Wednesday, September 11, 2024
Homeರಾಜ್ಯಎಚ್‍ಡಿಕೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ರಾಜ್ಯಪಾಲರಿಗೆ ಎಸ್‍ಐಟಿ ಮನವಿ

ಎಚ್‍ಡಿಕೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ರಾಜ್ಯಪಾಲರಿಗೆ ಎಸ್‍ಐಟಿ ಮನವಿ

ಬೆಂಗಳೂರು,ಆ.20- ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದ ಆರೋಪಗಳ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವ ಬೆನ್ನಲ್ಲೇ ಇದೀಗ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ದೊಡ್ಡ ಗಂಡಾಂತರ ಎದುರಾಗಿದೆ.

ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಕಾನೂನು ಬಾಹಿರವಾಗಿ ಸಾಯಿ ವೆಂಕಟೇಶ್ವರ ಮಿನರಲ್ಸ್ ಎಂಬ ಅಸ್ತಿತ್ವದಲ್ಲೇ ಇಲ್ಲದ ಕಂಪನಿಗೆ ಗಣಿಗಾರಿಕೆ ನಡೆಸಲು ನಿಯಮ ಮೀರಿ ಜಮೀನು ನೀಡಿದ್ದರ ಆರೋಪ ಎದುರಿಸುತ್ತಿದ್ದಾರೆ. ಇದೀಗ ತನಿಖೆಯನ್ನು ಪೂರ್ಣಗೊಳಿಸಿರುವ ಲೋಕಾಯುಕ್ತ ವಿಶೇಷ ತನಿಖಾ ತಂಡ(ಎಸ್‍ಐಟಿ) ಕುಮಾರಸ್ವಾಮಿ ವಿರುದ್ದ ದೋಷಾರೋಪ ಪಟ್ಟಿ(ಚಾರ್ಜ್‍ಶೀಟ್) ಸಲ್ಲಿಸಲು ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸಿದೆ.

ಈ ಹಿಂದೆ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ರಾಜ್ಯಪಾಲರಿಗೆ ಕೋರಿದ್ದ ಪ್ರಸ್ತಾವನೆಗೆ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅನುಮತಿ ನೀಡಿಲ್ಲ ಎಂಬ ಆರೋಪ ಎದುರಾಗಿತ್ತು. ಇದೀಗ ಎಸ್‍ಐಟಿ ಎಚ್‍ಡಿಕೆ ವಿರುದ್ದ ಚಾಜ್‍ಶೀಟ್ ಸಲ್ಲಿಸಲು ರಾಜ್ಯಪಾಲರ ಸಮ್ಮತಿ ಕೋರಿ ದಾಖಲೆಗಳ ಸಮೇತ ಪತ್ರ ಬರೆದಿರುವುದು ಹೊಸ ಬೆಳವಣಿಗೆಯಾಗಿದೆ.

ಏನಿದು ಪ್ರಕರಣ?: ಎಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ, 1988ರಡಿ ಕಾನೂನು ಕ್ರಮಕ್ಕಾಗಿ, ಕರ್ನಾಟಕ ಲೋಕಾಯುಕ್ತದ ವಿಶೇಷ ತನಿಖಾ ತಂಡದ (ಎಸ್‍ಐಟಿ) ಎಡಿಜಿಪಿ ಚಂದ್ರಶೇಖರ್ ಖುದ್ದಾಗಿ ಪತ್ರವನ್ನು ರಾಜ್ಯಪಾಲರಿಗೆ ಬರೆದು ಅನುಮತಿ ನೀಡಲು ಕೋರಿದ್ದಾರೆ. ಕಳೆದ 2023, ನವೆಂಬರ್ 21ರಂದು ಅನುಮತಿ ಕೇಳಿತ್ತು. ಆದರೆ ರಾಜ್ಯಪಾಲರಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅಕ್ರಮ ಗಣಿಕಾರಿಗೆ ಸಂಬಂ„ಸಿದ ಘಟನೆ ಇದಾಗಿದ್ದು, ಕುಮಾರಸ್ವಾಮಿಯವರು ಈಗ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್‍ಡಿಎ ಸರಕಾರದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ.

