Thursday, April 3, 2025
Homeಜಿಲ್ಲಾ ಸುದ್ದಿಗಳು | District Newsಲವ್ ಫೇಲ್ಯೂರ್ : ಮನನೊಂದ ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಲವ್ ಫೇಲ್ಯೂರ್ : ಮನನೊಂದ ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ನೆಲಮಂಗಲ,ಮಾ.20-ಪ್ರೇಮ ವೈಫಲ್ಯಕ್ಕೆ ಮನನೊಂದು ಬಿಹಾರ ಮೂಲದ ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೋನುಕುಮಾರ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಅರಶಿನಕುಂಟೆಯಲ್ಲಿ ಹಾಸ್ಟೆಲ್ನಲ್ಲಿದ್ದುಕೊಂಡು ಸನ್ಫ್ಲವರ್ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದನು.

ಸೋನುಕುಮಾರ್ ಯುವತಿಯನ್ನು ಪ್ರೀತಿಸುತ್ತಿದ್ದನು ಎನ್ನಲಾಗಿದೆ. ಪ್ರೇಮ ವೈಫಲ್ಯದಿಂದ ಮನನೊಂದು ಈತ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಇಂದು ಬೆಳಿಗ್ಗೆ ಸ್ನೇಹಿತ ಕಾಲೇಜಿಗೆ ಹೋಗಲು ಸೋನುಕುಮಾರ್ ರೂಮ್ ಬಳಿ ಬಂದಾಗ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದೆ.

ತಕ್ಷಣ ಆತ ಪೊಲೀಸರಿಗೆ ತಿಳಿಸಿದ್ದಾನೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತನ ಪೊಷಕರಿಗೆ ವಿಷಯ ತಿಳಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News