾಚಾರ ತಡೆಯಲು ಎಂದು ಮುಖ್ಯಮಂತ್ರಿ ಈಗಾಗಲೇ ಹೇಳಿದ್ದರು.

Lokayukta, probe, MLA Madal Virupakshappa, bs yediyurappa,

Articles You Might Like

Share This Article