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಎಂಬ ಅಸ್ತಿತ್ವದಲ್ಲಿಲ್ಲದ ಸಂಸ್ಥೆಗೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ 6.10.2007ರಂದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಭಾವಿಹಳ್ಳಿ, ತಿಮ್ಮಪ್ಪಗುಡಿಯಲ್ಲಿ 550 ಎಕರೆ ಜಾಗವನ್ನು ಗಣಿಗಾರಿಕೆಗೆ ಅಕ್ರಮವಾಗಿ ಗುತ್ತಿಗೆಗೆ ನೀಡಿದ ಆರೋಪವಿದೆ. ಗುತ್ತಿಗೆ ನೀಡುವಾಗ ಮಿನರಲ್ಸ್ ಕನ್ಸಿಷನ್ ನಿಯಮಗಳ, ನಿಯಮ 59(2)ನ್ನು ಉಲ್ಲಂಸಿ ಮಂಜೂರು ಮಾಡಿದ್ದರು.

ಎಚ್.ಡಿ.ಕುಮಾರಸ್ವಾಮಿ ಅವರು ಎಂಸಿಆರ್ ನಿಯಮಾವಳಿಗಳನ್ನು ಉಲ್ಲಂಸಿ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅ„ಕಾರಿಗಳ ಜೊತೆಗೂಡಿ, ಸುಳ್ಳು ದಾಖಲೆ ಸೃಷ್ಟಿಸಿದ ವಿನೋದ್ ಗೋಯಲ್‍ಗೆ ಸಂಡೂರು ತಾಲ್ಲೂಕಿನ ಎನ್‍ಇಬಿ ರೇಂಜ್‍ನಲ್ಲಿನ 550 ಎಕರೆ ಭೂಮಿ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣದಲ್ಲಿ ಎಸ್‍ಐಟಿ ಅ„ಕಾರಿಗಳು ವಿನೋದ್ ಗೋಯಲ್ ಅವರನ್ನು ಪ್ರಥಮ ಆರೋಪಿಯನ್ನಾಗಿ ಮಾಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರನ್ನು ಎರಡನೇ ಆರೋಪಿಯಾಗಿಸಿದ್ದಾರೆ. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯ ದರ್ಶಿ ಕೆ.ಜಯಚಂದ್ರ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಬಿ.ಟಿ.ಜವರೇಗೌಡ ಮೂರು ಮತ್ತು ನಾಲ್ಕನೇ ಆರೋಪಿಗಳನ್ನಾಗಿ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಅಕ್ರಮದ ಕುರಿತಾಗಿ FIR ದಾಖಲಾಗಿ ಲೋಕಾಯುಕ್ತದ ಎಸ್‍ಐಟಿಯು ತನಿಖೆ ಕೈಗೆತ್ತಿಕೊಂಡಿತ್ತು. ತನಿಖೆ ನಂತರ ಕುಮಾರಸ್ವಾಮಿ ತಪ್ಪೆಸಗಿದ್ದಾರೆ ಎಂದು ಲೋಕಾಯುಕ್ತಕ್ಕೆ ಮನವರಿಕೆಯಾಗಿ ಚಾರ್ಜ್‍ಶೀಟ್ ಹಾಕಲಾಗಿದೆ. ನಂತರ ಲೋಕಾಯುಕ್ತ ಎಡಿಜಿಪಿಯವರು ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್‍ಗೆ ಅನುಮತಿ ಕೇಳಿದ್ದಾರೆ ಎನ್ನಲಾಗಿದೆ.

