Friday, January 31, 2025
Homeರಾಜ್ಯ7 ಸರ್ಕಾರಿ ಅಧಿಕಾರಿಗಳ ಮನೆ-ಕಚೇರಿ ಮೇಲೆ ಲೋಕಾಯುಕ್ತರ ದಾಳಿ

7 ಸರ್ಕಾರಿ ಅಧಿಕಾರಿಗಳ ಮನೆ-ಕಚೇರಿ ಮೇಲೆ ಲೋಕಾಯುಕ್ತರ ದಾಳಿ

Lokayukta raids homes and offices of seven government officials

ಬೆಂಗಳೂರು,ಜ.31– ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಏಳು ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ದೂರಿನ ಹಿನ್ನಲೆಯಲ್ಲಿ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳ 25ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ.

ಬೆಂಗಳೂರು, ಬೆಳಗಾವಿಯಲ್ಲಿ ತಲಾ ಇಬ್ಬರು ಮತ್ತು ಚಿತ್ರದುರ್ಗ, ರಾಯಚೂರು ಮತ್ತು ಬಾಗಲಕೋಟೆಯಲ್ಲಿ ತಲಾ ಒಬ್ಬರ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.

ಬೆಳಗಾವಿ ದಕ್ಷಿಣ ಉಪನೋಂದಣಾಧಿಕಾರಿ ಕಚೇರಿಯ ಪ್ರಥಮ ವಿಭಾಗದ ಸಹಾಯಕ ಸಂಜಯ್‌ ಮಾಂಡೆಡ್‌, ಚಿತ್ರದುರ್ಗದ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ವ್ಯವಸ್ಥಾಪಕ ಶಶಿಧರ್‌, ಬಾಗಲಕೋಟೆಯ ಹೊಲಗೇರಿ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಹಿರೇಮಠ,ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಹೆಬ್ಬಾಳ ವಿಭಾಗದ ಎಂಜಿನಿಯರಿಂಗ್‌ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಮಾಧವರಾವ್‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್‌ ಇಲಾಖೆ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್‌‍, ರಾಯಚೂರು ಜಿಲ್ಲಾ ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ನರಸಿಂಗರಾವ್‌ ಗುಜ್ಜರ್‌, ಪಶುಸಂಗೋಪನಾ ಇಲಾಖೆ.

ಸಂಜಯ್‌ ಅಣ್ಣಪ್ಪ ದುರ್ಗಣ್ಣನವರ್‌ಗೆ ಬಲೆ ಬಿದ್ದ ಅಧಿಕಾರಿಗಳಾಗಿದ್ದಾರೆ.ತಿಂಗಳ ಕೊನೆಯಲ್ಲಿ ಚಳಿ ಕಡಿಮೆಯಾಗುತ್ತಿದ್ದಂತೆ ಏಕಕಾಲಕ್ಕೆ ಮುಂಜಾನೆ ಭ್ರಷ್ಟರಿಗೆ ಲೋಕ ಬಿಸಿ ಮುಟ್ಟಿಸಿದೆ.

RELATED ARTICLES

Latest News