Monday, October 14, 2024
Homeರಾಜ್ಯಆಸ್ತಿ ವಿವರ ಸಲ್ಲಿಸದ ಶಾಸಕರು, ಪರಿಷತ್ ಸದಸ್ಯರ ಪಟ್ಟಿ ಬಹಿರಂಗಪಡಿಸಿದ ಲೋಕಾಯುಕ್ತ

ಆಸ್ತಿ ವಿವರ ಸಲ್ಲಿಸದ ಶಾಸಕರು, ಪರಿಷತ್ ಸದಸ್ಯರ ಪಟ್ಟಿ ಬಹಿರಂಗಪಡಿಸಿದ ಲೋಕಾಯುಕ್ತ

ಬೆಂಗಳೂರು,ನ.30- ಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ ಬಹಿರಂಗಡಿಸಿದೆ. ತಕ್ಷಣವೇ ಕರ್ನಾಟಕ ಲೋಕಾಯುಕ್ತ ಕಾಯ್ದೆ ಪ್ರಕಾರ ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸದಿದ್ದರೆ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಲಾಗಿದೆ.

ಆಯ್ಕೆಯಾದ ಮೂರು ತಿಂಗಳೊಳಗೆ ಸದಸ್ಯರು ತಮ್ಮ ಆಸ್ತಿ ವಿವರನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮ ಇದೆ. ಆದರೆ ಶಾಸಕರು ಹಾಗೂ ಪರಿಷತ್ ಸದಸ್ಯರು ಇದುವರೆಗೂ ಲೋಕಾಯುಕ್ತ ಕಚೇರಿಗೆ ಆಸ್ತಿ ವಿವರವನ್ನು ಸಲ್ಲಿಸಿಲ್ಲ.

ಇದೀಗ ಅಂತಿಮವಾಗಿ ಲೋಕಾಯುಕ್ತ ಆಸ್ತಿ ವಿವರ ಸಲ್ಲಿಸದ ಶಾಸಕರುಗಳ ಹೆಸರುಗಳ ಪಟ್ಟಿಯನ್ನು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ಕಳೆದ ಬಾರಿ ಸಚಿವರಾಗಿದ್ದ ಶ್ರೀರಾಮುಲು, ಕೆ.ಸಿ.ನಾರಾಯಣಗೌಡ, ಎಸ್.ಅಂಗಾರ ಆಸ್ತಿ ವಿವರ ಸಲ್ಲಿಸದೇ ನಿಮಯ ಉಲ್ಲಂಘಿಸಿದ್ದರು. ಈ ಬಾರಿ ಸಚಿವರಾದ ರಹೀಂ ಖಾನ್, ಕೆ.ಎನ್.ರಾಜಣ್ಣ, ಜಮೀರ್ ಅಹಮದ್ ಖಾನ್, ರಾಮಲಿಂಗ ರೆಡ್ಡಿ, ಕೆ.ಎಚ್.ಮುನಿಯಪ್ಪ ಅವರು ಸಹ ಆಸ್ತಿ ವಿವರ ಸಲ್ಲಿಸಿಲ್ಲ. ಹೀಗೆ ಕಳೆದ ವಿಧಾನಸಭೆ ಅವಯ 81 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಸದೇ ಲೋಪ ಎಸಗಿದ್ದಾರೆ.

ಈ ಬಾರಿ ಅಂದರೆ 2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಅವಧಿಯ 51 ಮಂದಿ ಶಾಸಕರ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ. ಹಾಗೇ 21 ವಿಧಾನ ಪರಿಷತ್ ಸದಸ್ಯರು ಸಹ ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲ. ಇನ್ನು ಸಚಿವ ಮಧು ಬಂಗಾರಪ್ಪ ಹಾಗೂ ಮಾಜಿ ಸಚಿವ ಮುರಿಗೇಶ್ ನಿರಾಣಿ ಸೇರಿದಂತೆ ಹಲವು ಗಡುವು ಮುಗಿದ ಅಂದರೆ ಜೂನ್ 30 ರ ಬಳಿಕ ಆಸ್ತಿ ವಿವರ ಸಲ್ಲಿಕೆ ಮಾಡಿದ್ದಾರೆ. ಅವಧಿ ಮುಗಿದ ಬಳಿಕ 10 ಶಾಸಕರು, ಓರ್ವ ವಿಧಾನ ಪರಿಷತ್ ಸದಸ್ಯ ಆಸ್ತಿ ವಿವರ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲಾ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಅವರು ಜೂನ್ 30 ಡೆಡ್‍ಲೈನ್ ನೀಡಿದ್ದರು. ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಅವರು ಎಲ್ಲಾ ಪಕ್ಷದ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮೌಖಿಕ ಸೂಚನೆ ನೀಡಿದ್ದರು.

ಕಳೆದ ಬಾರಿ ಆಸ್ತಿ ವಿವರ ಸಲ್ಲಿಸಿದ್ದೇವೆಂದು ಸುಮ್ಮನಿರುವಂತಿಲ್ಲ. ಪುನರ್ ಆಯ್ಕೆಯಾದ ಶಾಸಕರು ಮತ್ತೊಮ್ಮೆ ಆಸ್ತಿ ವಿವರ ಸಲ್ಲಿಸಬೇಕು. ಮೊದಲ ಬಾರಿ ಆಯ್ಕೆಯಾದ ಶಾಸಕರು ಕೂಡ ಆಸ್ತಿ ವಿವರ ಸಲ್ಲಿಸಬೇಕು. ಒಂದು ವೇಳೆ ಜೂ.30ರೊಳಗೆ ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸದಿದ್ದರೆ ಶಿಸ್ತು ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.

RELATED ARTICLES

Latest News