ಕುಮಾರಸ್ವಾಮಿ ಅವರನ್ನು ಪ್ರಾಸಿಕ್ಯೂಷನ್‍ಗೆ ಒಳಪಡಿಸಲು ಲೋಕಾಯುಕ್ತ ಅನುಮತಿ ಕೋರಿರುವ ಪ್ರಕರಣದಲ್ಲಿ ಲಾಭ ಪಡೆದಿದ್ದ ಕಂಪೆನಿಯೇ ಬೋಗಸ್ ಆಗಿತ್ತು ಎಂಬುದನ್ನು ಎಸ್‍ಐಟಿ ಪತ್ತೆ ಹಚ್ಚಿದೆ. ಎಚ್.ಡಿ ಕುಮಾರಸ್ವಾಮಿಯವರು ಅಕ್ರಮವಾಗಿ ಸಹಾಯ ಮಾಡಿದ್ದಾರೆ ಎಂಬ ಆರೋಪ ಬಂದಿರುವುದು ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಲಿಮಿಟೆಡ್ ಎಂಬ ಕಂಪೆನಿ. ಅದರ ಮಾಲೀಕ ಎಂದು ಹೇಳಿಕೊಂಡು ಸೋಮನಾಥ್.ವಿ ಸಕರೆ ಎಂಬ ವ್ಯಕ್ತಿ 2004ರ ಏ.17ರಂದು ಗಣಿ ಇಲಾಖೆಗೆ ಅರ್ಜಿ ಸಲ್ಲಿಸುತ್ತಾರೆ. ತಮ್ಮ ಕಂಪನಿ ಗಣಿಗಾರಿಕೆ ಮತ್ತು ಉಕ್ಕು ಉತ್ಪಾದನೆಯಲ್ಲಿ ತೊಡಗಿರುವುದಾಗಿಯೂ ಅವರಿಗೆ ಸಂಡೂರು ತಾಲೂಕಿನ ಸದರಿ ಪ್ರದೇಶದಲ್ಲಿ 550 ಎಕರೆ ಭೂಮಿಯನ್ನು ಗಣಿಗಾರಿಕೆಗಾಗಿ ಮಂಜೂರು ಮಾಡಬೇಕೆಂದು ಅರ್ಜಿ ಸಲ್ಲಿಸಿದ್ದರು.

ಗಣಿಗಾರಿಕೆ ಹಗರಣದ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ತನ್ನ ವರದಿಯಲ್ಲಿ ಈ ಅಂಶಗಳನ್ನು ವಿವರವಾಗಿ ಉಲ್ಲೇಖಿಸಿದೆ. ತನಿಖಾ„ಕಾರಿ ಡಾ. ಯು.ವಿ.ಸಿಂಗ್ ಎದುರು ಈ ಬೋಗಸ್ ಕಂಪನಿಯ ಮಾಲೀಕ ತಾನು ಗಣಿಗಾರಿಕೆ ಮತ್ತು ಉಕ್ಕು ಕೈಗಾರಿಕೆಯಲ್ಲಿರುವ ಉದ್ಯಮಿ ಅಲ್ಲವೆಂದೂ ಮಹಾರಾಷ್ಟ್ರದಲ್ಲಿ ಗುತ್ತಿಗೆದಾರನೆಂದೂ ತಪ್ಪೋಪ್ಪಿಕೊಂಡಿದ್ದ.

ಅನುಮತಿ ಏಕೆ ಅಗತ್ಯ?:
ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ಕ್ಕೆ 2018ರಲ್ಲಿ ತಿದ್ದುಪಡಿ ತರಲಾಗಿದೆ. ಅಲ್ಲಿಯವರೆಗೂ, ಹುದ್ದೆಯಿಂದ ನಿರ್ಗಮಿಸಿದ ಚುನಾಯಿತ ಪ್ರತಿನಿ„ಗಳು ಅಥವಾ ನಿವೃತ್ತ ಅ„ಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಆರೋಪಪಟ್ಟಿ ಸಲ್ಲಿಸಲು ಪೂರ್ವಾನುಮತಿ ಅಗತ್ಯವಿರಲಿಲ್ಲ. 2018ರ ತಿದ್ದುಪಡಿಯ ಪ್ರಕಾರ, ಅಪರಾಧ ಹಿಂದೆಯೇ ನಡೆದಿದ್ದರೂ ತಿದ್ದುಪಡಿಯ ಬಳಿಕ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಸಕ್ಷಮ ಪ್ರಾಧಿಕಾರದ ಅನುಮತಿ ಅಗತ್ಯ. ಈ ಕಾರಣಕ್ಕಾಗಿಯೇ ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಸಲಾಗಿದೆ.

RELATED ARTICLES

Latest News