ವಾಯುಭಾರ ಕುಸಿತ, ರಾಜ್ಯದಲ್ಲಿ ಇನ್ನೆರಡು ದಿನ ಮಳೆ

Social Share

ಬೆಂಗಳೂರು,ನ.22- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಬೆಳಗ್ಗೆಯಿಂದಲೇ ತುಂತುರು ಮಳೆಯಾಗುತ್ತಿದೆ.

ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ ಮಳೆ ಮತ್ತೆ ಆರಂಭವಾಗಿದೆ. ಬೆಳಗ್ಗೆಯಿಂದಲೇ ಪದೇ ಪದೇ ಹಗುರ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ನಗರ ಪ್ರದೇಶಗಳಲ್ಲಿ ದೈನಂದಿನ ಕೆಲಸಗಳಿಗೆ ತೆರಳುವವರು ಕೊಡೆ, ಜರ್ಕಿನ್‍ಗಳ ಮೊರೆ ಹೋಗಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಆಗಾಗ್ಗೆ ತಂಪಾದ ಮೇಲ್ಮೈ ಗಾಳಿ ಬೀಸುತ್ತಿರುವುದರಿಂದ ಚಳಿಯ ಪ್ರಮಾಣವೂ ಹೆಚ್ಚಾಗಿದೆ. ರಾಜ್ಯದ ದಕ್ಷಿಣ ಒಳನಾಡಿನ ಹಾಗೂ ಪೂರ್ವ ಭಾಗದ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆಗಳಿವೆ.

ಗಡಿ ವಿವಾದ ಕೆದಕಿದ ಮಹಾರಾಷ್ಟ್ರ : ಸಿಎಂ ಬೊಮ್ಮಾಯಿ ಆಕ್ರೋಶ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಮೇಲೆ ಹೆಚ್ಚಿನ ರೀತಿ ಆಗುವುದಿಲ್ಲ. ಆಂಧ್ರಪ್ರದೇಶದ ಕರಾವಳಿ ಕಡೆಗೆ ಚಲಿಸುತ್ತಿರುವುದರಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಲಕ್ಷಣಗಳಿಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ವಾಯುಭಾರ ಕುಸಿತದ ತೀವ್ರತೆ ಒಂದೆರಡು ದಿನದಲ್ಲಿ ದುರ್ಬಲವಾಗಲಿದೆ. ಗುರುವಾರದ ಸಂಜೆ ವೇಳೆಗೆ ಮಳೆ ಕಡಿಮೆಯಾಗಲಿದೆ. ಇಂದಿನಿಂದ ಆರಂಭವಾಗಿರುವ ತುಂತುರು ಮಳೆಯು ನಾಳೆ ಹೆಚ್ಚಾಗುವ ಸಂಭವವಿದೆ.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಅಗ್ನಿಪರೀಕ್ಷೆಯಾಗಲಿರುವ ಪೂರ್ವಭಾವಿ ಸಭೆ

ಅಂದರೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

Low, Pressure, effect, Bengaluru, rains, three days,

Articles You Might Like

Share This Article